ಶಿವಗಂಗಾ ಶಾಲೆಯಲ್ಲಿ ಕಲಾ ಪ್ರತಿಭಾ ಕಾರ್ಯಕ್ರಮ
ಸೋಂಪುರ ಹೋಬಳಿಯ ಶಿವಗಂಗೆಯ ಶ್ರೀ ಶಿವಗಂಗಾ ಪ್ರೌಢಶಾಲೆಯಲ್ಲಿ ಬೆಂ.ಗ್ರಾ.ಜಿಲ್ಲಾ ಬಾಲಭವನ ಸಮಿತಿ ವತಿಯಿಂದ ನಡೆದ ಜಿಲ್ಲಾ ಮಟ್ಟದ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬಾಲ್ಯದಲ್ಲಿಯೇ ಮಕ್ಕಳಿಗೆ ಅವರ ಆಸಕ್ತಿಯ ವಿವಿಧ ಕಲೆಗಳನ್ನು ರೂಢಿಸಿಕೊಳ್ಳಲು ಪಾಲಕರು ಪ್ರೋತ್ಸಾಹಿಸಬೇಕು. ವಿವಿಧ ಕಲಾ ಪ್ರಕಾರಗಳಲ್ಲಿ ಬಾಲ, ಕಿಶೋರ ಮತ್ತು ಯುವ ಪ್ರತಿಭೆಗಳ ಸ್ಪರ್ಧೆಗಳನ್ನು ಜಿಲ್ಲಾ ಮಟ್ಟದಲ್ಲಿ ಸರ್ಕಾರ ಏರ್ಪಡಿಸುವ ಮೂಲಕ ತಮ್ಮ ಕಲಾ ಪ್ರತಿಭೆ ಗುರುತಿಸಲು ಅವಕಾಶ ಒದಗಿಸಿದ್ದು, ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಕಲಾಪ್ರತಿಭೆ ಪ್ರಸ್ತುತಪಡಿಸಬೇಕು ಎಂದರು.ಮುಖ್ಯಶಿಕ್ಷಕ ಆರ್.ಸಿದ್ದರಾಜಯ್ಯ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ವಿಶಿಷ್ಟ ಪ್ರತಿಭೆಯ ಅನಾವರಣಕ್ಕೆ ಕಲೋತ್ಸವ ಕಾರ್ಯಕ್ರಮ ಉತ್ತಮ ವೇದಿಕೆಯಾಗಲಿದೆ. ಸರ್ವರಿಗೂ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ದೊರೆತಾಗ ಸಮಾಜದಲ್ಲಿ ಗುರುತಿಸಿಕೊಳ್ಳುವಲ್ಲಿ ಸಹಕಾರಿಯಾಗುತ್ತದೆ ಎಂದರು.
ಅಂಗನವಾಡಿ ಶಿಕ್ಷಕಿ ಸುಜಾತಾ ಮಾತನಾಡಿ, ಇಂದಿನ ಯುವಸಮೂಹ ವಿದೇಶಿ ಆಚಾರ, ವಿಚಾರಗಳು, ಉಡುಗೆ, ತೊಡುಗೆಗಳ ಬಗ್ಗೆ ವ್ಯಾಮೋಹ ಬೆಳೆಸಿಕೊಂಡು ನಮ್ಮ ಸಂಪ್ರದಾಯ ಮರೆಯುತ್ತಿದ್ದಾರೆ. ಮಕ್ಕಳಲ್ಲಿರುವ ಕಲೆ- ಪ್ರತಿಭೆ, ಆತ್ಮಸ್ಥೈರ್ಯ, ಜಾನಪದ ಸಂಸ್ಕೃತಿ ಹಾಗೂ ನಾಡಿನ ವೇಷಭೂಷಣಗಳ ಪರಿಚಯಕ್ಕೆ ಕಲೋತ್ಸವ ಮಹತ್ವದ ಪಾತ್ರವಹಿಸುತ್ತದೆ ಎಂದರು.ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಿದರು.
---------- ಶಿವಗಂಗೆಯ ಶ್ರೀ ಶಿವಗಂಗಾ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಸಂಯೋಜಕಿ ಶ್ವೇತಾ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಿದರು.