ನಿರೀಕ್ಷೆಯಂತೆ ಬಿಜೆಪಿ ಮತ್ತೆ ಅಧಿಕಾರಕ್ಕೆ । ಬಹುಮತ ಇಲ್ಲದಿದ್ದರೂ ಸ್ಪರ್ಧೆ ಮಾಡಿದ ಕಾಂಗ್ರೆಸ್
ಚಿಕ್ಕಮಗಳೂರು ನಗರಸಭೆ ಅಧ್ಯಕ್ಷರಾಗಿ ಸುಜಾತಾ ಶಿವಕುಮಾರ್, ಉಪಾಧ್ಯಕ್ಷರಾಗಿ ಅನು ಮಧುಕರ್ ಆಯ್ಕೆಯಾಗಿದ್ದಾರೆ.
ನಗರಸಭೆಯಲ್ಲಿ ಗುರುವಾರ ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ದಲ್ಜೀತ್ ಕುಮಾರ್ ಅಧ್ಯಕ್ಷತೆಯಲ್ಲಿ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಯಿತು. ಬೆಳಿಗ್ಗೆ 9 ರಿಂದ 11 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಸುಜಾತಾ ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷದಿಂದ ಸಿ.ಎನ್. ಸಲ್ಮಾ ನಾಮಪತ್ರ ಸಲ್ಲಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಅನು ಮಧುಕರ್ ಹಾಗೂ ಕಾಂಗ್ರೆಸ್ ಇಂದಿರಾ ಶಂಕರ್ ನಾಮಪತ್ರ ಸಲ್ಲಿಸಿದ್ದರು.ಮಧ್ಯಾಹ್ನ 1 ಗಂಟೆ ವೇಳೆಗೆ ಸಭೆ ಆರಂಭವಾಯಿತು. ಸದಸ್ಯರೆಲ್ಲರೂ ಆಸೀನರಾಗುತ್ತಿದ್ದಂತೆ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಯಿತು. ನಾಮಪತ್ರ ಸಲ್ಲಿಸಿರುವ ವಿವರವನ್ನು ಉಪ ವಿಭಾಗಾಧಿಕಾರಿ ನೀಡುತ್ತಾ, ಉಮೇದುವಾರಿಕೆ ಹಿಂಪಡೆಯಲು ಅವಕಾಶ ನೀಡಿದರು. ಆದರೆ, ಯಾರೂ ಕೂಡ ನಾಮಪತ್ರ ವಾಪಸ್ ಪಡೆಯದೆ ಇದ್ದರಿಂದ ಚುನಾವಣೆ ಪ್ರಕ್ರಿಯೆ ಆರಂಭಗೊಂಡಿತು.
ಸಿ.ಎನ್. ಸಲ್ಮಾ ಪರವಾಗಿ ಚಿಕ್ಕಮಗಳೂರು ಕ್ಷೇತ್ರ ಶಾಸಕ ಎಚ್.ಡಿ. ತಮ್ಮಯ್ಯ ಸೇರಿದಂತೆ 12 ಮಂದಿ ಕಾಂಗ್ರೆಸ್ ಸದಸ್ಯರು, ಎಸ್‌ಡಿಪಿಐ ಹಾಗೂ ಪಕ್ಷೇತರ ತಲಾ ಒಬ್ಬರು ಸೇರಿದಂತೆ ಒಟ್ಟು 15 ಮಂದಿ ಮತ ಚಲಾಯಿಸಿದರು. ಹಾಗಾಗಿ ಹೆಚ್ಚು ಮತಗಳನ್ನು ಪಡೆದ ಸುಜಾತಾ ಶಿವಕುಮಾರ್ ಆಯ್ಕೆಯನ್ನು ಉಪ ವಿಭಾಗಾಧಿಕಾರಿಗಳು ಘೋಷಣೆ ಮಾಡಿದರು. ಉಪಾಧ್ಯಕ್ಷ ಸ್ಥಾನಕ್ಕೆ ಅನು ಮಧುಕರ್ ಪರವಾಗಿ 25 ಹಾಗೂ ಇಂದಿರಾ ಶಂಕರ್ ಪರವಾಗಿ 15 ಮತಗಳು ಬಂದಿದ್ದರಿಂದ ಅನು ಮಧುಕರ್ ಆಯ್ಕೆ ಘೋಷಣೆ ಮಾಡಲಾಯಿತು.
ಅಧ್ಯಕ್ಷೆ ಸುಜಾತಾ ಶಿವಕುಮಾರ್ ಚಿಕ್ಕಮಗಳೂರು ನಗರಸಭೆಯ 6ನೆಯ ವಾರ್ಡಿನಿಂದ ಸದಸ್ಯರಾಗಿ ಆಯ್ಕೆಯಾಗಿರುವ ಸುಜಾತಾ ಶಿವಕುಮಾರ್ ಬಿಜೆಪಿಯ ಹಿರಿಯ ಕಾರ್ಯಕರ್ತೆಯಾಗಿದ್ದಾರೆ. ಸಂಸದರಾಗಿದ್ದ ಡಿ.ಸಿ.ಶ್ರೀಕಂಠಪ್ಪ ಅವರ ಅನುಯಾಯಿಯಾಗಿದ್ದ ಸುಜಾತಾ ಶಿವಕುಮಾರ್ ಅವರು ಬಿಜೆಪಿಯ ಕಾರ್ಯಕರ್ತೆಯಾಗಿ ಕಾರ್ಯ ನಿರ್ವಹಿಸಿಕೊಂಡು ಬರುತ್ತಿದ್ದಾರೆ.
ಉಪಾಧ್ಯಕ್ಷೆ ಅನು ಮಧುಕರ್
22 ಕೆಸಿಕೆಎಂ 1ಚಿಕ್ಕಮಗಳೂರು ನಗರಸಭೆ ನೂತನ ಅಧ್ಯಕ್ಷೆ ಸುಜಾತಾ ಶಿವಕುಮಾರ್ ಹಾಗೂ ಉಪಾಧ್ಯಕ್ಷೆ ಅನು ಮಧುಕರ್ ಅವರಿಗೆ ವಿಧಾನಪರಿಷತ್ ಸದಸ್ಯರಾದ ಸಿ.ಟಿ. ರವಿ, ಎಸ್.ಎಲ್. ಭೋಜೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ನಗರಸಭೆ ಸದಸ್ಯ ರಾಜಶೇಖರ್, ಕುಮಾರಗೌಡ, ಮಧುಕುಮಾರ್ ರಾಜ್ ಅರಸ್ ಅವರು ಅಭಿನಂದನೆ ಸಲ್ಲಿಸಿದರು.