ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಇಂಗ್ಲಿಷ್ ಕಲಿಸಲೇಬೇಕು: ಶಾಸಕ ಡಾ.ಮಂತರ್‌ಗೌಡ

KannadaprabhaNewsNetwork |  
Published : Jun 13, 2025, 02:43 AM IST
ಮಾತೃಭಾಷೆ ಕನ್ನಡದೊಂದಿಗೆ ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಇಂಗ್ಲೀಷ್ ಕಲಿಸಲೇಬೇಕು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‌ಗೌಡ ಅಭಿಪ್ರಾಯ | Kannada Prabha

ಸಾರಾಂಶ

ಮಾತೃಭಾಷೆ ಕನ್ನಡದೊಂದಿಗೆ ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಇಂಗ್ಲಿಷ್‌ ಕಲಿಸಲೇಬೇಕು ಎಂದು ಶಾಸಕ ಡಾ. ಮಂತರ್‌ಗೌಡ ಹೇಳಿದರು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಮಾತೃಭಾಷೆ ಕನ್ನಡದೊಂದಿಗೆ ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಇಂಗ್ಲೀಷ್ ಕಲಿಸಲೇಬೇಕು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‌ಗೌಡ ಅಭಿಪ್ರಾಯಿಸಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆಯ ವತಿಯಿಂದ ಚೌಡ್ಲು ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಹತ್ತನೆ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಸಾಧಕ ವಿದ್ಯಾರ್ಥಿಗಳಿಗೆ ಹಾಗು ಶೇ.100 ರಷ್ಟು ಫಲಿತಾಂಶ ಗಳಿಸಿದ ಶಾಲೆಗಳ ಮುಖ್ಯ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.

ಕಳೆದ 25 ವರ್ಷಗಳ ಹಿಂದೆಯೇ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನು ಅಳವಡಿಸಿದ್ದರೆ, ಸರ್ಕಾರಿ ಶಾಲೆಗಳಿಗೆ ಸಮಸ್ಯೆ ಆಗುತ್ತಿರಲಿಲ್ಲ. ಪ್ರಾಥಮಿಕ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಕಲ್ಪಿಸಲೇಬೇಕಿದ್ದು ಈ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು. ಪ್ರಾಥಮಿಕ ಹಂತದಲ್ಲೇ ಮಕ್ಕಳಿಗೆ ಇಂಗ್ಲೀಷ್ ಕಲಿಸಿದರೆ, ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಸ್ಪರ್ಧೆಗೆ ಸಿದ್ದರಾಗುತ್ತಾರೆ. ವಿದ್ಯಾರ್ಥಿಗಳು ನಿರಂತರ ಕಲಿಕೆಯೊಂದಿಗೆ ಹೆಚ್ಚು ಅಂಕಗಳನ್ನು ಗಳಿಸಬೇಕು ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ ಮಾತನಾಡಿ, ಕುವೆಂಪು ಶಾಲೆಯ ವಿದ್ಯಾರ್ಥಿನಿ ಸಿ.ಎಸ್. ಆದ್ವಿ 625ಕ್ಕೆ 623 ಅಂಕಗಳನ್ನು ಪಡೆದು ಜಿಲ್ಲೆಗೆ ಟಾಫರ್ ಆಗಿ ಶಿಕ್ಷಣ ಇಲಾಖೆಗೆ ಮತ್ತು ಓದಿದ ಶಾಲೆಗೆ ಕೀರ್ತಿ ತಂದಿದ್ದಾರೆ. ತಾಲೂಕಿನ 70 ವಿದ್ಯಾರ್ಥಿಗಳು 600ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. 10 ಶಾಲೆಗಳು ಶೇ.100 ರಷ್ಟು ಫಲಿತಾಂಶ ಪಡೆದಿವೆ. ಈ ಸಾಧನೆಯಲ್ಲಿ ಶಿಕ್ಷಕರ ಪಾತ್ರ ಹಿರಿದಿದೆ ಎಂದು ಶ್ಲಾಘಿಸಿದರು.

ವೇದಿಕೆಯಲ್ಲಿ ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ, ಬಿಟಿಸಿಜಿ ಪ್ರಾಂಶುಪಾಲರಾದ ಮಿಲ್‌ಡ್ರೆಡ್ ಗೋನ್ಸಾಲ್ವೆಸ್, ಪ್ರೌಢಶಾಲಾ ಶಿಕ್ಷಕರ ಸಂಘದ ಹ್ಯಾರಿಮೋರಸ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