ಶಿರಸಿಯ ಶಿಥಿಲ ಅಂಗನವಾಡಿ ಕಟ್ಟಡದಲ್ಲೇ ಮಕ್ಕಳಿಗೆ ಪಾಠ!

KannadaprabhaNewsNetwork |  
Published : Nov 10, 2026, 01:00 AM IST
ಶಿರಸಿಯ ಅಂಗನವಾಡಿ ಕಟ್ಟಡ.ಕಟ್ಟಡದ ಬುನಾದಿ ಭಾಗವು ಕುಸಿದಿರುವುದು. | Kannada Prabha

ಸಾರಾಂಶ

ಈ ಸಂಬಂಧ ಅನೇಕ ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅನಾಹುತ ಸಂಭವಿಸುವುದಕ್ಕಿಂತ ಮೊದಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತು ಅಂಗನವಾಡಿ ದುರಸ್ತಿ ಕಾರ್ಯಕ್ಕೆ ಮುಂದಾಗಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಶಂಕರ ಜಿ. ಜಾವೂರ

ಶಿರಸಿ: ಇಲ್ಲಿನ ಗಣೇಶ ನಗರದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸೇರಿದ ಅಂಗನವಾಡಿ ಕೇಂದ್ರ ನಂ. 1 ಕಟ್ಟಡದ ಬುನಾದಿ ಕುಸಿಯುತ್ತಿದ್ದು, ಜೀವಭಯದಲ್ಲೇ ಮಕ್ಕಳು ಕಲಿಯುವಂತಾಗಿದೆ.

ಈ ಅಂಗನವಾಡಿಯಲ್ಲಿ ಅಂದಾಜು 15 ಮಕ್ಕಳು ಕಲಿಯುತ್ತಿದ್ದಾರೆ. ಆದರೆ ಮಕ್ಕಳ ಸುರಕ್ಷತೆಗೆ ಬಗ್ಗೆ ಆತಂಕ ಎದುರಾಗಿದೆ. ಈ ಅಂಗನವಾಡಿ ಕಟ್ಟಡದ ಕಾಮಗಾರಿಯನ್ನು ಜಿಲ್ಲಾ ಪಂಚಾಯಿತಿಯು ನಬಾರ್ಡ್ ಯೋಜನೆಯಡಿ ₹1.42 ಲಕ್ಷ ವೆಚ್ಚದಲ್ಲಿ 2007ರಲ್ಲಿ ನಿರ್ಮಿಸಲಾಗಿದೆ. ಸದ್ಯ ಕಟ್ಟಡ ಅಪಾಯದ ಅಂಚಿನಲ್ಲಿದೆ. ಅಕಸ್ಮಾತ್ ಕಟ್ಟಡವು ಬಿದ್ದು ಪ್ರಾಣಹಾನಿ ಸಂಭವಿಸಿದರೆ ಹೊಣೆ ಯಾರು ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.2019- 20ನೇ ಸಾಲಿನಲ್ಲಿ ವಿಪತ್ತು ನಿರ್ವಹಣಾ ನಿಧಿ ಯೋಜನೆಯ ₹1.5 ಲಕ್ಷ ವೆಚ್ಚದಲ್ಲಿ ಅಂಗನವಾಡಿ ದುರಸ್ತಿ ಕಾರ್ಯ ಮಾಡಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.ಗಣೇಶನಗರದ ರಸ್ತೆ ಪಕ್ಕದಲ್ಲಿರುವುದರಿಂದ ಕೆಲ ಕಿಡಿಗೇಡಿಗಳ ಮದ್ಯಪಾನ ಮಾಡಿ ಮಲಗುವ ವಾಸಸ್ಥಳವಾಗಿದೆ ಎಂದು ಸಾರ್ವಜನಿಕರು ಮತ್ತು ಬುದ್ಧಿಜೀವಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಅನೇಕ ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅನಾಹುತ ಸಂಭವಿಸುವುದಕ್ಕಿಂತ ಮೊದಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತು ಅಂಗನವಾಡಿ ದುರಸ್ತಿ ಕಾರ್ಯಕ್ಕೆ ಮುಂದಾಗಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಎಂಜಿನಿಯರ್ ಭರವಸೆ: ಕಟ್ಟಡ ಶಿಥಿಲಗೊಂಡಿರುವ ವಿಷಯ ನಮ್ಮ ಗಮನಕ್ಕೆ ಬಂದಿದೆ. ಈ ಸಂಬಂಧ ನಾನು ಮತ್ತು ನಗರಸಭೆ ಎಂಜಿನಿಯರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಕಟ್ಟಡಕ್ಕೆ ಯಾವುದೇ ತೊಂದರೆ ಆಗುವುದಿಲ್ಲವೆಂದು ನಗರಸಭೆ ಎಂಜಿನಿಯರ್ ಭರವಸೆ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ನಂದಕುಮಾರ್ ತಿಳಿಸಿದರು.

ದುರಸ್ತಿ ಕೈಗೊಳ್ಳಬೇಕು: ಇದು ಅಧಿಕಾರಿಗಳ ಸಂಪೂರ್ಣ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿಯಿಂದ ಅಂಗನವಾಡಿ ಕಟ್ಟಡ ಇಂದು ಬೀಳುತ್ತದೆಯೋ ನಾಳೆ ಬೀಳುತ್ತಿದೆಯೋ ಗೊತ್ತಿಲ್ಲ. ಸಂಬಂಧಿಸಿದ ಅಧಿಕಾರಿಗಳು ಕಾಲಹರಣ ಮಾಡದೆ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿ ಅಂಗನವಾಡಿ ಕಟ್ಟಡದ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಛಲವಾದಿ ಸಮಾಜದ ಜಿಲ್ಲಾಧ್ಯಕ್ಷ ಮಹಾದೇವ್ ಚಲವಾದಿ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

12, 13ರಂದು ಪುಣ್ಯಾರಾಧನೆ, ಸ್ಮರಣೋತ್ಸವ, ಜನಜಾಗೃತಿ ಧರ್ಮ ಸಮ್ಮೇಳನ
ಟನಲ್ ಮಾಡಿದ್ರೂ ಆಗಲ್ಲ, ಎಲಿವೇಟೆಡ್‌ ಮಾಡಿದರೂ ಅಪಾದನೆ: ಡಿಕೆಶಿ ಆಕ್ರೋಶ