ಸಂವಿಧಾನದಿಂದ ಬಾಲ ಕಾರ್ಮಿಕ ಪದ್ಧತಿ ದೂರವಿಡಲು ಸಾಧ್ಯ

KannadaprabhaNewsNetwork |  
Published : Jun 14, 2026, 02:30 AM IST
ಹರಪನಹಳ್ಳಿಯ ಹೊರವಲಯದಲ್ಲಿರುವ  ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ , ವಕೀಲರ ಸಂಘದಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ  ಗಣ್ಯರು  ಸಸಿಗೆ ನೀರು ಏರೆಯುವ ಮೂಲಕ ಕಾನೂನು ಅರಿವು ಕಾರ್ಯಕ್ರಮ  ಉದ್ಘಾಟಿಸಿದರು | Kannada Prabha

ಸಾರಾಂಶ

ಪ್ರಪಂಚದಲ್ಲಿ ಅತಿಹೆಚ್ಚು ಬಾಲ ಕಾರ್ಮಿಕರು ಕಂಡುಬರುವುದು ಉತ್ತರ ಕೊರಿಯದ ದೇಶದಲ್ಲಿ.

ಹರಪನಹಳ್ಳಿ: ಪೋಷಕರು ಮಕ್ಕಳನ್ನು ದುಡಿಮೆಗೆ ಹಚ್ಚಿದರೆ ಕಾನೂನು ಪ್ರಕಾರ ಅಪರಾಧ. ಇಂತಹ ಕಾನೂನು ಬಾಹಿರ ಕೆಲಸ ಕಾರ್ಯಗಳಿಂದ ಮಕ್ಕಳನ್ನು ದೂರವಿಟ್ಟು ಶಿಕ್ಷಣದ ಕಡೆಗೆ ಹೆಚ್ಚು ಮಹತ್ವ ನೀಡಬೇಕೆಂದು ಪ್ಯಾನಲ್ ವಕೀಲ ಮ್ಯತ್ಯುಂಜಯ ಎಂ. ಹೇಳಿದರು.

ನರಗದ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ, ಮೆಟ್ರಿಕ್ ನಂತರದ ಬಾಲಕರ ವಸತಿನಿಲಯ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಾಕ್ರಮದಲ್ಲಿ ಸಸಿಗೆ ನೀರು ಏರೆಯುವ ಮೂಲಕ ಉದ್ಘಾಟಿಸಿ ಬಳಿಕ ಮಾತನಾಡಿದರು.

ಪ್ರಪಂಚದಲ್ಲಿ ಅತಿಹೆಚ್ಚು ಬಾಲ ಕಾರ್ಮಿಕರು ಕಂಡುಬರುವುದು ಉತ್ತರ ಕೊರಿಯದ ದೇಶದಲ್ಲಿ. ನಮ್ಮ ಭಾರತ ದೇಶದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಬರೆದ ಸಂವಿಧಾನದಿಂದ ಬಾಲ ಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸಲು ಸಾಧ್ಯವಾಯಿತು. ದೇಶದಲ್ಲಿ ಅಪಾಯಕಾರಿ ಕಾರ್ಖಾನೆಗಳಲ್ಲಿ 14 ವರ್ಷದ ಒಳಗಿನ ಮಕ್ಕಳು ಕೆಲಸಕ್ಕೆ ಹೋಗಬಾರದು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ತಾಲೂಕು ಬಿಸಿಎಂ ಇಲಾಖೆಯ ಕಲ್ಯಾಣಾಧಿಕಾರಿ ಭೀಮಪ್ಪ ಕೆ. ಮಾತನಾಡಿ, ಬಾಲ ಕಾರ್ಮಿಕದಂತಹ ಅನಿಷ್ಟ ಪದ್ಧತಿಯಿಂದ ವಿಧ್ಯಾರ್ಥಿಗಳು ದೂರವಿದ್ದು ಸಮಾಜದಲ್ಲಿ ಕ್ರಿಯಾಶೀಲ ಸೃಜನಶೀಲ ವ್ಯಕ್ತಿಯಾಗಿ ಬೆಳೆಯಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪ್ರಪಂಚದ ಅತ್ಯಂತ ಬಲಿಷ್ಠವಾದ ಸಂವಿಧಾನ ಭಾರತದ ಸಂವಿಧಾನ ನಮ್ಮ ಸಂವಿಧಾನದ 21ನೇ ವಿಧಿ ಪ್ರಕಾರ ಕಡ್ಡಾಯ ಶಿಕ್ಷಣ ನೀತಿಯನ್ನು ಅನ್ವಯಿಸುತ್ತದೆ. ಈ ನಿಯಮದಂತೆ ವಿಧ್ಯಾರ್ಥಿಗಳು ನಿಮ್ಮ ಜೀವನವನ್ನು ರೂಪಿಸಿಕೊಂಡಾಗ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬೆಳೆಯುವುದಕ್ಕೆ ಸಾಧ್ಯವಾಗುತ್ತದೆ ಎಂದರು.

