ಕನ್ನಡಪ್ರಭವಾರ್ತೆ ಚಿಕ್ಕಬಳ್ಳಾಪುರ
ನಗರದ ಹೊರ ವಲಯದ ಎಸ್ ಜೆಸಿಐಟಿ ಕಾಲೇಜು ಆವರಣದ ಬಿಜಿಎಸ್ ಸಭಾಂಗಣದಲ್ಲಿ ನಡೆದ ಬಿಬಿಜಿಎಸ್ ವರ್ಲ್ಡ್ ಸ್ಕೂಲ್‌ನ ಯುಕೆಜಿ ಮಕ್ಕಳಿಗೆ ಪದವಿ ಪ್ರದಾನ ಸಮಾರಂಭ ಹಾಗೂ ಶಾಲಾ ವಾರ್ಷಿಕೋತ್ಸವ ಸಂಭ್ರಮ 2025-26 ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ, ಪೋಷಕರ ನಡವಳಿಕೆಗಳು ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ಮನೆಗಳಲ್ಲಿ ಮಕ್ಕಳ ಮುಂದೆ ಉತ್ತಮ ನಡವಳಿಕೆಗಳಿಂದ ಇರಬೇಕು. ವಿದ್ಯಾರ್ಥಿಗಳಲ್ಲಿರುವ ಅಂತರಂಗದ ಜ್ಞಾನವನ್ನು ಹೊರ ತರುವ ಕೆಲಸ ಶಿಕ್ಷಕರು ಮಾಡಬೇಕೆಂದರು.
ವಿದ್ಯಾರ್ಥಿಗಳನ್ನು ನಾಲ್ಕು ಗೋಡೆಗಳ ಮಧ್ಯೆ ಬಂಧಿಸುವ ಕೆಲಸ ಆಗಬಾರದು. ಕಲಿಕೆಗೆ ಮುಕ್ತ ವಾತಾವರಣ ಕಲ್ಪಿಸಬೇಕು. ಬಹಳಷ್ಟು ಪೋಷಕರು ಮಕ್ಕಳನ್ನು ಶಾಲೆಗೆ ಸೇರಿಸಿದರೆ ಸಾಕು ನಮ್ಮ ಜವಾಬ್ದಾರಿ ಮುಗಿದಿದೆ ಎಂದು ಭಾವಿಸುತ್ತಾರೆ. ಇದು ತಪ್ಪು ಕಲ್ಪನೆ. ವಿದ್ಯಾರ್ಥಿಗಳ ಬೆಳವಣಿಗೆಗೆ ಶಿಕ್ಷಕರಷ್ಟೇ ಪೋಷಕರ ಕಾಳಜಿ ಮುಖ್ಯ ಎಂದರು.ಬಿಜಿಎಸ್ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಡಾ.ಎನ್.ಶಿವರಾಮರೆಡ್ಡಿ ಮಾತನಾಡಿ,ಶಿಕ್ಷಣ ಸಂಸ್ಥೆಗಳೇ ಎಲ್ಲವನ್ನು ಮಕ್ಕಳಿಗೆ ಕಲಿಸಲು ಸಾಧ್ಯವಿಲ್ಲ. ಮಕ್ಕಳು ಮನೆಯಿಂದಲೇ ಎಲ್ಲವನ್ನು ಕಲಿಯುತ್ತಾ ಬರುತ್ತಾರೆ. ಈಗಿನ ಮಕ್ಕಳು ಆಲ್ಟ್ರಾ ಜನರೇಷನ್ ಕಿಡ್ಸ್. ಬಹಳ ಬೇಗ ಎಲ್ಲವನ್ನು ಅರ್ಥ ಮಾಡಿಕೊಳ್ಳುತ್ತಾರೆ. ಪೋಷಕರಾದ ನಾವು ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಲು ಶ್ರಮಿಸಬೇಕು. ಅವರ ಮದುವೆ ಆಗುವ ಇತರೆ ಕಾರಣಗಳಿಗೆ ಮೀಸಲಿಡುವ ಹಣದ ಬದಲಿಗೆ ಅವರ ಶಿಕ್ಷಣಕ್ಕೆ ಒತ್ತು ನೀಡಬೇಕು. ಮಕ್ಕಳ ಮಾನಸಿಕ ಸಾಮರ್ಥ್ಯ ಅವರ ಒಂಬತ್ತು ವರ್ಷಕ್ಕೆ ಎಲ್ಲವನ್ನು ಅರ್ಥ ಮಾಡಿಕೊಳ್ಳುವ ಮಟ್ಟಕ್ಕೆ ಬೆಳೆದಿರುತ್ತದೆ. ಪೋಷಕರಾದ ನಾವು ಅರ್ಥ ಮಾಡಿಕೊಂಡು ಅದರಂತೆ ಮಕ್ಕಳಿಗೆ ಶಿಕ್ಷಣವನ್ನು ಕೊಡಿಸಲು ಶ್ರಮಿಸಬೇಕು. ಎಂದು ಸಲಹೆ ನೀಡಿದರುಕಾರ್ಯಕ್ರಮ ಉದ್ಘಾಟಿಸಿದ ಜಿಪಂ ಸಿಇಒ ಡಾ.