ಕನ್ನಡಪ್ರಭ ವಾರ್ತೆ ಕಲಬುರಗಿ
ಬಾಲ ಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ಕಂಡು ಬಂದರೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕೆಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಅವರು ಹೇಳಿದರು.ಅಪ್ಪಾ ಪಬ್ಲಿಕ್ ಶಾಲೆಯ ಆವರಣದಲ್ಲಿರುವ ಬಸವರಾಜ ಅಪ್ಪಾ ಸಭಾಗೃಹದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ-1098/112, ಶರಣ ಬಸವೇಶ್ವರ ವಿದ್ಯಾವರ್ಧಕ ಸಂಘ, ಅಪ್ಪಾ ಪಬ್ಲಿಕ ಶಾಲೆ ಹಾಗೂ ಕಲಬುರಗಿ ಜಿಲ್ಲೆಯ ವಿವಿಧ ಇಲಾಖೆಗಳ ಆಶ್ರಯದಲ್ಲಿ 3ನೇ ಹಂತದ ಮಿಷನ್ ‘ಸುರಕ್ಷಾ’ ಗ್ರಾಮ ಮಟ್ಟದ ಅಧಿಕಾರಿಗಳಿಗೆ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಕಿಶೋರಾವಸ್ಥೆ ಮತ್ತು ಬಾಲ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕುರಿತು ತರಬೇತಿ ಹಾಗೂ ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಅರಿವು ಮತ್ತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಜ್ಯೋತಿ ಬೆಳಗಿಸುವ ಮೂಲಕ ಶ್ರೀನಿವಾಸ ನವಲೆ ಉದ್ಘಾಟಿಸಿದರು.
ಕನಿಷ್ಠ 7 ವರ್ಷ ಶಿಕ್ಷೆ ಕೊಡಬೇಕಾದ ಪೋಕ್ಸೋ ಕಾಯ್ದೆಯಲ್ಲಿ ಕೊಡಬೇಕಾಗುತ್ತದೆ ಇಂತಹ ಒಂದು ಪರಿಸ್ಥಿತಿಯ ಬರದ ಹಾಗೆ ತಡೆಗಟ್ಟುವಂತಹದ್ದು ಕೆಲಸವಾಗಬೇಕು ಎಂದರು.ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಬಿ. ಮಾತನಾಡಿ, ಬಾಲ್ಯವಿವಾಹ ಸಮಾಜದಲ್ಲಿ ದೊಡ್ಡ ಪೀಡುಗಾಗಿದೆ ಪ್ರತಿಯೊಂದು ಪದವಿ ಹಾಗೂ ಪದವಿ ಪೂರ್ವ ಕಾಲೇಜಿಗಳಲ್ಲಿ ಕಾರ್ಯಕ್ರಮ ಆಯೋಜಿಸಬೇಕು ಎಂದರು.
ಜಿಲ್ಲಾ ಎಸ್ಪಿ ಅಡ್ಡೂರು ಶ್ರೀನಿವಾಸಲು ಮಾತನಾಡಿ, ಮಕ್ಕಳು ಮತ್ತು ಮಹಿಳಾ ಮೇಲೆ ಯಾವುದೇ ರೀತಿಯಾದ ಕೇಸ್ ಬಂದಲ್ಲಿ ಅವುಗಳನ್ನು ತಡಮಾಡದೆ ವರದಿ ಸಲ್ಲಿಸಬೇಕೆಂದು ಆದೇಶಿಸಿದ್ದೇವೆ ಮತ್ತು ಎಲ್ಲಾ ಇಲಾಖೆಗಳು ಜೊತೆ ಕೂಡಿ ಕೆಲಸ ಮಾಡಿದ್ದಲ್ಲಿ ಪ್ರಕರಣಗಳನ್ನ ತಡೆಗಟ್ಟಬಹುದು ಎಂದರು.ಜಿಲ್ಲಾ ಪಂಚಾಯ್ತಿ ಸಿಇಒ ಭಂವರ್ ಸಿಂಗ್ ಮೀನಾ ಮಾತನಾಡಿ, ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಜಾಸ್ತಿಯಾಗಿದೆ. ಈ ರೀತಿಯಾದ ಕಳೆದ ಹೋದ ಮಕ್ಕಳ ವಿವಾಹವಾಗುವ ಸಾಧ್ಯತೆ ಹೆಚ್ಚಿದೆ ಎಂದು ಕಳವಳ ಹೊರಹಾಕಿದರು.
ಯುನಿಸೆಫ್, ಮಕ್ಕಳ ಸಂರಕ್ಷಣಾ ಯೋಜನೆ ಪ್ರಾದೇಶಿಕ ಸಂಯೋಜಕರು ಜಿಲ್ಲಾಧಿಕಾರಿ ಕಚೇರಿ ಕೊಪ್ಪಳ, ಯುನಿಸೆಫ್, ಮಕ್ಕಳ ಸಂರಕ್ಷಣಾ ಯೋಜನೆ ಕಾರ್ಯಕ್ರಮ ವ್ಯವಸ್ಥಾಪಕರು ಜಿಲ್ಲಾಧಿಕಾರಿಗಳ ಕಚೇರಿ ಕೊಪ್ಪಳ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಲಬುರಗಿ ಉಪ ನಿರ್ದೇಶಕರು ನವೀನ ಕುಮಾರ ಯು. ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಲಬುರಗಿ ಮಂಜುಳಾ.ವಿ.ಪಾಟೀಲ್, ಶರಣಬಸವೇಶ್ವರ ಮಹಾ ಸಂಸ್ಥಾನ ಕಲಬುರಗಿ, ಶರಣಬಸವ ವಿದ್ಯಾವರ್ಧಕ ಸಂಘದ ಪ್ರಾಂಶುಪಾಲರಾದ ಶಂಕರ ಗೌಡ ಹೊಸಮನಿ ಹಾಗೂ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.