ಬೀಡಗಾನಹಳ್ಳಿಯಿಂದ ಆಂಧ್ರ ಪ್ರದೇಶದ ಗಡಿಯವರೆಗೆ ತ್ಯಾಜ್ಯ । ಸ್ವಚ್ಛ ಚಿಕ್ಕಬಳ್ಳಾಪುರ ಸುಂದರ ಚಿಕ್ಕಬಳ್ಳಾಪುರ ಪರಿಕಲ್ಪನೆ ಅಣಕ
ವೈಜ್ಞಾನಿಕವಾಗಿ ಹಸಿ ಹಾಗೂ ಒಣ ತ್ಯಾಜ್ಯ ವಿಲೇವಾರಿಯ ಮೂಲಕ ಉತ್ತಮ ಕಾರ್ಯನಿರ್ವಹಿಸುತ್ತಿರುವ ಚಿಕ್ಕಬಳ್ಳಾಪುರ ತ್ಯಾಜ್ಯ ಸಮಸ್ಯೆಯಿಂದ ಸಂಪೂರ್ಣವಾಗಿ ಮುಕ್ತವಾಗಿಲ್ಲ. ನಗರದ ಹೊರವಲಯ, ನಿರ್ಜನ ಪ್ರದೇಶ, ಹೆದ್ದಾರಿಯ ಇಕ್ಕೆಲ ಹಾಗೂ ರಾಜಕಾಲುವೆಗಳಲ್ಲಿ ತ್ಯಾಜ್ಯದ ರಾಶಿ ತುಂಬಿಕೊಂಡಿದ್ದು ‘ಸ್ವಚ್ಛ ಚಿಕ್ಕಬಳ್ಳಾಪುರ ಸುಂದರ ಚಿಕ್ಕಬಳ್ಳಾಪುರ’ ಪರಿಕಲ್ಪನೆಯನ್ನು ಅಣಕಿಸುತ್ತಿದೆ.ನಗರ ಹೊರವಲಯದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 44 ತ್ಯಾಜ್ಯ ವಿಲೇವಾರಿ ಕೇಂದ್ರವಾಗಿದ್ದು, ಗಬ್ಬು ನಾರುತ್ತಿದೆ. ತಾಲೂಕಿನ ಬೀಡಗಾನಹಳ್ಳಿಯಿಂದ ಆರಂಭವಾಗಿ ಬಾಗೇಪಲ್ಲಿ ತಾಲೂಕಿನ ನಂತರ ಆಂಧ್ರ ಪ್ರದೇಶದ ಗಡಿಯವರೆಗೆ ಚಾಚಿಕೊಂಡಿರುವ ಸುಮಾರು 50 ಕಿ.ಮೀ ಹೆದ್ದಾರಿ ವ್ಯಾಪ್ತಿಯ ಇಕ್ಕೆಲಗಳಲ್ಲಿ ತ್ಯಾಜ್ಯ ಎಲ್ಲೆಂದರಲ್ಲಿ ಹರಡಿಕೊಂಡಿದೆ.ರಸ್ತೆ ಬದಿ ಸಂಚರಿಸಲು ಸಾಧ್ಯವಾಗದಷ್ಟು ದುರ್ವಾಸನೆ ತುಂಬಿಕೊಂಡಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೆದ್ದಾರಿ ಬದಿಯಲ್ಲಿ ವಾಸವಿರುವ ಸಾರ್ವಜನಿಕರ ಗೋಳು ಹೇಳತೀರದು. ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಹೆದ್ದಾರಿ ಬದಿ ತ್ಯಾಜ್ಯದ ರಾಶಿ ಸಂಗ್ರಹವಾಗುತ್ತಿದ್ದು ದುರ್ನಾತದಲ್ಲಿ ಬದುಕಬೇಕಾಗಿದೆ. ಕಟ್ಟಡದ ಅವಶೇಷಗಳು, ಹಳೆಯ ಬಟ್ಟೆ, ಚಪ್ಪಲಿಗಳು, ಹಾಳಾದ ಗೃಹ ಬಳಕೆ ವಸ್ತುಗಳನ್ನು ತಂದು ಹೆದ್ದಾರಿ ಬದಿಯೇ ಸುರಿಯಲಾಗುತ್ತಿದ್ದು ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ.ತಾಲೂಕಿನ ಪೆರೇಸಂದ್ರ ಸೇತುವೆ ಕೆಳಗೆ ಟನ್‌ಗಟ್ಟಲೆ ಪ್ಲಾಸ್ಟಿಕ್ ವಸ್ತುಗಳು ಸಂಗ್ರಹವಾಗಿರುವುದು ಸಮಸ್ಯೆಯ ಗಂಭೀರತೆ ತೋರಿಸುತ್ತಿದ್ದು, ಈ ಮಾರ್ಗದಲ್ಲಿ ಸಾಗುವ ವಾಹನಗಳಿಗೆ ಮಾರಕವಾಗಿದೆ. ಹೆದ್ದಾರಿಯಲ್ಲಿ ಸಾಗುವಾಗ ಕಣ್ಣಿಗೆ ರಾಚುವಂತೆ ಕಂಡರೂ ತ್ಯಾಜ್ಯವನ್ನು ವಿಲೇವಾರಿ ಮಾಡುವ ಗೋಜಿಗೆ ನಗರಸಭೆಯಾಗಲಿ, ಸ್ಥಳೀಯ ಗ್ರಾಮ ಪಂಚಾಯಿತಿಗಳಾಗಲಿ, ಹೆದ್ದಾರಿ ಇಲಾಖೆಯಾಗಲಿ ಹೋಗಿಲ್ಲ. ಪ್ರತಿನಿತ್ಯವೂ ತ್ಯಾಜ್ಯ ರಾಶಿ ಹೆಚ್ಚಾಗುತ್ತಲೇ ಇದ್ದು ಸೊಳ್ಳೆಗಳ ಉತ್ಪತ್ತಿ ತಾಣವಾಗಿ ಸಾಂಕ್ರಾಮಿಕ ಕಾಯಿಲೆಗಳು ಹರಡುವ ಭೀತಿ ಎದುರಾಗಿದೆ.