ಮಕ್ಕಳ ಕಲಿಕಾ ಆಸಕ್ತಿಗೆ ತಕ್ಕಂತೆ ಪ್ರೋತ್ಸಾಹ ನೀಡಬೇಕು: ರವಿ

KannadaprabhaNewsNetwork |  
Published : Feb 20, 2024, 01:45 AM IST
ರೋಣ ತಾಲೂಕಿನ ಚಿಕ್ಕಮಣ್ಣೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.21 ರಿಂದ 24 ರವರೆಗೆ 3 ದಿನಗಳ ಮಕ್ಕಳ ಸಾಹಿತ್ಯ ಸಂಭ್ರಮವನ್ನು ನಡೆಸುವ ಕುರಿತು ಪೂರ್ವಭಾವಿ ಸಭೆ ಜರುಗಿತು. | Kannada Prabha

ಸಾರಾಂಶ

ಮಕ್ಕಳ ಕಲಿಕಾ ಆಸಕ್ತಿಯನ್ನು ಗಮನಿಸಿ ಅವರ ಆಸಕ್ತಿಗೆ ತಕ್ಕಂತೆ ಪ್ರೋತ್ಸಾಹ ನೀಡಬೇಕು, ಅಂದಾಗ ಮಾತ್ರ ಮಕ್ಕಳಲ್ಲಿ ಇರುವ ಸೃಜನಶೀಲತೆಯು ಹೊರ ಬರಲು ಸಾಧ್ಯ ಎಂದು ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ರವಿ.ಎ.ಎನ್. ಹೇಳಿದರು.

ರೋಣ: ಮಕ್ಕಳ ಕಲಿಕಾ ಆಸಕ್ತಿಯನ್ನು ಗಮನಿಸಿ ಅವರ ಆಸಕ್ತಿಗೆ ತಕ್ಕಂತೆ ಪ್ರೋತ್ಸಾಹ ನೀಡಬೇಕು, ಅಂದಾಗ ಮಾತ್ರ ಮಕ್ಕಳಲ್ಲಿ ಇರುವ ಸೃಜನಶೀಲತೆಯು ಹೊರ ಬರಲು ಸಾಧ್ಯ ಎಂದು ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ರವಿ.ಎ.ಎನ್. ಹೇಳಿದರು.

ತಾಲೂಕಿನ ಚಿಕ್ಕಮಣ್ಣೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಗ್ರಾಮೀಣಾಭಿವೃದ್ಧಿ‌ ಮತ್ತು ಪಂಚಾಯತ ರಾಜ್ ಇಲಾಖೆ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ಸಂಯುಕ್ತ ಆಶ್ರಯದಲ್ಲಿ ಫೆ.21ರಿಂದ 24ರ ವರೆಗೆ 3 ದಿನಗಳ ಮಕ್ಕಳ ಸಾಹಿತ್ಯ ಸಂಭ್ರಮವನ್ನು ನಡೆಸುವ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ಉತ್ತಮ ಸಮಾಜ ಕಟ್ಟಬೇಕು ಅಂದರೆ ನಾವು ಮಕ್ಕಳಿಗೆ ಯೋಗ್ಯ ಶಿಕ್ಷಣ ನೀಡಬೇಕು, ಮಕ್ಕಳು ಚಿಕ್ಕವರಿದ್ದಾಗಲೆ ಅವರಲ್ಲಿರುವ ಪ್ರತಿಭೆ ಗುರುತಿಸಿ ಅದಕ್ಕೆ ತಕ್ಕಂತೆ ಶಿಕ್ಷಣ ಕೊಡುವುದು ನಮ್ಮ ಕರ್ತವ್ಯ. ಶಿಕ್ಷಣದ ಉದ್ದೇಶ ಸ್ವಾರ್ಥಕವಾಗಬೇಕಾದರೇ ಇಂತಹ ಕಾರ್ಯಕ್ರಮ ಅವಶ್ಯ, ಇದರ ಜೊತೆಗೆ ಮಕ್ಕಳಲ್ಲಿ ಅಡಗಿರುವ ಸಾಮರ್ಥ್ಯದ ಅಭಿವೃದ್ಧಿ ಸಹ ಆಗುತ್ತದೆ ಎಂದರು.ಎಫ್.ಸಿ.ಚೇಗರಡ್ಡಿ ಮಾತನಾಡಿ, ಮಕ್ಕಳ ಸರ್ವತೋಮುಖ ಕಲಿಕೆಗೆ ಪೂರಕವಾಗಿ ಕಥೆ ಕಟ್ಟೊಣ, ಕವಿತೆ ರಚಿಸೋಣ, ನಾಟಕ ರಚನೆ, ವರದಿ ಮಾಡುವಿಕೆ ಕುರಿತು ಮಕ್ಕಳಿಗೆ 3 ದಿನಗಳ ಕಾರ್ಯಾಗಾರ ಮಾಡಲಾಗುತ್ತದೆ 100ಕ್ಕೂ ಹೆಚ್ಚು ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಮಕ್ಕಳಲ್ಲಿ ಇರುವ ಕ್ರಿಯಾಶೀಲತೆ ಸಂಪನ್ಮೂಲ ವ್ಯಕ್ತಿಗಳು ಮಾರ್ಗದರ್ಶನ ಮಾಡುತ್ತಾರೆ ಎಂದು ತಿಳಿಸಿದರು.ಈ ವೇಳೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ರಶೀದ ಹುಣಸಿಮರದ, ವಿವಿಧ ಶಾಲೆಯ ಮುಖ್ಯೋಪಾಧ್ಯಾಯರಾದ ಎಸ್. ವಿ.ಮಾಳವಾಡ, ಎಸ್.ಬಿ. ಹಿರೇಮಠ, ಎನ್.ಆರ್. ಬೇವಿನಮರದ, ಎಸ್.ಜೆ. ಹಿರೇಮಠ, ಎಲ್.ಸಿ. ಮುಂಡೆವಾಡ, ಮಹೇಶಗೌಡ ಪಾಟೀಲ್, ಎಂ.ಕೆ. ಜಮಖಾನದ, ವಿಠ್ಠಲ ಅಬ್ಬಿಗೇರಿ, ಎಚ್.ಎನ್‌. ಭಜಂತ್ರಿ, ಸಿ.ಎಸ್.ಪರಡ್ಡಿ ಸೇರಿದಂತೆ ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇವೇಗೌಡರು ನಮ್ಮ ಪಕ್ಷದಲ್ಲಿದ್ದರು - ಹುಷಾರು ಅಶೋಕ್, ನೀನೇ ಸತ್ತು ಹೋಗ್ತೀಯ : ಸಿಎಂ
ವಸುಂಧರಾ ಭೂಪತಿ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