ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಎಲ್ಲಾ ವ್ಯಾಪಾರವನ್ನು ಮಕ್ಕಳೇ ಮಾಡಿದರೂ ಕೂಡಾ ಪೋಷಕರು ಸಹ ಜೊತೆಯಲ್ಲಿ ಮಕ್ಕಳ ಲೆಕ್ಕಾಚಾರಕ್ಕೆ ನೆರವಾದರು. ಇದಕ್ಕೂ ಮುನ್ನ ಮಕ್ಕಳ ಸಂತೆಯನ್ನು ಬಿಜಿಎಸ್ ಹೇಮಗಿರಿ ಶಾಖಾ ಮಠದ ಕಾರ್ಯದರ್ಶಿ ಜೆ.ಎನ್.ರಾಮಕೃಷ್ಣೇಗೌಡ ಹಾಗೂ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಅವರು ಸ್ವತಃ ತಾವೇ ಖರೀದಿದಾರರಾಗಿ ಮಕ್ಕಳಿಂದ ಹಣ್ಣು, ಹೂಗಳನ್ನು ವ್ಯಾಪಾರ ಮಾಡಿ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ವ್ಯಾವಹಾರಿಕ ಜ್ಞಾನ ಬೆಳೆಯಲು ಮಕ್ಕಳ ಸಂತೆ ಸಹಕಾರಿಯಾಗಿದೆ. ವಿದ್ಯಾರ್ಥಿಗಳಿಗೆ ಕ್ರಿಯಾಶೀಲತೆ ಮತ್ತು ಸೃಜನಶೀಲತೆಯನ್ನು ಕಲಿಯಲು ಇದು ಬಹುದೊಡ್ಡ ವೇದಿಕೆಯಾಗಿದೆ ಎಂದರು.ಹೇಮಗಿರಿ ಬಿಜಿಎಸ್ ಶಾಖಾ ಮಠದ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ ಮಾತನಾಡಿ, ಬಿಜಿಎಸ್ ಸಂಸ್ಥೆ ಮಕ್ಕಳು ಬುದ್ದಿವಂತಿಕೆ ಹಾಳು ಮಾಡಿಕೊಳ್ಳದೆ ಅವರಲ್ಲಿರುವ ಆಸಕ್ತಿಯನ್ನು ಗುರುತಿಸಿ ಪ್ರೋತ್ಸಾಹಿಸಲು ಶಿಕ್ಷಣ ನೀಡುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಸಮಾಜ ಸೇವಕ ಆರ್‌ಟಿಒ ಮಲ್ಲಿಕಾರ್ಜುನ್, ಟಿಎಪಿಸಿಎಂಎಸ್ ಅಧ್ಯಕ್ಷ ಟಿ.ಬಲದೇವ್, ಬಿಜಿಎಸ್ ಸಂಸ್ಥೆ ಆಡಳಿತ ಮಂಡಳಿ ನಿರ್ದೇಶಕರಾದ ಲಾಯರ್ ವಿಜಯಕುಮಾರ್, ಕಸಾಪ ಮಾಜಿ ಅಧ್ಯಕ್ಷರಾದ ಎಂ.ಕೆ.ಹರಿಚರಣತಿಲಕ್, ಕೆ.ಆರ್.ನೀಲಕಂಠ, ಮಾಜಿ ಕಾರ್ಯಾಧ್ಯಕ್ಷ ಬಳ್ಳೇಕೆರೆ ಮಂಜುನಾಥ್, ವೈದ್ಯರಾದ ಡಾ.ಕಾವ್ಯ, ಡಾ.ರಾಜೇಶ್ವರಿ, ತಾಲೂಕು ಬಿಜೆಪಿ ಅಧ್ಯಕ್ಷ ಸಾರಂಗಿ ನಾಗಣ್ಣ, ಪ್ರಾಂಶುಪಾಲ ಪ್ರಸಾದೇಗೌಡ, ಆಡಳಿತ ವಿಭಾಗದ ರಾಮಚಂದ್ರ, ಮುಖ್ಯ ಶಿಕ್ಷಕಿ ಶೃತಿ ಹಲವರು ಇದ್ದರು.