- ಮೂಡಬಾಗಿಲು ಜ್ಞಾನ ಗಂಗೋತ್ರಿ ಪ್ರೌಢಶಾಲೆಯಲ್ಲಿ ಮುಂಗಾರು ಸಾಹಿತ್ಯ ಸಂಭ್ರಮ
ಮಕ್ಕಳು ಹದಿ ಹರೆಯದಲ್ಲಿ ತುಂಬಾ ಜಾಗ್ರತೆ ವಹಿಸಬೇಕು. ಪೋಷಕರು ಸಹ ಹದಿಹರೆಯದ ಮಕ್ಕಳ ಬಗ್ಗೆ ನಿಗಾ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವೈ.ಎಂ.ಲಲಿತ ಸಲಹೆ ನೀಡಿದರು.
ಮಂಗಳವಾರ ಮೂಡಬಾಗಿಲು ಜ್ಞಾನ ಗಂಗೋತ್ರಿ ಪ್ರೌಢ ಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಏರ್ಪಡಿಸಿದ್ದ ಮುಂಗಾರು ಸಾಹಿತ್ಯ ಸಂಭ್ರಮದಲ್ಲಿ ಮಕ್ಕಳಲ್ಲಿ ಮಾನಸಿಕ ಮತ್ತು ದೈಹಿಕ ಆರೋಗ್ಯ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ, ಆಹಾರ ಕ್ರಮ, ಸ್ವಚ್ಛತೆ ಕಲಿಸಬೇಕು.ಮಳೆಗಾಲ, ಬೇಸಿಗೆ ಕಾಲ ಹಾಗೂ ಚಳಿಗಾಲದಲ್ಲಿ ಧರಿಸುವ ಉಡುಪು, ಆಹಾರದ ಬಗ್ಗೆ ತಿಳುವಳಿಕೆ ನೀಡಬೇಕು ಎಂದರು.ಸಭೆ ಅಧ್ಯಕ್ಷತೆ ವಹಿಸಿದ್ದ ತಾಲೂಕು ಕಸಾಪ ಅಧ್ಯಕ್ಷ ಪೂರ್ಣೇಶ್ ಮಾತನಾಡಿ, ಮಕ್ಕಳು ತಂದೆ,ತಾಯಿ ಹಾಗೂ ಗುರು ಹಿರಿಯರಿಗೆ ಗೌರವಿಸುವ ಕೆಲಸ ಮಾಡಬೇಕು. ಕನ್ನಡ ಶಾಲೆ ಉಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಸರ್ಕಾರಿ ಶಾಲೆ ಆರಂಭದ ದಿನ ಮಕ್ಕಳನ್ನು ಗೌರವದಿಂದ, ಸಂಭ್ರಮದಿಂದ ಬರಮಾಡಿಕೊಂಡಿರುವುದು ಸಂತಸದ ವಿಷಯ ಎಂದರು. ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಖಜಾಂಚಿ ಬಿ.ಎಸ್.ಆಶೀಶ್ ಕುಮಾರ್ ಮಾತನಾಡಿ ಹದಿಹರೆಯದ ವಯಸ್ಸಿನಲ್ಲಿ ಮಾನಸಿಕ ಹಾಗೂ ದೈಹಿಕ ತಿಳುವಳಿಕೆ ಅಗತ್ಯ.
ವಿವೇಕಾನಂದ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಎಚ್.ಎಸ್.ಕೃಷ್ಣಮೂರ್ತಿ ಉದ್ಘಾಟಿಸಿದರು. ಸಹ ಶಿಕ್ಷಕರಾದ ಶಕುಂತಳ, ಶಿವಮೂರ್ತಿ, ಸೋಮಶೇಖರ್, ಎಸ್.ಕೆ.ಪ್ರದೀಪ್ ಉಪಸ್ಥಿತರಿದ್ದರು.