ವೈ.ನವೀನ್ ಭಟ್ ಮಾತನಾಡಿ,ಮಕ್ಕಳು ಕಲಿಕೆ ಸಂದರ್ಭದಲ್ಲಿ ಶಿಸ್ತು ಮೂಡಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಕಷ್ಟಪಟ್ಟು ಓದಿದರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು. ವಿದ್ಯಾರ್ಥಿಗಳಿಗೆ ಮೊದಲು ಗುರಿ ಇರಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಭೆಗಳಿಗೆ ಸಾಕಷ್ಟು ಅವಕಾಶಗಳು ಇವೆ ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯಾ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಒಂದೊಂದು ಪ್ರತಿಭೆ ಇರುತ್ತದೆ. ಅದನ್ನು ಗುರುತಿಸುವ ಕಾರ್ಯ ಶಿಕ್ಷಕರಿಂದ ಪ್ರಾಮಾಣಿಕವಾಗಿ ಆಗಬೇಕು. ಸ್ವಯಂ ಪರಿಶ್ರಮ ಇಲ್ಲದೇ ಯಾವ ವಿದ್ಯಾರ್ಥಿಯು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಿಲ್ಲ. ವಿದ್ಯಾರ್ಥಿ ಜೀವನವೇ ಇಡೀ ಬದುಕಿಗೆ ಅಡಿಪಾಯ ಎಂದು ಹೇಳಿದರು.
ಸಮಾರಂಭದಲ್ಲಿ ಯುಕೆಜಿಯ ಮಕ್ಕಳಿಗೆ ಪದವಿ ಪ್ರಧಾನ ಮಾಡಲಾಯಿತು. ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪದಕಗಳನ್ನು ನೀಡಿ ಗೌರವಿಸಲಾಯಿತು. ನರ್ಸರಿ ಇಂದ ಎಂಟನೇ ತರಗತಿಯ ಮಕ್ಕಳಿಂದ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಎಲ್ಲ ಸಾಂಸ್ಕೃತಿ ಕಾರ್ಯಕ್ರಮಗಳು ಕಣ್ಮನ ಸೆಳೆಯುವಂತಿದ್ದವು.ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ದೀಪಿಕಾ ಶರ್ಮ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಇದ್ದರು.
ಸಿಕೆಬಿ- 5 ಬಿಬಿಜಿಎಸ್ ವರ್ಲ್ಡ್ ಸ್ಕೂಲ್ ನ ಯುಕೆಜಿ ಮಕ್ಕಳಿಗೆ ಪದವಿ ಪ್ರಧಾನ ಸಮಾರಂಭ ಹಾಗೂ ಶಾಲಾ ವಾರ್ಷಿಕೋತ್ಸವ ಸಂಭ್ರಮ 2025-26 ಕಾರ್ಯಕ್ರಮವನ್ನು ಸಿಇಓ ಡಾ.ವೈ.ನವೀನ್ ಭಟ್ ಉಧ್ಘಾಟಿಸಿದರು