ಆನ್‌ಲೈನ್ ಮೂಲಕ ಚಾಲನೆ ನೀಡಿ ಸಚಿವ ಪ್ರಿಯಾಂಕ್ ಖರ್ಗೆ ಶ್ಲಾಘನೆ । ಸಮಸ್ಯೆಗಳನ್ನು ಬಗೆಹರಿಸುವ ಭರವಸೆ
ಮಕ್ಕಳ ವಿಶೇಷ ಗ್ರಾಮಸಭೆ ರಾಜ್ಯಕ್ಕೆ ಅಲ್ಲ ದೇಶಕ್ಕೆ ಮಾದರಿ ಗ್ರಾಮ ಸಭೆ ಆಯೋಜಿಸಿರುವುದು ಮಕ್ಕಳ ಹಕ್ಕುಗಳ ಬೇಡಿಕೆಗೆ ಅನುಕೂಲಕ್ಕೆ ತಕ್ಕಂತೆ ಜನಪ್ರತಿನಿಧಿ ಅಧಿಕಾರಿಗಳು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಬೇಕು ಎಂದು ಪಂಚಾಯತ್ ರಾಜ್ ಇಲಾಖೆ ಹಾಗೂ ಐಟಿ, ಬಿಟಿ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಆನ್‌ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಶುಭ ಕೋರಿ ಮಾತನಾಡಿದರು.
ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ವತಿಯಿಂದ ಮನಗಳ್ಳಿ ಪ್ರೌಢಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ ಮಕ್ಕಳ ವಿಶೇಷ ಗ್ರಾಮ ಸಭೆ ಕಾರ್ಯಕ್ರಮದಲ್ಲಿ ಆನ್‌ಲೈನ್ ಮೂಲಕ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆ ಮಾತನಾಡಿದರು.ಮಕ್ಕಳು ದೇಶದ ಆಸ್ತಿ ಹೀಗಾಗಿ ಸರ್ಕಾರಿ ಶಾಲೆಗಳ ಸುಧಾರಣೆಗೆ ಸರ್ವ ರೀತಿಯಲ್ಲಿಯೂ ಕಾರ್ಯಕ್ರಮವನ್ನು ಜನಪ್ರತಿನಿಧಿ ಅಧಿಕಾರಿಗಳು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಎಲ್ಲ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಶಾಸಕ ಎಂ.ಆರ್. ಮಂಜುನಾಥ್ ಪ್ರಸ್ತಾವಿಕವಾಗಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಲೂಕಿನ ಮಣ್ಣಗಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆಯನ್ನು ಆಯೋಜನೆ ಮಾಡಲು ಅವಕಾಶ ಕಲ್ಪಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಪಂಚಾಯತ್ ರಾಜ್ ಇಲಾಖೆ ಮುಖಾಂತರ ಚಾಮರಾಜನಗರ ಜಿಲ್ಲೆ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆಯುತ್ತಿರುವ ಈ ಉತ್ತಮ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ತಮ್ಮ ಸುತ್ತಮುತ್ತಲಿನ ಶಾಲೆ ಹಾಗೂ ಗ್ರಾಮಗಳಲ್ಲಿರುವ ಸಮಸ್ಯೆಗಳನ್ನು ಸಚಿವರ ಜೊತೆ ಮಾತನಾಡಿದರು.
ಉತ್ತಮ ಕಾರ್ಯಕ್ರಮ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಾಲೂಕಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸಾರ್ವಜನಿಕರ ನಾಗರಿಕರ ಮತ್ತು ಮಕ್ಕಳ ಅಭಿವೃದ್ಧಿ ಹೆಚ್ಚಿನ ಹೊತ್ತು ನೀಡಿದ್ದಾರೆ ಎಂದು ತಿಳಿಸಿದರು.ಸಮಸ್ಯೆಗೆ ಸಚಿವರಿಂದ ಭರವಸೆ:
ಸಚಿವರು ವಿದ್ಯಾರ್ಥಿಗಳು ಕೇಳಿರುವ ಸಮಸ್ಯೆಗಳ ಪಟ್ಟಿಯನ್ನು ಮತ್ತು ಅದಕ್ಕೆ ಬೇಕಾಗಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಿ ಸರ್ಕಾರಕ್ಕೆ ವರದಿ ಸಲ್ಲಿಸಿದರೆ ಕೂಡಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಆರೋಗ್ಯ ಇಲಾಖೆಯ ಹಿರಿಯ ತಾಲೂಕು ವೈದ್ಯಾಧಿಕಾರಿ ಪ್ರಕಾಶ್ ಮಾತನಾಡಿ, ಮಕ್ಕಳ ಗ್ರಾಮ ಸಭೆ ಆಯೋಜಿಸುವುದು ಉತ್ತಮ ಕಾರ್ಯಕ್ರಮವಾಗಿದ್ದು ಗ್ರಾಮಗಳಲ್ಲಿ ಬಾಲ್ಯ ವಿವಾಹ ತೊಡೆದು ಹಾಕಲು ಉತ್ತಮ ಕಾರ್ಯಕ್ರಮ ಇದಾಗಿದ್ದು ಆರೋಗ್ಯ ಇಲಾಖೆಯಲ್ಲಿ ಸಿಗುವ ಸೇವೆಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ನಾಗರಿಕರು ವಿದ್ಯಾರ್ಥಿಗಳು ಮುಂದಾಗಬೇಕು ಎಂದರು.
ಮಕ್ಕಳ ಗ್ರಾಮ ಸಭೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಶಿವಕುಮಾರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಆಪ್ತ ಗೆಳತಿ ಕಾರ್ಯಕ್ರಮವನ್ನು ಪೊಲೀಸ್ ಇಲಾಖೆ ಮುಖಾಂತರ ಯಶಸ್ವಿಯಾಗಿ ನೀಡುವುದರ ಮೂಲಕ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆಸಿ, ಪೊಲೀಸ್ ಠಾಣೆ ಎಂದರೆ ಭಯಬೇಡ ನೇರವಾಗಿ ದೂರುಗಳಿದ್ದರೆ ಸಲ್ಲಿಸಿ ಭಯಮುಕ್ತರಾಗಿ ಮಕ್ಕಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಪೊಲೀಸ್ ಇಲಾಖೆ ಜೊತೆ ಸಹಕಾರ ನೀಡಬೇಕು ಎಂದು ಇದೇ ವೇಳೆಯಲ್ಲಿ ತಿಳಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
-------------24ಸಿಎಚ್‌ಎನ್52
ಹನೂರು ಮಣ್ಣಗಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ವಿಶೇಷ ಗ್ರಾಮ ಸಭೆ ಕಾರ್ಯಕ್ರಮವನ್ನು ಶಾಸಕ ಎಂಆರ್ ಮಂಜುನಾಥ್ ವಿದ್ಯಾರ್ಥಿಗಳ ಜೊತೆಗೂಡಿ ಉದ್ಘಾಟನೆ ಗೊಳಿಸಿದರು.-----------