ಮೊಬೈಲ್ ಆ್ಯಪ್ ಮೂಲಕ ಮಕ್ಕಳ ಹಾಜರಾತಿ ಕಡ್ಡಾಯ: ಸಿಇಒ ಅಶ್ವಿಜ ಬಿ.ವಿ.

KannadaprabhaNewsNetwork |  
Published : Nov 01, 2026, 02:15 AM IST
್ಿ್ಿ್ಿ | Kannada Prabha

ಸಾರಾಂಶ

ಮಕ್ಕಳ ಹಾಜರಾತಿ ದಾಖಲಿಸುವ ನಿರಂತರ ಆ್ಯಪ್ ಕುರಿತು ಅಧಿಕಾರಿಗಳು ಹೆಚ್ಚಿನ ನಿಗಾವಹಿಸಬೇಕು. ಪ್ರತಿದಿನ ಬೆಳಗ್ಗೆ ಮತ್ತು ಮಧ್ಯಾಹ್ನ ಶಾಲಾ ಮಕ್ಕಳ ಹಾಜರಾತಿಯನ್ನು ಕಡ್ಡಾಯವಾಗಿ ದಾಖಲಿಸುವಂತೆ ಶಿಕ್ಷಕರಿಗೆ ಸೂಚನೆ ನೀಡಬೇಕು. ಹಾಜರಾತಿ ದಾಖಲಾತಿಯ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳು ವರದಿಯನ್ನು ಜಿಲ್ಲಾ ಪಂಚಾಯಿತಿಗೆ ಸಲ್ಲಿಸಬೇಕು ಎಂದು ಅವರು ತಿಳಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರು

ಸರ್ಕಾರಿ ಶಾಲೆಗಳಲ್ಲಿ ಪ್ರತಿದಿನ ಮಕ್ಕಳ ಹಾಜರಾತಿಯನ್ನು ಪರಿಶೀಲಿಸುವುದು ಕಡ್ಡಾಯ. ನಿರಂತರ ಮೊಬೈಲ್ ಅಪ್ಲಿಕೇಶನ್ ಮೂಲಕ ಬೆಳಗ್ಗೆ ಮತ್ತು ಮಧ್ಯಾಹ್ನ ಹಾಜರಾತಿಯನ್ನು ದಾಖಲಿಸಬೇಕು. ವಿಫಲವಾದರೆ ಅಂತಹ ಶಿಕ್ಷಕರು ಮತ್ತು ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮಕ್ಕಳ ಶೈಕ್ಷಣಿಕ ಪ್ರಗತಿ, ಶಾಲೆಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಮಕ್ಕಳ ಹಾಜರಾತಿಯನ್ನು ದಾಖಲಿಸುವ ನಿರಂತರ ಆ್ಯಪ್‌ನ ಪ್ರಗತಿ ಹಾಗೂ ಮಕ್ಕಳು ಶಾಲೆಗೆ ಗೈರು ಹಾಜರಾಗುತ್ತಿರುವುದಕ್ಕೆ ಕಾರಣಗಳ ಕುರಿತು ಸುದೀರ್ಘವಾಗಿ ಚರ್ಚಿಸಿದರು.

ಶಾಲೆಯ ಎಲ್ಲಾ ಮಕ್ಕಳ ಹಾಜರಾತಿಯನ್ನು ನಿಯಮಾನುಸಾರ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಮಕ್ಕಳಿಗೆ ವಿತರಿಸಲಾಗುತ್ತಿರುವ ಶಾಲಾ ಶ್ಯೂ ಮತ್ತು ಸಾಕ್ಸ್ ಗಳ ಕುರಿತು ಮಾಹಿತಿ ಪಡೆದು, ಎಲ್ಲಾ ಮಕ್ಕಳಿಗೆ ಸೌಲಭ್ಯ ತಲುಪುವಂತೆ ಕ್ರಮವಹಿಸಲು ತಿಳಿಸಿದರು.

