ಮಕ್ಕಳ ಸುರಕ್ಷತೆ ಸಮಾಜದ ಹೊಣೆಗಾರಿಕೆಯಾಗಿದೆ: ಭವಿಷ್ ಕುಂದರ್‌

KannadaprabhaNewsNetwork |  
Published : Jul 24, 2024, 12:26 AM IST
ವಿದ್ಯಾರ್ಥಿಗಳು ಸಂಶೋಧನಾ ಕೃತಿಗಳಿಂದ ಪ್ರೇರಣೆಗೊಳಗಾಗಬೇಕು: ಡಾ.ಕುರಿಯನ್ | Kannada Prabha

ಸಾರಾಂಶ

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಭಾರತೀಯ ನ್ಯಾಯಾಂಗ ವ್ಯವಸ್ಥೆ ಅತ್ಯಂತ ಬಲಿಷ್ಠವಾಗಿದ್ದು ಪ್ರತಿಯೊಬ್ಬ ಪ್ರಜೆಯೂ ಗೌರವಯುತವಾಗಿ ಬಾಳುವುದಕ್ಕೆ ಅವಕಾಶ ಮಾಡಿಕೊಟ್ಟಿದೆ. ಅದರಲ್ಲಿಯೂ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ರಚನೆಯಾಗಿರುವ ಕಠಿಣ ಕಾನೂನುಗಳಿಂದ ಪೋಷಕರು ಮತ್ತು ಮಕ್ಕಳು ಸಹಜ ಬದುಕನ್ನು ನಡೆಸಲು ಸಹಕಾರಿಯಾಗಿದೆ. ದೇಶದ ಭವಿಷ್ಯವಾದ ಮಕ್ಕಳ ಸುರಕ್ಷತೆ ಸಮಾಜದ ಹೊಣೆಗಾರಿಕೆಯಾಗಿದೆ ಎಂದು ಕಾರ್ಕಳದ ನ್ಯಾಯವಾದಿಗಳಾದ ಭವಿಷ್ ಕುಂದರ್ ತಿಳಿಸಿದರು.

ಅವರು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ನಡೆದ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದರು.

೧೮ ವರ್ಷ ವಯಸ್ಸಿಗಿಂತ ಕೆಳಗಿನ ಮಕ್ಕಳ ಮೇಲೆ ಯಾವುದೇ ರೀತಿಯ ಲೈಂಗಿಕ ದೌರ್ಜನ್ಯ ನಡೆದರೆ ಪೋಕ್ಸೋ ಕಾಯ್ದೆಯಡಿಯಲ್ಲಿ ಅಪರಾಧಿಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲು ಸಾಧ್ಯವಿದೆ. ಶೋಷಣೆಗೆ ಒಳಗಾದ ಮಕ್ಕಳು ಭಯಮುಕ್ತರಾಗಿ ದೂರು ದಾಖಲಿಸಲು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ತಮಗಾದ ದೌರ್ಜನ್ಯದ ಬಗ್ಗೆ ಧೈರ್ಯವಾಗಿ ಹೆತ್ತವರ ಬಳಿ ಹೇಳಿಕೊಳ್ಳಬೇಕು. ಕಾನೂನಿನ ಮೊರೆ ಹೋಗಬೇಕು ಎಂದು ಅವರು ಕಾಯ್ದೆಯ ಸ್ವರೂಪವನ್ನು ಸವಿಸ್ತಾರವಾಗಿ ತಿಳಿಸುತ್ತ ಕಾನೂನು ಅರಿವು ಮೂಡಿಸಿದರು.ಮುಖ್ಯ ಅತಿಥಿಗಳಾಗಿದ್ದ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಮಾತನಾಡಿ ಕಾನೂನು ಎಲ್ಲರಿಗೂ ಸಮಾನವಾಗಿದೆ. ಬಾಲ್ಯವೆಂಬುದು ಭವಿಷ್ಯಕ್ಕೆ ಭದ್ರ ಬುನಾದಿಯಾಗಿದೆ. ಇಲ್ಲಿ ಅನುಭವಿಸುವ ಮಾನಸಿಕ ಕಿರುಕುಳ ಭವಿಷ್ಯವನ್ನೇ ಹಾಳು ಮಾಡುತ್ತದೆ. ಕಾನೂನಿನ ನೆರವು ಪಡೆದು ಭವಿಷ್ಯ ರೂಪಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.ಅದ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರದೀಪ್‌ ಕುಮಾರ್ ಶೆಟ್ಟಿ ಮಾತನಾಡಿ ಮಕ್ಕಳ ಕುರಿತಾಗಿನ ಕಾನೂನನ್ನು ನೀವು ತಿಳಿದುಕೊಂಡು ಇನ್ನೊಬ್ಬರಿಗೂ ತಿಳಿಸುವ ಮೂಲಕ ಕಾನೂನು ಅರಿವು ಕಾರ್ಯಕ್ರಮ ಸಾರ್ಥಕವಾಗಬೇಕು. ಸುಶಿಕ್ಷಿತ ಸಮಾಜ ರೂಪುಗೊಳ್ಳಬೇಕು ಎಂದರು.

ಎನ್‌ಎಸ್ಎಸ್‌ ಕಾರ್ಯಕ್ರಮಾಧಿಕಾರಿ ತೇಜಸ್ವೀ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಚಂದ್ರಶೇಖರ್ ಸ್ವಾಗತಿಸಿದರು. ಅಭಿನವ್‌ ಅತಿಥಿ ಪರಿಚಯ ಮಾಡಿದರು. ಅಪೇಕ್ಷಾ ನಿರೂಪಿಸಿ, ಸಮೀಕ್ಷಾ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