ಮಧ್ಯಾಹ್ನ ೧೨.೩೦ ಗಂಟೆಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ದೇವಾಲಯದ ರಥ ಬೀದಿಯಲ್ಲಿ ಸಂಚರಿಸುವ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದರು.
ಮಾಲೂರು: ಪ್ರಸಿದ್ಧ ಯಾತ್ರಾಸ್ಥಳವಾದ ತಾಲೂಕಿನ ಚಿಕ್ಕತಿರುಪತಿಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವವು ಅಪಾರ ಭಕ್ತ ಸಾಗರದ ನಡುವೆ ವಿಜೃಂಭಣೆಯಿಂದ ನಡೆಯಿತು.ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವವು ಪ್ರತಿ ವರ್ಷ ಚೈತ್ರಮಾಸದಲ್ಲಿ ಅದ್ಧೂರಿಯಾಗಿ ನಡೆಯುತ್ತಿದ್ದು, ಅದರಂತೆ ಮಂಗಳವಾರದಂದು ನಡೆದ ಬ್ರಹ್ಮರಥೋತ್ಸವ ಕಾರ‍್ಯಕ್ರಮದಲ್ಲಿ ಸಾವಿರಾರು ಭಕ್ತಾದಿಗಳು ಭಾಗವಹಿಸಿ ರಥವನ್ನು ಎಳೆದು ತಮ್ಮ ಹರಕೆಯನ್ನು ಅರ್ಪಿಸಿದರು.
ಮಧ್ಯಾಹ್ನ ೧೨.೩೦ ಗಂಟೆಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ದೇವಾಲಯದ ರಥ ಬೀದಿಯಲ್ಲಿ ಸಂಚರಿಸುವ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದರು. ಭಕ್ತಾದಿಗಳು ರಥೋತ್ಸವಕ್ಕೆ ಬಾಳೆಹಣ್ಣು, ಧವಣ ಹಾಗೂ ಹೂವುಗಳನ್ನು ಎಸೆದು ತಮ್ಮ ಹರಿಕೆಯನ್ನು ಅರ್ಪಿಸಿದರು. ಚಿಕ್ಕತಿರುಪತಿ ಗ್ರಾಮದ ಸುತ್ತ ಮುತ್ತಲೂ ಭಕ್ತಾದಿಗಳ ಅನುಕೂಲಕ್ಕಾಗಿ ಅನ್ನಚತ್ರಗಳನ್ನು ಏರ್ಪಡಿಸಿ ಭಕ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಕಾರ‍್ಯಕ್ರಮದಲ್ಲಿ ಶಾಸಕ ಕೆ.ವೈ.ನಂಜೇಗೌಡ, ಮಾಜಿ ಸಂಸದ ಎಸ್.ಮುನಿಸ್ವಾಮಿ, ಮಾಜಿ ಶಾಸಕ ಕೆ.ಎಸ್.ಮಂಜುನಾಥ್ ಗೌಡ, ಜೆಡಿಎಸ್ ಮುಖಂಡ ಹೂಡಿ ವಿಜಯ್ ಕುಮಾರ್, ತಹಸೀಲ್ಥಾರ್ ಎಂ.ವಿ.ರೂಪ, ದೇವಾಲಯದ ಕಾರ‍್ಯನಿರ್ವಾಹಕ ಅಧಿಕಾರಿ ಗಣೇಶ್ ಗೌಡ, ಹಿಂದಿನ ಇಒ ಟಿ.ಸೆಲ್ವಮಣಿ, ಪೇಷ್ಕಾರ್ ಪದ್ಮಾವತಿ ಇನ್ನಿತರರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.