ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸರ್ಕಾರಿ ಪಾಲಿಟೆಕ್ನಿಕ್‌ನ ಸಹಯೋಗದಲ್ಲಿ ಆಯೋಜಿಸಿದ್ದ ಬಾಲ್ಯ ವಿವಾಹ ಮುಕ್ತ ಸಮಾಜ ನಿರ್ಮಾಣ ಜಾಗೃತಿ ಅಭಿಯಾನ ಜಾಥಾ ಮತ್ತು ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಪ್ರಾಪ್ತ ಹೆಣ್ಣು ಮಕ್ಕಳನ್ನು ವಿವಾಹದ ಬಂಧನಕ್ಕೆ ಸಿಲುಕಿಸಿ ತೊಂದರೆ ನೀಡುವುದು ಸರಿಯಲ್ಲ. ಹೆಣ್ಣಿಗೆ 18 ವರ್ಷ, ಗಂಡಿ 21 ಆಗದಿದ್ದರೂೂ ಬಾಲ್ಯ ವಿವಾಹ ನಡೆಸುವುದು ಶಿಕ್ಷಾರ್ಹ ಅಪರಾಧ. ರಾಜ್ಯವನ್ನು ಬಾಲ್ಯ ವಿವಾಹ ಮುಕ್ತ ಮಾಡಲು ಜನರು ಸಹಕಾರ ನೀಡಬೇಕು ಎಂದರು.ಹೆಣ್ಣು ಮಗಳು ಮಾನಸಿಕವಾಗಿ ಇನ್ನೂ ಪ್ರಬುದ್ಧಗೊಳ್ಳದೇ ಆಕೆ ದೇಹ ಹಾಗೂ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿವೆ. ಹೀಗಾಗಿ ನಾವೆಲ್ಲರೂ ಬಾಲ್ಯ ವಿವಾಹ ಪದ್ಧತಿ ನಿರ್ಮೂಲನೆ ಮಾಡಲು ಪಣತೊಡೋಣ ಎಂದರು.
ನಾಗರಿಕ ಸಮಾಜದಲ್ಲಿ ಹಿಂದೂ ಹೆಣ್ಣು ಗಂಡಿನ ಜನನ ಪ್ರಮಾಣದ ಅನುಪಾತದಲ್ಲಿ ಹೆಣ್ಣಿನ ಸಂಖ್ಯೆ ಕಡಿಮೆಯಾಗುತ್ತಿರುವುದರಿಂದ ಸಮಾಜದಲ್ಲಿ ಏರುಪೇರು ಉಂಟಾಗಲಿದೆ. 18 ವರ್ಷದೊಳಗಿನ ಅಪ್ರಾಪ್ತ ಹೆಣ್ಣು ಮಕ್ಕಳನ್ನು ವಿವಾಹ ಬಂಧನದೊಳಗೆ ಸಿಲುಕಿಸಿ ಮುಗ್ಧ ಮನಸ್ಸಿನ ಹೆಣ್ಣು ಮಕ್ಕಳನ್ನು ವಿವಾಹ ಮಾಡಿ ಮಾನಸಿಕ ಹಾಗೂ ದೈಹಿಕವಾಗಿ ತೊಂದರೆ ನೀಡಿದರೆ ಕಾನೂನು ಕ್ರಮ ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.
ಕಾರ್ಯಕ್ರಮದಲ್ಲಿ ಪಟ್ಟಣದ ಜೆಎಂಎಫ್‌ಸಿ ಸಿವಿಲ್ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಸುಧೀರ್, ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಚ್.ಆರ್. ದೇವರಾಜು, ಕೆ.ವಿ.ಅರ್ಪಿತ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಸ್.ರಶ್ಮಿ, ತಹಸೀಲ್ದಾರ್ ಡಾ.ಎಸ್.ಯು.ಅಶೋಕ್, ತಾಪಂ ಇಒ ಕೆ.ಸುಷ್ಮ, ಪುರಸಭೆ ಮುಖ್ಯ ಅಧಿಕಾರಿ ನಟರಾಜು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿದ್ಯಾವತಿ, ಆರಕ್ಷಕ ನಿರೀಕ್ಷಕರಾದ ಸುಮಾರಾಣಿ, ಆನಂದೇಗೌಡ, ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ನಾಗರಾಜು ಮತ್ತಿತರರು ಭಾಗವಹಿಸಿದ್ದರು.