ಕುರುಬ ಸಮಾಜದ ಮಕ್ಕಳು ಸಾಮಾಜಿಕ, ಶೈಕ್ಷಣಿಕವಾಗಿ ಅಭಿವೃದ್ಧಿ ಸಾಧಿಸಬೇಕು: ಎಲ್.ಆರ್.ಅಶ್ವಿನ್

KannadaprabhaNewsNetwork |  
Published : Jul 27, 2026, 02:00 AM IST
26ಕೆಎಂಎನ್ ಡಿ22 | Kannada Prabha

ಸಾರಾಂಶ

ಕುರುಬ ಸಮಾಜದ ಮಹಿಳೆಯರ ಸಬಲೀಕರಣ ಮತ್ತು ಯುವಕ ನಾಯಕರ ಅಭಿವೃದ್ಧಿಗೆ ಸಂಘ ಮುಂದಿನ ದಿನಗಳಲ್ಲಿ ಕಾರ್ಯಕ್ರಮ ರೂಪಿಸುವ ಗುರಿ ಹೊಂದಲಾಗಿದೆ. ದಿನ ದಿನಗಳಲ್ಲಿ ನನ್ನ ಅಧಿಕಾರ ಅವಧಿಯಲ್ಲಿ ಸಮಾಜದ ಜನರ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತೇನೆ.

ಕನ್ನಡಪ್ರಭ ವಾರ್ತೆ ಮದ್ದೂರು

ಕುರುಬ ಸಮುದಾಯದ ಜನರು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿ ಸಾಧಿಸಬೇಕು ಎಂದು ತಾಲೂಕು ಕುರುಬರ ಸಂಘದ ಅಧ್ಯಕ್ಷ ಎಲ್.ಆರ್.ಅಶ್ವಿನ್ ಭಾನುವಾರ ಹೇಳಿದರು.

ಪಟ್ಟಣದ ಮಳವಳ್ಳಿ ರಸ್ತೆಯ ತಾಲೂಕು ಕುರುಬರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಕುರುಬ ಸಮಾಜದ ಮಹಿಳೆಯರ ಸಬಲೀಕರಣ ಮತ್ತು ಯುವಕ ನಾಯಕರ ಅಭಿವೃದ್ಧಿಗೆ ಸಂಘ ಮುಂದಿನ ದಿನಗಳಲ್ಲಿ ಕಾರ್ಯಕ್ರಮ ರೂಪಿಸುವ ಗುರಿ ಹೊಂದಲಾಗಿದೆ. ದಿನ ದಿನಗಳಲ್ಲಿ ನನ್ನ ಅಧಿಕಾರ ಅವಧಿಯಲ್ಲಿ ಸಮಾಜದ ಜನರ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತೇನೆ ಎಂದರು.

ಸಭೆಯಲ್ಲಿ ಹಾಲಿ ನಿರ್ಮಾಣ ಹಂತದಲ್ಲಿರುವ 2ನೇ ಹಂತದ ಕಟ್ಟಡವನ್ನು ತ್ವರಿತವಾಗಿ ಪೂರ್ಣ ಗೊಳಿಸುವ ಮೂಲಕ ಸಂಘದ ಚಟುವಟಿಕೆಗಳಿಗೆ ಬಳಸಿಕೊಳ್ಳುವಂತೆ ಹಿರಿಯ ಕಿರಿಯ ಸದಸ್ಯರು ಸಲಹೆ ನೀಡಿದರು.

ಸಭೆಯಲ್ಲಿ ನಿಕಟಪೂರ್ವ 14 ಮಂದಿ ಆಡಳಿತ ಮಂಡಳಿ ಸದಸ್ಯರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿ ತೇರ್ಗಡೆ ಹೊಂದಿದ ಸಮುದಾಯದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸಭೆಯಲ್ಲಿ ಗೌರವಾಧ್ಯಕ್ಷ ಎಂ.ಮರಿ ಹೆಗ್ಗಡೆ, ಉಪಾಧ್ಯಕ್ಷ ಬಿ.ಪಿ.ಪ್ರಪುಲಚಂದ್ರ, ಪ್ರಧಾನ ಕಾರ್ಯದರ್ಶಿ ಎಚ್. ರಾಜು, ಖಜಾಂಚಿ ಜವರ ಹೆಗ್ಗಡೆ, ಸಹಕಾರ್ಯದರ್ಶಿ ಚೆನ್ನೇಶ್, ಸಂಘಟನಾ ಕಾರ್ಯದರ್ಶಿ ಡಿ.ಕುಮಾರ, ಸಹಕಾರ ಅಭಿವೃದ್ಧಿ ಅಧಿಕಾರಿ ಎಸ್. ಸುಧಾಕರ್ ಹಾಗೂ ನಿರ್ದೇಶಕರು ಭಾಗವಹಿಸಿದ್ದರು.

ಡೇರಿ ಅಧ್ಯಕ್ಷ ಮನೋಜ್‌ಗೆ ಮಾಜಿ ಸಚಿವ ಸಿಎಸ್ಪಿ ಅಭಿನಂದನೆಪಾಂಡವಪುರ:

ತಾಲೂಕಿನ ಕೆ.ಬೆಟ್ಟಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜೆಡಿಎಸ್ ಅಭ್ಯರ್ಥಿ ಮನೋಜ್ ಅವರನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅಭಿನಂದಿಸಿದರು.ಬಳಿಕ ಮಾತನಾಡಿದ ಮಾಜಿ ಸಚಿವರು, ಡೇರಿಗಳು ರೈತರ ಬೆನ್ನೆಲುಬಾಗಿದೆ, ಹಾಗಾಗಿ ಆಡಳಿತ ಮಂಡಳಿ ಎಲ್ಲಾ ಸದಸ್ಯರು ರೈತರ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಬೇಕು. ನೂತನ ಅಧ್ಯಕ್ಷರು ಎಲ್ಲರ ಸಹಕಾರದಿಂದ ಸಂಘವನ್ನು ಅಭಿವೃದ್ಧಿ ಮಾಡುವಂತೆ ಎಂದು ಸಲಹೆ ನೀಡಿದರು. ಈ ವೇಳೆ ನಿರ್ದೇಶಕರಾದ ರಾಮೇಗೌಡ, ಶಶಿಕಲಾ, ವಸಂತಮ್ಮ, ರಾಜು, ಮುಖಂಡರಾದ ಮನು, ಹರೀಶ್, ಬಿ.ಎಲ್.ಸ್ವಾಮೀಗೌಡ, ಬಚ್ಚೇಗೌಡ, ವಿಜಯ್ ಕುಮಾರ್, ರವಿಕುಮಾರ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

12,59,871 ಗಣತಿ ನಮೂನೆಗಳ ಗಣಕೀಕರಣ: ಜಿಲ್ಲಾಧಿಕಾರಿ
ವಿಜೃಂಭಣೆಯಿಂದ ಜರುಗಿದ ಶ್ರೀ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ಬ್ರಹ್ಮ ರಥೋತ್ಸವ