ಕನಕಪುರ: ಚಿಕ್ಕಮುದವಾಡಿ ಗ್ರಾಮದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯ ಜಾತ್ರಾ ಮಹೋತ್ಸವ ಮತ್ತು ಬಸವೇಶ್ವರ ಸ್ವಾಮಿಯ ಅಗ್ನಿ ಕೊಂಡೋತ್ಸವ ಶನಿವಾರ ವಿಜೃಂಭಣೆಯಿಂದ ಸಂಪನ್ನಗೊಂಡಿತು.
ತಾಲೂಕಿನ ಕಸಬಾ ಹೋಬಳಿಯ ಚಿಕ್ಕಮುದವಾಡಿಯ ಇತಿಹಾಸ ಪ್ರಸಿದ್ಧ ಶ್ರೀ ಬಸವೇಶ್ವರ ಸ್ವಾಮಿಯ ಎಳವಾರ ಕಾರ್ಯಕ್ರಮ ಶುಕ್ರವಾರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಎಳವಾರ ಕಾರ್ಯಕ್ರಮಕ್ಕೆ ಗ್ರಾಮದ ಜನತೆ ಆರತಿ ಕೊಟ್ಟು ಪೂಜೆ ನೆರವೇರಿಸಿದರು.ಚಿಕ್ಕಮುದವಾಡಿ ಸೇರಿದಂತೆ ಸುತ್ತಮುತ್ತಲ 36 ಗ್ರಾಮಸ್ಥರು ಲಕ್ಷ್ಮೀ ನರಸಿಂಹಸ್ವಾಮಿ ಜಾತ್ರಾ ಮಹೋತ್ಸವ ಆಚರಣೆ ಮಾಡುವುದು ಇಲ್ಲಿನ ವಿಶೇಷ. ಅಗ್ನಿಕೊಂಡೋತ್ಸವ ಮತ್ತು ಜಾತ್ರಾ ಮಹೋತ್ಸವದ ಅಂಗವಾಗಿ ದೇವಾಲಯವನ್ನು ಹೂಗಳಿಂದ ಅಲಂಕರಿಸ ಲಾಗಿತ್ತು, ರಾಮನಗರ ಮುಖ್ಯರಸ್ತೆಯಿಂದ ದೇವಸ್ಥಾನದವರೆಗೂ ಜಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಮಾರಮ್ಮ ದೇವಾಲಯ ಮತ್ತು ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯದಲ್ಲಿ ದೇವರಿಗೆ ಚಿನ್ನಾಭರಣ ಅಲಂಕಾರ ಮಾಡಲಾಗಿತ್ತು.
ದೇವರಿಗೆ ಹೋಮ, ಹವನ, ಅರ್ಚನೆ, ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿಸಲಾಯಿತು. ಶನಿವಾರ ಬೆಳಿಗ್ಗೆ 6 ಗಂಟೆಗೆ ಬಸವೇಶ್ವರ ಸ್ವಾಮಿಯ ಅಗ್ನಿ ಕೊಂಡೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು, ಮಧ್ಯಾಹ್ನ 12 ಗಂಟೆಯಿಂದ 3 ಗಂಟೆವರೆಗೆ ಲಕ್ಷ್ಮೀನರಸಿಂಹಸ್ವಾಮಿಯ ಬ್ರಹ್ಮ ರಥೋತ್ಸವ ಕಾರ್ಯಕ್ರಮ ನಡೆಯಿತು.ಹರಕೆ ಹೊತ್ತ ಭಕ್ತರು ಹಣ್ಣು ಜವನ ರಥಕ್ಕೆ ಎಸೆದು ಹರಕೆ ತೀರಿಸಿದರು, ರಥೋತ್ಸವ ಕಾರ್ಯಕ್ರಮದಲ್ಲಿ ವೀರಗಾಸೆ ವೇಷ, ದಿಗಂಬರಿ ವೇಷ, ಹುಲಿವೇಷ, ಪೂಜಾ ಕುಣಿತ, ಯುವ ಕಲಾವಿದರಿಂದ ನೃತ್ಯ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಆಂಜನೇಯ ಸ್ವಾಮಿಯ ವೇಷದಾರಿ ಎಲ್ಲರ ಗಮನ ಸೆಳೆಯಿತು.
ಅಗ್ನಿ ಕೊಂಡೋತ್ಸವ ಮತ್ತು ಜಾತ್ರಾ ಮಹೋತ್ಸವದ ಅಂಗವಾಗಿ ಅನ್ನದಾಸೋಹ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸುತ್ತಮುತ್ತಲ ಹತ್ತಾರು ಗ್ರಾಮದ ಸಾವಿರಾರು ಭಕ್ತರು ಸರದಿಯಲ್ಲಿ ನಿಂತು ದೇವರ ದರ್ಶನ ಪಡೆದು ತೀರ್ಥ ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾದರು.(ಈ ಫೋಟೋ ಪ್ಯಾನಲ್ ಸಿಂಗಲ್‌ಗಾಗಿ ನೋಡಿ)ಅಗ್ನಿಕೊಂಡೋತ್ಸವ ಮತ್ತು ಜಾತ್ರಾ ಮಹೋತ್ಸವದ ಅಂಗವಾಗಿ ದೇವರಿಗೆ ವಿಸೇಷ ಹೂವಿನ ಅಲಂಕಾರ ಮಾಡಲಾಗಿತ್ತು.ಕೆ ಕೆ ಪಿ ಸುದಿ 01(1):
ಚಿಕ್ಕಮುದವಾಡಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯ ಜಾತ್ರಾ ಮಹೋತ್ಸವ ಮತ್ತು ಬಸವೇಶ್ವರ ಸ್ವಾಮಿಯ ಅಗ್ನಿ ಕೊಂಡೋತ್ಸವ ವಿಜೃಂಭಣೆಯಿಂದ ನೆರವೇರಿಸಲಾಯಿತು.