ಮಕ್ಕಳಿಗೆ ಪಠ್ಯದ ಜೊತೆಗೆ ನೈತಿಕ ಮೌಲ್ಯ ಕಲಿಸಬೇಕು: ಟಿ.ಡಿ.ರಾಜೇಗೌಡ ಸಲಹೆ

KannadaprabhaNewsNetwork |  
Published : Dec 27, 2023, 01:32 AM ISTUpdated : Dec 27, 2023, 01:33 AM IST
ನರಸಿಂಹರಾಜಪುರ ತಾಲೂಕಿನ ಅಳಲಗೆರೆಯ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಶಾಸಕ ಟಿ.ಡಿ.ರಾಜೇಗೌಡ ಅವರು ಚಿಗರು ಪುಸ್ತಕ ಬಿಡುಗಡೆ ಮಾಡಿದರು | Kannada Prabha

ಸಾರಾಂಶ

ನರಸಿಂಹರಾಜಪುರದ ಅಳಲಗೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿದ್ದ ಶಾಸಕ ಟಿ.ಡಿ.ರಾಜೇಗೌಡ ಮಕ್ಕಳಿಗೆ ಕಂಪ್ಯೂಟರ್‌ ಶಿಕ್ಷಣ, ತಂತ್ರಜ್ಞಾನಕ್ಕೆ ಹೆಚ್ಚು ಒತ್ತು ನೀಡಬೇಕು. ಮಕ್ಕಳಿಗೆ ಪಠ್ಯ ಪುಸ್ತಕದ ಜೊತೆಗೆ ನೈತಿಕ ಮೌಲ್ಯ ಶಿಕ್ಷಣ ಸಹ ಕಲಿಸಬೇಕು ಎಂದು ಸಲಹೆ ಮಾಡಿದರು.

- ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಾರ್ಷಿಕೋತ್ಸವ । ಚಿಗರು ಪುಸ್ತಕ ಬಿಡುಗಡೆ । ಬಟ್ಟೆ ಒಣಗಿಸುವ ಶೆಡ್ ಉದ್ಘಾಟನೆಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಮಕ್ಕಳಿಗೆ ಪಠ್ಯ ಪುಸ್ತಕದ ಜೊತೆಗೆ ನೈತಿಕ ಮೌಲ್ಯ ಶಿಕ್ಷಣ ಸಹ ಕಲಿಸಬೇಕು ಎಂದು ಶಾಸಕ ಟಿ.ಡಿ. ರಾಜೇಗೌಡ ಶಿಕ್ಷಕರಿಗೆ ಸಲಹೆ ನೀಡಿದರು.

ಅಳಲಗೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳಿಗೆ ಕಂಪ್ಯೂಟರ್‌ ಶಿಕ್ಷಣ, ತಂತ್ರಜ್ಞಾನಕ್ಕೆ ಹೆಚ್ಚು ಒತ್ತು ನೀಡಬೇಕು. ಮಳೆಗಾಲದಲ್ಲಿ ಮಕ್ಕಳಿಗೆ ಬಟ್ಟೆ ಒಣಗಿಸಲು ಅನುಕೂಲ ವಾಗುವಂತೆ ಬಾಲಕರಿಗೆ ಹಾಗೂ ಬಾಲಕಿಯರಿಗೆ ಪ್ರತ್ಯೇಕವಾಗಿ ಶೆಡ್ ನಿರ್ಮಾಣ ಮಾಡಿಸಿಕೊಟ್ಟಿದ್ದೇನೆ. ಬಿಸಿ ನೀರಿನ ಉದ್ದೇಶದಿಂದ ಗುಜರಾತ್ ಮಾದರಿ ಎರಡು ಬಾಯ್ಲರ್ ಮಂಜೂರು ಮಾಡಿಸಿ ಕೊಟ್ಟಿದ್ದೇನೆ ಎಂದರು.

