ಮದುವೆ ವೇಳೆ ಸಾಂಬಾರ್‌ ಪಾತ್ರೆಗೆ ಬಿದ್ದ ಮಗು ಸಾವು!

KannadaprabhaNewsNetwork |  
Published : Jun 21, 2025, 12:49 AM ISTUpdated : Jun 21, 2025, 07:26 AM IST
vellai sambar

ಸಾರಾಂಶ

ಮದುವೆ ಸಮಾರಂಭದಲ್ಲಿ ಕುದಿವ ಸಾಂಬಾರು ಪಾತ್ರೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ 2 ವರ್ಷದ ಬಾಲಕಿಯೊಬ್ಬಳು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಶುಕ್ರವಾರ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದಲ್ಲಿ ನಡೆದಿದೆ.

  ಶಿಗ್ಗಾಂವಿ :  ಮದುವೆ ಸಮಾರಂಭದಲ್ಲಿ ಕುದಿವ ಸಾಂಬಾರು ಪಾತ್ರೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ 2 ವರ್ಷದ ಬಾಲಕಿಯೊಬ್ಬಳು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಶುಕ್ರವಾರ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದಲ್ಲಿ ನಡೆದಿದೆ.

ಹುಬ್ಬಳ್ಳಿ ತಾಲೂಕಿನ ಚನ್ನಾಪುರ ಗ್ರಾಮದ ಮಕ್ತುಮ್ ಸಾಬ್ ಸನದಿ ಅವರ ಪುತ್ರಿ ರುಕ್ಸಾನಾಬಾನು ಸನದಿ(2.3 ವರ್ಷ) ಮೃತ ಬಾಲಕಿ. ಜೂ.14ರಂದು ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದ ಶರೀಫ್‌ಸಾಬ್‌ ಯರಗುಪ್ಪಿ ಅವರ ಮನೆಯಲ್ಲಿ ಮದುವೆ ಸಮಾರಂಭಕ್ಕೆಂದು ಪೋಷಕರೊಂದಿಗೆ ಬಾಲಕಿ ಆಗಮಿಸಿದ್ದಳು. ಮನೆಯ ಕಟ್ಟೆ ಮೇಲೆ ಆಟವಾಡುತ್ತಿದ್ದ ಬಾಲಕಿ ಅಲ್ಲೆ ಪಕ್ಕದಲ್ಲಿದ್ದ ದೊಡ್ಡ ಸಾಂಬಾರು ಪಾತ್ರೆಯೊಳಗೆ ಆಕಸ್ಮಿಕವಾಗಿ ಬಿದ್ದಿದ್ದಾಳೆ. ತಕ್ಷಣ ಬಾಲಕಿಯನ್ನು ಸ್ಥಳದಲ್ಲಿದ್ದವರು ಸಾಂಬಾರು ಪಾತ್ರೆಯಿಂದ ಮೇಲಕ್ಕೆ ಎತ್ತಿದ್ದಾರೆ. ಗಂಭೀರ ಸುಟ್ಟ ಗಾಯಗಳಾಗಿದ್ದ ಬಾಲಕಿಯನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಆದರೆ ದುರಾದೃಷ್ಟವಶಾತ್‌ ಶುಕ್ರವಾರ ಚಿಕಿತ್ಸೆ ಫಲಿಸದೆ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಘಟನೆ ಸಂಬಂಧ ತಡಸ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- ಜೂ.14ರಂದು ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದಲ್ಲಿ ಆಯೋಜನೆಯಾಗಿದ್ದ ಮದುವೆ

- ಹುಬ್ಬಳ್ಳಿ ತಾಲೂಕಿನ ಚನ್ನಾಪುರ ಗ್ರಾಮದ ಮಕ್ತುಮ್‌ ಸಾಬ್‌ ಸನದಿ ಪುತ್ರಿ, 2.3 ವರ್ಷದ ರುಕ್ಸಾನಾ ಭಾಗಿ

- ಮದುವೆ ಮನೆಯಲ್ಲಿ ಕಟ್ಟೆ ಮೇಲೆ ಆಟವಾಡುತ್ತಿದ್ದ ಬಾಲಕಿ. ಆಯತಪ್ಪಿ ದೊಡ್ಡ ಸಾಂಬಾರ್‌ ಪಾತ್ರೆಗೆ ಬಿದ್ದ ಮಗು

- ಕೂಡಲೇ ಬಿಸಿ ಪಾತ್ರೆಯಿಂದ ಮಗುವನ್ನು ಹೊರಕ್ಕೆ ತೆಗೆದ ಜನರು. ರುಕ್ಸಾನಾಗೆ ಗಂಭೀರ ಸ್ವರೂಪದ ಗಾಯ

- ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಗೆ ದಾಖಲು. 6 ದಿನ ಕಾಲ ಆಸ್ಪತ್ರೆಯಲ್ಲಿ ನರಳಾಡಿದ ಬಾಲಕಿ ನಿನ್ನೆ ಕೊನೆಯುಸಿರು

PREV
Read more Articles on

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