ವಿದ್ಯಾರ್ಥಿಗಳು ಅತಿಹೆಚ್ಚು ಸಾಮಾಜಿಕ ಜಾಲತಾಣದಲ್ಲಿ ತೊಡಗಬೇಡಿ. ಒಳ್ಳೆಯ ಕಾರ್ಯಕ್ಕೆ ಸಾಮಾಜಿಕ ಜಾಲತಾಣವನ್ನು ಬಳಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಮೆಟ್ರಿಕ್ ಪೂರ್ವ ಬಾಲಕರ ವಿಧ್ಯಾರ್ಥಿ ನಿಲಯದ ನಿಲಯ ಪಾಲಕ ಬಿ.ಎಚ್. ಚಂದ್ರಪ್ಪ ಮಾತನಾಡಿ, ವಿದ್ಯಾರ್ಥಿಗಳು ಸರ್ಕಾರದ ಮೂಲಭೂತ ಸೌಕರ್ಯಗಳನ್ನು ಸದುಪಯೋಗ ಪಡಿಸಿಕೊಂಡು ಸಮಾಜದಲ್ಲಿ ಮುಖ್ಯವಾಹಿನಿಗೆ ಬರಲು ಸತತ ಪ್ರಯತ್ನ ಮಾಡಿದಾಗ ಮುಂದೆ ನಿಮ್ಮ ಜೀವನ ಉತ್ತಮವಾಗಿ ರೂಪಿಸಿಕೋಳ್ಳುವುದಕ್ಕೆ ಸಾಧ್ಯವಾಗುತ್ತದೆ ಎಂದರು.

ತಾಲೂಕು ಕಾರ್ಮಿಕ ನಿರೀಕ್ಷ ಪ್ರಕಾಶ್ ಗೌಡ ಮಾತನಾಡಿ, ಅಪ್ರಾಪ್ತ ಮಕ್ಕಳನ್ನು ಅಪಾಯಕಾರಿ ಸ್ಥಳಗಳಿಗೆ ಹೋಗುವುದು ಕಾನೂನು ಪ್ರಕಾರ ಅಪರಾಧ. ಬಂಗಾರದಂತಹ ವಿದ್ಯಾರ್ಥಿ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಮೇಲ್ವಿಚಾರಕಿ ಅನ್ನಪೂರ್ಣ, ಅಶ್ವಿನಿ, ಪ್ರವೀಣಕುಮಾರ್, ಸುನೀಲಕುಮಾರ್, ಏಕಲವ್ಯ ಮಾರುತಿ, ತಾಲೂಕು ಕಾನೂನು ಸೇವಾ ಸಮಿತಿ ಸಿಬ್ಬಂದಿ ಕೊಟ್ರೇಶ್, ಬಸವರಾಜ್ ವಿದ್ಯಾರ್ಥಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ಅತಂತ್ರ
ಕಂಪ್ಲಿಯಲ್ಲಿ ವಿಜಯನಗರ ಕಾಲದ ಅಪರೂಪದ ಶಾಸನ ಪತ್ತೆ