ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಪ್ರತಿಭೆ ಅನಾವರಣ

KannadaprabhaNewsNetwork |  
Published : Nov 13, 2025, 12:30 AM IST
12ಕೆಎಂಎನ್ ಡಿ12 | Kannada Prabha

ಸಾರಾಂಶ

ಶಾಲಾ ಹಂತದಲ್ಲಿ ನಡೆಯುವ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳಲ್ಲಿರುವ ಪ್ರತಿಭೆ ಹೊರಹಾಕಲು ಸೂಕ್ತ ವೇದಿಕೆಯಾಗಿದೆ. ಮಕ್ಕಳಲ್ಲಿ ಹಲವು ಬಗೆಯ ಪ್ರತಿಭೆಗಳಿವೆ. ಅವುಗಳನ್ನು ಗುರುತಿಸಿ ಇಂತಹ ಕಾರ್ಯಕ್ರಮದಲ್ಲಿ ಪ್ರದರ್ಶನ ಮಾಡುವ ಮೂಲಕ ಹೊರತೆಗೆಯುವ ಕೆಲಸವನ್ನು ಶಿಕ್ಷಕರು ಮಾಡಬೇಕು.

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ಬಿಂಡಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬನ್ನಂಗಾಡಿ ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು.

ಬನ್ನಂಗಾಡಿ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳಿಂದ ನೂರಾರು ಮಕ್ಕಳು ಭಾಗವಹಿಸಿ ತಮ್ಮ ಪ್ರತಿಭೆ ಅನಾವರಣಗೊಳಿಸಿದರು. ಪೂಜಾ ಕುಣಿತ, ಕ್ಲೈಮಾಡ್ಲಿಂಗ್, ನೃತ್ಯ, ಭಾವಗೀತೆ, ನಾಟಕ, ಏಕಪಾತ್ರ ಅಭಿನಯ ಸೇರಿದಂತೆ ಹಲವು ಕಾರ್ಯಕ್ರಮಗಳ ಮೂಲಕ ಮಕ್ಕಳು ತಮ್ಮ ಪ್ರತಿಭೆ ಅನಾವರಣಗೊಳಿಸಿದರು.

ಕಾರ್ಯಕ್ರಮಕ್ಕೆ ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್ ಚಾಲನೆ ನೀಡಿ ಮಾತನಾಡಿ, ಶಾಲಾ ಹಂತದಲ್ಲಿ ನಡೆಯುವ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳಲ್ಲಿರುವ ಪ್ರತಿಭೆ ಹೊರಹಾಕಲು ಸೂಕ್ತ ವೇದಿಕೆಯಾಗಿದೆ ಎಂದರು.

ಮಕ್ಕಳಲ್ಲಿ ಹಲವು ಬಗೆಯ ಪ್ರತಿಭೆಗಳಿವೆ. ಅವುಗಳನ್ನು ಗುರುತಿಸಿ ಇಂತಹ ಕಾರ್ಯಕ್ರಮದಲ್ಲಿ ಪ್ರದರ್ಶನ ಮಾಡುವ ಮೂಲಕ ಹೊರತೆಗೆಯುವ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದರು.

ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಎಸ್‌ಡಿಎಂಸಿ ಸದಸ್ಯರು, ಗ್ರಾಮದ ಯಜಮಾನರು, ಮುಖಂಡರು ಬಹುಮಾನ ವಿತರಿಸಿದರು. ಮಕ್ಕಳಿಗೆ ಗ್ರಾಮಸ್ಥರು ಊಟದ ವ್ಯವಸ್ಥೆ ಕಲ್ಪಿಸಿದ್ದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಬಿ.ಜಿ.ರಾಘವೇಂದ್ರ, ಮುಖ್ಯಶಿಕ್ಷಕ ಎಂ.ಕುಮಾರಸ್ವಾಮಿ, ಸಹಶಿಕ್ಷಕರಾದ ಎಂ.ಬಿ.ಗೋಪಾಲ, ಎಸ್.ಸತೀಶ್‌, ಶಿಕ್ಷಣ ಸಂಯೋಜಕ ರಮೇಶ್, ಸಿಆರ್‌ಪಿ ರಾಮಕೃಷ್ಣೇಗೌಡ, ಎಸ್‌ಡಿಎಂಸಿ ಸದಸ್ಯರು, ಗ್ರಾಪಂ ಸದಸ್ಯರು, ವಿವಿಧ ಸಂಘ-ಸಂಸ್ಥೆ ಅಧ್ಯಕ್ಷರು, ನಿರ್ದೇಶಕರು, ಸದಸ್ಯರು ಸೇರಿದಂತೆ ಗ್ರಾಮದ ಮುಖಂಡರು, ಯಜಮಾನರು ಭಾಗವಹಿಸಿದ್ದರು.

ವಿದ್ಯಾರ್ಥಿಗಳಿಗೆ ಆಧಾರ್ ಆಧಾರಿತ ಬಯೋಮೆಟ್ರಿಕ್ ಇ-ದೃಢೀಕರಣ

ಕನ್ನಡ ಪ್ರಭ ವಾರ್ತೆ ಮಳವಳ್ಳಿ

ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ಕೇಂದ್ರ ಪುರಸ್ಕೃತ ಪರಿಶಿಷ್ಟ ಜಾತಿ ವಿದ್ಯಾರ್ಥಿ ವೇತನಗಳಿಗೆ ವಿದ್ಯಾರ್ಥಿಗಳು ಆಧಾರ್ ಆಧಾರಿತ ಬಯೋಮೆಟ್ರಿಕ್ ಇ-ದೃಢೀಕರಣ ಮಾಡಿಕೊಳ್ಳಬೇಕಿದೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು, ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳು, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಪಡೆಯಲು ಬಯೋಮೆಟ್ರಿಕ್ ಅತ್ಯವಶ್ಯಕವಾದೆ. ತಾಲೂಕು ಸಮಾಜ ಕಲ್ಯಾಣ ಕಚೇರಿಯಲ್ಲಿ ಯಾವುದೇ ಸೇವಾ ಶುಲ್ಕವಿಲ್ಲದೇ ನೋಂದಾಣಿಸಿಕೊಳ್ಳಬಹುದು. ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಬಯೋಮೆಟಿಕ್ ಇ-ದೃಢಿಕರಣ ಪ್ರಕ್ರಿಯೆಗೆ ಒಳಪಡಲು ಡಿ.15 ಕೊನೆ ದಿನ. ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳಬೇಕೆಂದು ಸಮಾಜಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

PREV

Recommended Stories

250 ಕೋಟಿ ಹಗರಣ ಕಡತ ನಾಶ ಮಾಡಿದ್ರೂ ಸಿಕ್ಕಿದವು!?
ಬಿಳಿಕೆರೆ ಬಳಿ ಒಂದು ಗಂಡು ಹುಲಿ ಮರಿ ಸೆರೆ