ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ತಾಲೂಕಿನ ಬಲ್ಲೆನಹಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ಬಲ್ಲೆನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಆಯೋಜಿಸಿದ್ದ ಬಾಲ್ಯ ವಿವಾಹ ತಡೆಗಟ್ಟುವ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಾಲ್ಯ ವಿವಾಹ ಹಾಗೂ ಪೋಕ್ಸೋ ಪ್ರಕರಣಗಳು ತುಂಬಾ ಗಂಭೀರ ಸ್ವರೂಪದಾಗಿದ್ದಾಗಿದೆ. ತಂದೆ, ತಾಯಿ, ಸಂಬಂಧಿಕರ ಅಭಿಪ್ರಾಯದ ಮೇರೆಗೆ ಬಾಲ್ಯ ವಿವಾಹ ನಡೆಯುತ್ತವೆ. ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಬಾಲ್ಯ ವಿವಾಹದಿಂದಾಗುವ ಗಂಭೀರ ಪರಿಣಾಮಗಳ ಬಗ್ಗೆ ಹಾಗೂ ಕಾಯ್ದೆ ಬಗ್ಗೆ ತಿಳಿವಳಿಕೆ ನೀಡಿದಾಗ ಮಾತ್ರ ತಡೆಗಟ್ಟಲು ಸಾಧ್ಯ ಎಂದರು.ಬಾಲ್ಯ ವಿವಾಹದಿಂದ ಹೆಣ್ಣು ಮಕ್ಕಳ ಮೇಲೆ ಮಾನಸಿಕ, ದೈಹಿಕವಾಗಿ ಗಂಭೀರ ಪರಿಣಾಮ ಬೀರಿ ಜೀವನ ಹಾಳಾಗುವಂತೆ ಮಾಡುತ್ತದೆ. ಇಂತಹ ಪ್ರಕರಣಗಳು ಕಂಡು ಬಂದರೆ 1098/112 ಸಹಾಯವಾಣಿ ಮೂಲಕ ವಿಷಯಗಳನ್ನು ಅಧಿಕಾರಿಗಳಿಗೆ ತಿಳಿಸಬೇಕು ಎಂದರು.
ನಂತರ ಬಾಲ್ಯ ವಿವಾಹ ತಡೆ ಕುರಿತು ಮಕ್ಕಳಿಂದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಎಂ.ಸೆಲ್ವಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪದ್ಮ, ಆಶಾ ಕಾರ್ಯಕರ್ತೆ ಸುಗುಣ ಹಾಗೂ ಸಹ ಶಿಕ್ಷಕರು, ಶಾಲಾ ಮಕ್ಕಳು ಹಾಜರಿದ್ದರು.