ಹೆತ್ತವರ ಕೀರ್ತಿಗೆ ಮಕ್ಕಳು ಪಾತ್ರರಾಗಿ: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ

KannadaprabhaNewsNetwork | Updated : Dec 16 2023, 02:01 AM IST

ಸಾರಾಂಶ

ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ, ಮಕ್ಕಳ ಕಾಣೆ ಪ್ರಕರಣಗಳ ಬಗ್ಗೆ ತೀವ್ರ ನಿಗಾ ವಹಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಂಡು ಬಾಲ್ಯ ವಿವಾಹ, ಬಾಲಕಾರ್ಮಿಕರು ಹಾಗೂ ಮಕ್ಕಳ ಕಾಣೆ ಪ್ರಕರಣ ಕಂಡು ಬಂದರೇ ಯಾವ ಮುಲಾಜಿಯಿಲ್ಲದೆ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು

ಕನ್ನಡಪ್ರಭ ವಾರ್ತೆ ಯಲಬುರ್ಗಾ

ವಿದ್ಯಾರ್ಥಿಗಳು ಪ್ರೀತಿ, ಪ್ರೇಮಕ್ಕೆ ಹೆಚ್ಚು ಒತ್ತು ಕೊಡದೇ ಗುಣಮಟ್ಟದ ಶಿಕ್ಷಣ ಪಡೆದು ಹೆತ್ತವರ ಕೀರ್ತಿಗೆ ಮಕ್ಕಳು ಪಾತ್ರರಾಗಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು.

ಪಟ್ಟಣದ ಬುದ್ಧ, ಬಸವ, ಅಂಬೇಡ್ಕರ್‌ ಭವನದಲ್ಲಿ ಶುಕ್ರವಾರ ತಾಲೂಕಾಡಳಿತ, ತಾಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಬಾಲ್ಯ ವಿವಾಹ ನಿಷೇಧ ಕಾಯ್ದೆ-೨೦೦೬ ಕರ್ನಾಟಕ ತಿದ್ದುಪಡಿ-೨೦೧೬, ಮಕ್ಕಳ ನ್ಯಾಯ ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯಿದೆ, ಮಕ್ಕಳ ಉಚಿತ ಕಡ್ಡಾಯ ಶಿಕ್ಷಣ ಕುರಿತು ತಾಲೂಕಿನ ಅಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರಿಗೆ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆ, ಮಕ್ಕಳ ಮೇಲೆ ಲೈಗಿಂಕ ದೌಜನ್ಯಗಳಂತಹ ಪ್ರಕರಣ ತಡೆಯಲು ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದರು.

ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ, ಮಕ್ಕಳ ಕಾಣೆ ಪ್ರಕರಣಗಳ ಬಗ್ಗೆ ತೀವ್ರ ನಿಗಾ ವಹಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಂಡು ಬಾಲ್ಯ ವಿವಾಹ, ಬಾಲಕಾರ್ಮಿಕರು ಹಾಗೂ ಮಕ್ಕಳ ಕಾಣೆ ಪ್ರಕರಣ ಕಂಡು ಬಂದರೇ ಯಾವ ಮುಲಾಜಿಯಿಲ್ಲದೆ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ, ಮಹಿಳಾ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೋಹಿಣಿ ಕೊಟಗಾರ, ಇಒ ಸಂತೋಷ ಪಾಟೀಲ ಬಿರಾದಾರ, ಸಿಡಿಪಿಒ ಬೆಟ್ಟದಪ್ಪ ಮಾಳೇಕೊಪ್ಪ, ವೈದ್ಯಾಧಿಕಾರಿ ಡಾ.ರಚನಾ, ತಹಸೀಲ್ದಾರ್‌ ಬಸವರಾಜ ತೆನ್ನಳ್ಳಿ, ಬಿಸಿಎಂ ಅಧಿಕಾರಿ ಶಿವಶಂಕರ ಕರಡಕಲ್, ಸಮಾಜ ಕಲ್ಯಾಣ ಅಧಿಕಾರಿ ವಿ.ಕೆ. ಬಡಿಗೇರ, ಶಿವಶಂಕರ ತಳವಾರ, ಪ್ರಶಾಂತ ರಡ್ಡಿ, ಶಿವಲೀಲಾ ಹೊನ್ನೂರು, ಶರಣಪ್ಪ ಇದ್ದರು.

Share this article