ಮಕ್ಕಳು ಶಿಸ್ತಿನಿಂದ ಯಶಸ್ಸು ಸಾಧಿಸಬೇಕು

KannadaprabhaNewsNetwork |  
Published : Sep 20, 2025, 01:01 AM IST
ಪೊಟೋ ಪೈಲ್ : 19ಬಿಕೆಲ್2 | Kannada Prabha

ಸಾರಾಂಶ

ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ತಂದೆ, ತಾಯಿಯ ಶ್ರಮ ಮಹತ್ವದಾಗಿದೆ.

ಭಟ್ಕಳ: ಇಲ್ಲಿಯ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಶ್ರೀ ನಾಗಯಕ್ಷೆ ಧರ್ಮಾರ್ಥ ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿಯ ಹಾಸ್ಯ ಮತ್ತು ಜೀವನ ಮೌಲ್ಯಗಳ ಉಪನ್ಯಾಸಕಿ ಸಂಧ್ಯಾ ಶೆಣೈ, ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ತಂದೆ, ತಾಯಿಯ ಶ್ರಮ ಮಹತ್ವದಾಗಿದೆ. ವಿದ್ಯಾರ್ಥಿಗಳು ಇದನ್ನರಿತು ಕಾಲೇಜಿನಲ್ಲಿ ಶಿಸ್ತಿನಿಂದಿರುವ ಮೂಲಕ ಯಶಸ್ಸನ್ನು ಸಾಧಿಸಬೇಕು ಎಂದರು.

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ, ಸಾಹಿತಿ ಶ್ರೀಧರ್ ಶೇಟ್ ಶಿರಾಲಿ ಮಾತನಾಡಿ, ವಿದ್ಯಾರ್ಥಿಗಳು ನಿರಂತರ ತಾಳ್ಮೆ ಹಾಗೂ ಪ್ರಯತ್ನದಿಂದ ಜೀವನದಲ್ಲಿ ಗುರಿ ಸಾಧಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾಲೇಜಿನ ಹಳೆಯ ವಿದ್ಯಾರ್ಥಿ ಹಾಗೂ ಎಲ್‌ಐಸಿ ಅಭಿವೃದ್ಧಿ ಅಧಿಕಾರಿ ನಾಗರಾಜ್ ನಾಯ್ಕ ಮಾತನಾಡಿ, ಕಾಲೇಜಿನಲ್ಲಿ ನಡೆಯುವ ಪಠ್ಯವಲ್ಲದೆ ಪಠ್ಯೇತರ ಚಟುವಟಿಕೆಯಲ್ಲೂ ಪಾಲ್ಗೊಳ್ಳುವ ಮೂಲಕ ತಮ್ಮ ಕೌಶಲ್ಯ ವೃದ್ಧಿಸಿಕೊಳ್ಳಬೇಕು ಎಂದರು.

ಭಟ್ಕಳ ಎಜುಕೇಶನ್ ಟ್ರಸ್ಟ್‌ನ ಟ್ರಸ್ಟಿ ಮ್ಯಾನೇಜರ್ ರಾಜೇಶ್ ನಾಯಕ್ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಅಧ್ಯಕ್ಷ ಡಾ. ಸುರೇಶ್ ನಾಯಕ್ ವಿದ್ಯಾರ್ಥಿಗಳ ಸಾಧನೆ ಕೊಂಡಾಡಿದರು. ಪ್ರಾಂಶುಪಾಲ ಶ್ರೀನಾಥ್ ಪೈ ಸ್ವಾಗತಿಸಿದರು. ಉಪನ್ಯಾಸಕ ಸುಬ್ರಹ್ಮಣ್ಯ ನಾಯ್ಕ್ ವಂದಿಸಿದರು. ವಿದ್ಯಾರ್ಥಿನಿಯರಾದ ಆಗ್ನೇಸ್ ರೇಗೋ ಮತ್ತು ನಮೃತಾ ಹುಲ್ಸವಾರ್ ಕಾರ್ಯಕ್ರಮ ನಿರೂಪಿಸಿದರು. ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀಧರ ಶೇಟ್ ಮತ್ತಿತರರನ್ನು ಗೌರವಿಸಲಾಯಿತು. ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರ ನೀಡಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು. ಭಟ್ಕಳದ ಗುರು ಸುಧೀಂದ್ರ ಕಾಲೇಜಿನಲ್ಲಿ ನಡೆದ ಸ್ವಾಗತ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಉತ್ತಮ ಪ್ರಶಸ್ತಿ ಪಡೆದ ಶಿಕ್ಷಕ ಶ್ರೀಧರ ಶೇಟ್ ಮತ್ತಿತರರನ್ನು ಗೌರವಿಸಲಾಯಿತು.ಗುರು ಸುಧೀಂದ್ರ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಜೆಪಿ ರಾಜ್ಯಗಳಲ್ಲಿ ಯಾಕೆ ನೌಕರಿ ಸೃಷ್ಟಿ ಆಗಿಲ್ಲ : ಸಿದ್ದರಾಮಯ್ಯ
ಹತ್ಯೆ ಕೇಸಲ್ಲಿ ಬೈರತಿಗೆ ಸದ್ಯಕ್ಕಿಲ್ಲ ಬಂಧನ ಭೀತಿ