ಕುಕನೂರು: ಪಾಲಕರು ಹಾಗೂ ಶಿಕ್ಷಕರ ಬಳಿ ಮಕ್ಕಳು ಮುಕ್ತವಾಗಿ ತಮ್ಮ ಬೇಡಿಕೆ ಹಾಗೂ ಸಮಸ್ಯೆ ಹೇಳಿಕೊಳ್ಳಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಪ್ತಸಮಾಲೋಚಕ ರವಿ ಬಡಿಗೇರ ಹೇಳಿದರು.
ಗ್ರಾಪಂ ಅಭಿವೃದ್ಧಿ ಅಧಿಕಾರಿ ಶರಣಪ್ಪ ಕೆಳಗಿನಮನಿ ಮಾತನಾಡಿ, 18 ವರ್ಷದ ಒಳಗಿನ ಮಕ್ಕಳ ಅಂಕಿ ಸಂಖ್ಯೆಗಳನ್ನು ಹಾಗೂ ಕಳೆದ ಮಕ್ಕಳ ಗ್ರಾಮ ಸಭೆಯಲ್ಲಿ ಮಕ್ಕಳು ಕೇಳಲಾದ ಸಮಸ್ಯೆಗಳು ಮತ್ತು ಪ್ರಶ್ನೆಗಳಿಗೆ ಒದಗಿಸಲಾಗದ ಪರಿಹಾರದ ಕುರಿತು ತಿಳಿಸಿದರು.
ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕಾಶೀಮಠ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಕರ್ನಾಟಕ ತಿದ್ದುಪಡಿ ನಿಯಮ ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ 2012ರ ಕುರಿತು ಮತ್ತು ಮಕ್ಕಳ ರಕ್ಷಣಾ ನೀತಿ 2016ರ ಅಂಶಗಳ ಅನುಷ್ಠಾನದ ಅಗಾಧತೆಯ ಕುರಿತು ಮಾಹಿತಿ ನೀಡಿದರು.ಗ್ರಾಪಂ ಅಧ್ಯಕ್ಷೆ ರತ್ನವ್ವ ಹಂಚಾಳಪ್ಪ ಭಜಂತ್ರಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ಸಹಾಯವಾಣಿಯ ಸಂಯೋಜಕ ಶರಣಪ್ಪ ಸಿಂಗನಾಳ ಮಕ್ಕಳ ಸಹಾಯವಾಣಿ 1098 ರ ಕುರಿತು ಮತ್ತು ಪ್ರಕರಣಗಳ ವಿಧಗಳ ಕುರಿತು ಮಾಹಿತಿ ನೀಡಿದರು.
ಆರೋಗ್ಯ ಇಲಾಖೆಯ ಸಿಬ್ಬಂದಿಗಳು,ಗ್ರಾಪಂ ಮಟ್ಟದ ಎಲ್ಲ ಶಾಲಾ ಮುಖ್ಯೋಪಾಧ್ಯಯರು,ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಮಕ್ಕಳಿದ್ದರು. ಶಿಕ್ಷಕಿ ರೋಹಿಣಿ ಚಂಡೂರಮಠ, ವಿರುಪಾಕ್ಷಪ್ಪ ಮ್ಯಾಲಿ ನಿರೂಪಣೆ ಮಾಡಿದರು.