ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಗರ ಹೊರ ವಲಯದ ಬಿಜಿಎಸ್ ವರ್ಲ್ಡ್ ಸ್ಕೂಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾತಾ-ಪಿತೃ ವಂದನಾ ಕಾರ್ಯಕ್ರಮ ಹಾಗೂ ಪದವಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಮನೆಯಲ್ಲೇ ಕಲಿಕೆ ಹೆಚ್ಚುಶಾಲೆಯಲ್ಲಿ ಮಕ್ಕಳು ಕಲಿಯುವುದಕ್ಕಿಂತ ಹೆಚ್ಚು ಮನೆ ಹಾಗೂ ಸಮಾಜದಿಂದ ಕಲಿಯುತ್ತವೆ. ಹಾಗಾಗಿ ಉತ್ತಮ ನಡತೆ, ಆಚಾರ, ವಿಚಾರ ಮುಂತಾದ ಸಂಗತಿಗಳು ಸಿಗುವ ಹಾಗೆ ನೋಡಿಕೊಳ್ಳಬೇಕು. ಬಾಲ್ಯದಲ್ಲಿ ಕಲಿತದ್ದು ಕಟ್ಟಡಕ್ಕೆ ಅಡಿಪಾಯದಂತೆ ಜೀವನದಲ್ಲಿ ಭವಿಷ್ಯಕ್ಕೆ ನೆರವಾಗುತ್ತದೆ. ಮಕ್ಕಳಿಗೆ ಚಿಕ್ಕಂದಿನಿಂದಲೇ ಸಂಸ್ಕಾರ, ಮೌಲ್ಯಗಳನ್ನು ಕಲಿಸಬೇಕು. ಮನೆಯಲ್ಲಿ ಟಿವಿ ಮತ್ತು ಮೊಬೈಲ್ ಗಳು ಮಕ್ಕಳಿಗೆ ಜ್ಞಾನಾರ್ಜನೆಗೆ ಪೂರಕವಾಗಿರಲಿ. ಅವರು ದಾರಿತಪ್ಪುವಷ್ಟು ಅದನ್ನು ನೋಡದಿರಲಿ ಎಂದು ತಿಳಿಹೇಳಿದರು.
ತಂದೆ ತಾಯಿಯನ್ನು ಗೌರವಿಸಿ
ಬಿಜಿಎಸ್ ವಿದ್ಯಾಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿಗಳಾದ ಡಾ. ಎನ್ ಶಿವರಾಮರೆಡ್ದಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಮಾತನಾಡಿ, ನಿತ್ಯವೂ ನೀವು ದೇವರನ್ನು ಕಾಣಲಾರಿರಿ. ನಿಮ್ಮಮುಂದೆ ಕಾಣುವ ಪ್ರತ್ಯಕ್ಷ ದೇವರೆಂದರೆ ತಂದೆ-ತಾಯಿಗಳು. ನೀವು ಅವರ ಮಾತನ್ನು ಪಾಲಿಸಿರಿ,ಮಕ್ಕಳು ತಪ್ಪು ಮಾಡುವುದು ಸಹಜ. ಭಾರತೀಯ ಸಂಸ್ಕೃತಿಯಲ್ಲಿ ತಂದೆ-ತಾಯಿಗಳ ಪಾದಕ್ಕೆ ನಮಸ್ಕರಿಸಿ, ಕ್ಷಮೆ ಕೋರುವುದು ವಿಭಿನ್ನವಾಗಿದೆ. ಮಕ್ಕಳು ಒಳ್ಳೆಯ ಗುಣಗಳನ್ನು ಬೆಳೆಸಿಕೊಂಡು, ಚೆನ್ನಾಗಿ ಓದಿ ಹೆಚ್ಚು ಅಂಕಗಳನ್ನು ಗಳಿಸಬೇಕೆಂಬುದು ಪ್ರತಿಯೊಬ್ಬ ತಂದೆ-ತಾಯಿಯರ ಆಸೆಯಾಗಿರುತ್ತದೆ ಎಂದರು.ಮಕ್ಕಳು ಸಂಸ್ಕಾರವಂತರಾಗಿ ಪೋಷಕರ ಆಸೆಯನ್ನು ನೇರವೇರಿಸಬೇಕು.10ನೇ ತರಗತಿಯ ನಂತರದ ಎರಡು ವರ್ಷಗಳು ಬಹಳ ಮುಖ್ಯ ತಂದೆ ತಾಯಿಯರು ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. ಮಕ್ಕಳಿಗೆ ನೀವು ತಂದೆ ತಾಯಿಯರಿಗೆ ಒಳ್ಳೆಯ ಹೆಸರು ತರಬೇಕು, ಸಮಾಜದಲ್ಲಿ ಅವರು ತಲೆತಗ್ಗಿಸುವ ಕೆಲಸ ಎಂದು ಮಾಡಬಾರದು. ಎಲ್ಲಾರೂ ಚೆನ್ನಾಗಿ ಓದಿ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಿ ಎಂದು ಸಲಹೆನೀಡಿದರು.
ಮಾತಾಪಿತೃಗಳ ಪಾದಪೂಜೆವಿದ್ಯಾರ್ಥಿಗಳು ಸಾಮೂಹಿಕವಾಗಿ ತಮ್ಮ ತಂದೆ- ತಾಯಿಗಳ ಪಾದಗಳನ್ನು ತೊಳೆದು ಅರಿಶಿನ-ಕುಂಕುಮ ಹಚ್ಚಿ, ಪುಷ್ಪಾರ್ಚನೆ ಮಾಡಿ ಪಾದ ಪೂಜೆ ಮಾಡಿದರು. ಮೂಲಕ 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಓದಿದ ಶಾಲೆಗೆ ಕೀರ್ತಿ, ಗುರುಗಳಿಗೆ ಗೌರವ ತಂದೆ- ತಾಯಿಯ ಕನಸ್ಸನ್ನು ನನಸು ಮಾಡುತ್ತೇವೆಂದು ಸಂಕಲ್ಪ ತೊಟ್ಟರು. ಈ ಕಾರ್ಯಕ್ರಮದಲ್ಲಿ ಬಿಜಿಎಸ್ ವರ್ಲ್ಡ್ ಸ್ಕೂಲ್ ನ ಪ್ರಾಂಶುಪಾಲೆ ದೀಪಿಕಾ ಶರ್ಮಾ,ಬಿಜಿಎಸ್ ವಿದ್ಯಾ ಸಂಸ್ಥೆಗಳ ವಿವಿಧ ಮುಖೋಪಾಧ್ಯಾಯರುಗಳು, ಭೋಧಕ, ಬೋಧಕೇತರ ಸಿಬ್ಬಂಧಿ,ಪೋಷಕರು ವಿದ್ಯಾರ್ಥಿಗಳ ಇದ್ದರು.