ಬೀದಿ ನಾಯಿಗಳು, ಬಿಡಾಡಿ ದನಗಳು ಕೊಳೆತ ತ್ಯಾಜ್ಯವನ್ನು ಪ್ಲಾಸ್ಟಿಕ್ ಕವರ್ ಸಹಿತವಾಗಿ ರಸ್ತೆಗೆ ಎಳೆದು ಬಿಸಾಡುತ್ತಿವೆ. ಪರಿಣಾಮ ಹೆದ್ದಾರಿಯಲ್ಲಿ ಸಾಗುವ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಮತ್ತು ಸರ್ವೀಸ್ ರಸ್ತೆಗಳಲ್ಲಿ ಪ್ಲಾಸ್ಟಿಕ್ ಬಾಟೆಲ್, ಕವರ್ ಹಾಗೂ ಮದ್ಯದ ಬಾಟೆಲ್‌ಗಳು ಬಿದ್ದಿವೆ.ಕೋಟ್.....
ಹೆದ್ದಾರಿ ಮಾತ್ರವಲ್ಲ ನಗರ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ತ್ಯಾಜ್ಯ ಸಮಸ್ಯೆ ಹೆಚ್ಚಾಗಿದೆ. ನಿರ್ಜನ ಪ್ರದೇಶ ಹಾಗೂ ಖಾಲಿ ನಿವೇಶನಗಳಲ್ಲಿ ತ್ಯಾಜ್ಯದ ರಾಶಿ ಸಂಗ್ರಹವಾಗಿದ್ದು ಗ್ರಾಮಗಳ ಅಂದಗೆಡಿಸುತ್ತಿದೆ.ಪ್ರತಿದಿನ ರಾತ್ರಿ ಹಾಗೂ ಬೆಳಗಿನ ಜಾವ ಮೂಟೆಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರುಪಯುಕ್ತ ವಸ್ತುಗಳನ್ನು ತಂದು ಹೆದ್ದಾರಿ ಬದಿ ಎಸೆದು ಹೋಗುತ್ತಾರೆ. ನಿತ್ಯವೂ ತ್ಯಾಜ್ಯ ಸುಟ್ಟುಹಾಕುವುದೇ ಕೆಲಸವಾಗಿದೆ.ಮೋಹನ್, ಹೊನ್ನೇನಹಳ್ಳಿ ನಿವಾಸಿ.ದೂಳಿನ ಸಮಸ್ಯೆ ಒಂದೆಡೆಯಾದರೆ ಕಸದ ಸಮಸ್ಯೆ ನಿತ್ಯವೂ ಬಾಧಿಸುತ್ತಿದೆ. ರಾತ್ರಿ ಬೆಳಗಿನ ಜಾವ ನಿದ್ದೆಗೆಟ್ಟು ಕಸ ಎಸೆಯುವವರನ್ನು ಕಾಯಬೇಕಾದ ಪರಿಸ್ಥಿತಿ ಬಂದಿದೆ. ಸ್ಥಳೀಯ ಆಡಳಿತದಿಂದ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಿ ಕಸ ಎಸೆಯುವವರಿಗೆ ದುಬಾರಿ ದಂಡ ವಿಧಿಸಬೇಕು.
ಹೆದ್ದಾರಿ ಬದಿ ತ್ಯಾಜ್ಯದ ರಾಶಿ ಬಿದ್ದು ಹಲವು ತಿಂಗಳು ಕಳೆದರೂ ಯಾರೂ ವಿಲೇವಾರಿಗೆ ಮುಂದಾಗಿಲ್ಲ. ನಗರಸಭೆ ಅಧಿಕಾರಿಗಳಿಗೆ ಹೇಳಿದರೆ ಸ್ಥಳೀಯ ಪಂಚಾಯಿತಿಗಳತ್ತ ಬೊಟ್ಟು ಮಾಡುತ್ತಾರೆ. ಪಂಚಾಯಿತಿಗಳು ಹೆದ್ದಾರಿ ಇಲಾಖೆ ತೋರಿಸಿ ನುಣುಚಿಕೊಳ್ಳುತ್ತಿವೆ.
ಸಿಕೆಬಿ-2ನಗರದ ವಾಪಸಂದ್ರ ಬಡಾವಣೆಯ ಹೊರವಲಯದ ಹೆದ್ದಾರಿ ಬದಿಯಲ್ಲಿ ರಾಜಕಾಲುವೆಗಳ ಹತ್ತಿರ ತಂದು ಸುರಿದಿರುವ ತ್ಯಾಜ್ಯ