ಮಕ್ಕಳ ಹಾಜರಾತಿ ದಾಖಲಿಸುವ ನಿರಂತರ ಆ್ಯಪ್ ಕುರಿತು ಅಧಿಕಾರಿಗಳು ಹೆಚ್ಚಿನ ನಿಗಾವಹಿಸಬೇಕು. ಪ್ರತಿದಿನ ಬೆಳಗ್ಗೆ ಮತ್ತು ಮಧ್ಯಾಹ್ನ ಶಾಲಾ ಮಕ್ಕಳ ಹಾಜರಾತಿಯನ್ನು ಕಡ್ಡಾಯವಾಗಿ ದಾಖಲಿಸುವಂತೆ ಶಿಕ್ಷಕರಿಗೆ ಸೂಚನೆ ನೀಡಬೇಕು. ಹಾಜರಾತಿ ದಾಖಲಾತಿಯ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳು ವರದಿಯನ್ನು ಜಿಲ್ಲಾ ಪಂಚಾಯಿತಿಗೆ ಸಲ್ಲಿಸಬೇಕು ಎಂದು ಅವರು ತಿಳಿಸಿದರು.

ಅಕ್ಷರ ದಾಸೋಹ ಯೋಜನೆಯಡಿ ಮಕ್ಕಳಿಗೆ ವಿತರಿಸಲಾಗುತ್ತಿರುವ ಆಹಾರದ ಗುಣಮಟ್ಟವನ್ನು ಕಾಪಾಡಬೇಕು. ವಿಶೇಷವಾಗಿ ಮಕ್ಕಳಿಗೆ ನೀಡಲಾಗುತ್ತಿರುವ ಮೊಟ್ಟೆ ಮತ್ತು ಬಾಳೆಹಣ್ಣಿನ ವಿತರಣೆ ಕುರಿತು ಅಕ್ಷರ ದಾಸೋಹ ಅಧಿಕಾರಿಗಳು ಪ್ರತಿನಿತ್ಯ ಮಾಹಿತಿ ಸಂಗ್ರಹಿಸಬೇಕು. ಶಾಲಾವಾರು ಎಷ್ಟು ಮಕ್ಕಳು ಮೊಟ್ಟೆ ಸೇವಿಸುತ್ತಾರೆ ಹಾಗೂ ಎಷ್ಟು ಮಕ್ಕಳು ಮೊಟ್ಟೆಯ ಬದಲಿಗೆ ಬಾಳೆಹಣ್ಣು ಸೇವಿಸುತ್ತಾರೆ ಎಂಬ ನಿಖರ ದತ್ತಾಂಶವನ್ನು ಸಂಗ್ರಹಿಸಿ, ಅದರ ಆಧಾರದ ಮೇಲೆ ಅಗತ್ಯ ಮೇಲ್ವಿಚಾರಣೆ ನಡೆಸಬೇಕು ಎಂದು ಸೂಚಿಸಿದರು.

ಮಕ್ಕಳಲ್ಲಿ ಮೊಟ್ಟೆ ಸೇವನೆಯಿಂದ ದೊರೆಯುವ ಪೌಷ್ಟಿಕಾಂಶ ಹಾಗೂ ಆರೋಗ್ಯದ ಪ್ರಯೋಜನಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ಹಮ್ಮಿಕೊಳ್ಳಬೇಕು. ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆಯ ದೃಷ್ಟಿಯಿಂದ ಅಕ್ಷರ ದಾಸೋಹ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ(ಅಭಿವೃದ್ಧಿ) ಕೆ.ಪಿ. ಸಂಜೀವಪ್ಪ, ಉಪ ಕಾರ್ಯದರ್ಶಿ(ಆಡಳಿತ) ಈಶ್ವರಪ್ಪ, ಮುಖ್ಯ ಲೆಕ್ಕಾಧಿಕಾರಿ ನರಸಿಂಹಮೂರ್ತಿ, ಯೋಜನಾ ನಿರ್ದೇಶಕ ನಾರಾಯಣಸ್ವಾಮಿ, ಮುಖ್ಯ ಯೋಜನಾಧಿಕಾರಿ ಸಣ್ಣ ಮಸಿಯಪ್ಪ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ಹೋಟೆಲ್‌ ಈಜು ಕೊಳದಲ್ಲಿ 2 ವಿದೇಶಿಗರ ಸಾವು
ಪ್ರಜ್ವಲ್‌ ಜೀವಾವಧಿಗೆ ಕಾರಣ ಆದ ಮೂವರಿಗೆ ಕೇಂದ್ರ ಗೃಹ ಪ್ರಶಸ್ತಿ