ಕನ್ನಡಪ್ರಭ ವಾರ್ತೆ ಕೊಪ್ಪಳ
ತಾಲೂಕಿನ ಬಹದ್ದೂರಬಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ ಅವರನ್ನು ದಿಢೀರ್ ವರ್ಗಾವಣೆ ಮಾಡಿರೋದು ವಿದ್ಯಾರ್ಥಿಗಳ ಅಳುವಿಗೆ ಕಾರಣವಾಗಿದೆ. ‘ನಮಗೆ ನಮ್ಮ ನೆಚ್ಚಿನ ಶಿಕ್ಷಕರು ಬೇಕು. ಇಲ್ಲದಿದ್ದರೆ ನಮಗೆ ಶಾಲೆ ಬೇಡ’ ಎಂದು ಕಣ್ಣೀರಿಟ್ಟ ಮಕ್ಕಳು ಶಾಲೆಗೆ ಬೀಗ ಜಡಿದು ಪ್ರತಿಭಟನೆ ಮಾಡಿದ್ದಾರೆ. ಈ ವಿದ್ಯಾರ್ಥಿಗಳಿಗೆ ಬಹದ್ದೂರಬಂಡಿ ಗ್ರಾಮಸ್ಥರು ಸಾಥ್ ನೀಡಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳು ನಮಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ. ಎಸ್‌ಡಿಎಂಸಿ ಅಧ್ಯಕ್ಷರು, ಶಿಕ್ಷಣ ಇಲಾಖಾಧಿಕಾರಿಗಳು ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನಿಸಿದರೂ, ಮಕ್ಕಳು ತಮಗೆ ಬೀರಪ್ಪ ಸರ್ ಬೇಕೇಬೇಕು ಎಂದು ಹಠ ಹಿಡಿದಿದ್ದಾರೆ.
ಶಿಕ್ಷಕ ಬಿರಪ್ಪ ಅವರು, ಸ್ವಂತ ಖರ್ಚಿನಲ್ಲಿ ವಿದ್ಯಾರ್ಥಿಗಳನ್ನು ವಿಮಾನದ ಮೂಲಕ ಬೆಂಗಳೂರಿಗೆ ಕರೆದೊಯ್ದು ಮಾದರಿಯಾಗಿದ್ದರು.