ಮೆಣಸೂರು ಗ್ರಾಪಂ ಅಧ್ಯಕ್ಷೆ ಬಿಂದು ಸತೀಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮೆಣಸೂರು ಗ್ರಾಪಂ ವ್ಯಾಪ್ತಿಯ ಮೊಮುರಾರ್ಜಿ ದೇಸಾಯಿ ವಸತಿ ಶಾಲೆ ಇರುವುದರಿಂದ ಗ್ರಾಮದವರಿಗೆ ಹೆಮ್ಮೆಯಾಗಿದೆ. ಪ್ರತಿ ವರ್ಷ ಶಾಲೆಯ ಫಲಿ ತಾಂಶ ಉತ್ತಮವಾಗಿ ಬರುತ್ತಿದೆ. ಈ ವರ್ಷ ಎಸ್ಎಸ್‌ಎಲ್‌ಸಿ ಯಲ್ಲಿ ಜಿಲ್ಲೆಯ ಪ್ರಥಮ ಸ್ಥಾನ ಪಡೆಯಿರಿ ಎಂದು ಕಿವಿ ಮಾತು ಹೇಳಿದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರಾದ ಪೂರ್ಣಿಮ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉತ್ತಮ ಗುಣಾತ್ಮಕ ಶಿಕ್ಷಣ ನೀಡುವ ಉದ್ದೇಶ ದಿಂದ ಪ್ರಾರಂಭಗೊಂಡ ಈ ವಸತಿ ಶಾಲೆ ಉತ್ತಮ ಫಲಿತಾಂಶ ನೀಡುತ್ತಿದೆ. ಈ ವರ್ಷ ಎಸ್‌ಎಸ್‌ಎಲ್ಸಿ ಫಲಿತಾಂಶದಲ್ಲಿ ಜಿಲ್ಲೆಗೆ ಮೊದಲ ಸ್ಥಾನ ಬರುವ ಗುರಿ ಹೊಂದಿದ್ದೇವೆ ಎಂದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪೂರ್ಣೇಶ್‌, ಮೆಣಸೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪಚ್ಚೆಯಮ್ಮ, ಸದಸ್ಯ ಶ್ರೀನಾಥ್‌, ಬಿನು, ಪ್ರವೀಣ್‌,ರಜಿತಾ, ಶಿಲ್ಪ,ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಆರ್‌.ಸದಾಶಿವ, ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತಶೆಟ್ಟಿ, ಸದಸ್ಯೆ ಜುಬೇದ, ತಾಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ನಾಗೇಶ್ ಉಪಸ್ಥಿತರಿದ್ದರು.

ಶಾಸಕ ಟಿ.ಡಿ.ರಾಜೇಗೌಡ ಬಾಲಕ ಹಾಗೂ ಬಾಲಕಿಯರ ಪ್ರತ್ಯೇಕವಾದ ಬಟ್ಟೆ ಒಣಗಿಸುವ ಶೆಡ್ ಉದ್ಘಾಟಿಸಿದರು. ಶಾಲೆ ವಿದ್ಯಾರ್ಥಿಗಳು ಬರೆದ ಚಿಗುರು ಪುಸ್ತಕ ಬಿಡುಗಡೆ ಮಾಡಿದರು.

ಕಳೆದ ವರ್ಷ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಶಾಸಕರು ಸನ್ಮಾನಿಸಿದರು. ರಾಮ ಮೋಹನ್ , ಎಚ್‌.ಸಿ.ಬಾಲಸುಬ್ರಮಣ್ಯಂ, ಕು.ಸಹನ , ನಿಲಯ ಪಾಲಕ ಮಹಾತ್ಮಾ ಗಾಂಧಿ ಇದ್ದರು.

PREV

Recommended Stories

ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಬೆಂಗಳೂರಲ್ಲಿ ಭರ್ಜರಿ ಮಳೆಗೆ ವಾಹನ ಸವಾರರ ಪರದಾಟ