ಪೋಷಕರು ಮಕ್ಕಳಿಗೆ ಮನೆಯಲ್ಲೇ ಸಂಸ್ಕಾರ ಕಲಿಸಬೇಕು: ಅನಂತ ಪದ್ಮನಾಭ ಸಲಹೆ

KannadaprabhaNewsNetwork |  
Published : Nov 07, 2026, 02:00 AM IST
ನರಸಿಂಹರಾಜಪುರ ತಾಲೂಕಿನ ನಾಗರಮಕ್ಕಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಂಕದಕುಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಸೀತೂರಿನ ಯಕ್ಷಗಾನ ಕಲಾವಿದ ಅನಂತಪದ್ಮನಾಭ ಉದ್ಘಾಟಿಸಿದರು. | Kannada Prabha

ಸಾರಾಂಶ

ನರಸಿಂಹರಾಜಪುರಪೋಷಕರು ತಮ್ಮ ಮನೆಯಲ್ಲೇ ಮಕ್ಕಳಿಗೆ ಸಂಸ್ಕಾರ ಕಲಿಸಬೇಕು ಎಂದು ಸೀತೂರಿನ ಯಕ್ಷಗಾನ ಕಲಾವಿದ ಅನಂತಪದ್ಮನಾಭ ಸಲಹೆ ನೀಡಿದರು.

- ನಾಗರಮಕ್ಕಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಕದಕುಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ

ಪೋಷಕರು ತಮ್ಮ ಮನೆಯಲ್ಲೇ ಮಕ್ಕಳಿಗೆ ಸಂಸ್ಕಾರ ಕಲಿಸಬೇಕು ಎಂದು ಸೀತೂರಿನ ಯಕ್ಷಗಾನ ಕಲಾವಿದ ಅನಂತಪದ್ಮನಾಭ ಸಲಹೆ ನೀಡಿದರು.

ಗುರುವಾರ ನಾಗರಮಕ್ಕಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಕದ ಕುಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿದ್ದ ನಿವೃತ್ತ ಪ್ರಾಂಶುಪಾಲ ಬೆಮ್ಮನೆ ದಯಾನಂದ್ ಮಾತನಾಡಿ ಪ್ರತಿಭಾ ಕಾರಂಜಿ ಮಕ್ಕಳ ಹಬ್ಬ. ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ವಿಶೇಷ ಪ್ರತಿಭೆ ಅಡಗಿದ್ದು ಅವರಲ್ಲಿ ಕೀಳರಿಮೆ ಬೇಡ ಎಂದು ಕಿವಿ ಮಾತು ಹೇಳಿದರು.

ಅತಿಥಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಮ್ ಮಾತನಾಡಿ ಸರ್ಕಾರಿ ಶಾಲೆಗಳು ಸಬಲವಾಗಿರಬೇಕಾದರೆ ಗ್ರಾಮಸ್ಥರು, ಪೋಷಕರ ಸಹಕಾರ ಅಗತ್ಯ. ಕಳೆದ 23 ವರ್ಷಗಳಿಂದಲೂ ರಾಜ್ಯದಲ್ಲಿ ಪ್ರತಿಭಾ ಕಾರಂಜಿ ಯಶಸ್ವಿಯಾಗಿ ನಡೆಯುತ್ತಾ ಬಂದಿದೆ. ಮಕ್ಕಳು ಗೆದ್ದಾಗ ಹಿಗ್ಗದೆ ಸೋತಾಗ ಕುಗ್ಗದೆ ಸಮಚಿತ್ತದಿಂದ ಸಾಧನೆ ಮಾಡಿದರೆ ಯಶಸ್ಸು ನಿಮ್ಮದಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ರಾಜ್ಯಮಟ್ಟದ ಅಥ್ಲೆಟಿಕ್ಸ್ ನಲ್ಲಿ 7 ನೇ ಸ್ಥಾನ ಪಡೆದ ನಾಗರಮಕ್ಕಿ ವಿದ್ಯಾರ್ಥಿ ಪ್ರೀತಮ್ ಅವರನ್ನು ಸನ್ಮಾನಿಸಲಾಯಿತು.

ಇದಕ್ಕೂ ಮೊದಲು ನಾಗರಮಕ್ಕಿ ಮುಖ್ಯ ರಸ್ತೆಯಲ್ಲಿ ಮಹಿಳೆಯರ ಪೂರ್ಣ ಕುಂಭ ಸ್ವಾಗತ, ವಾದ್ಯದೊಂದಿಗೆ ಅತಿಥಿಗಳನ್ನು ಮೆರವಣಿಗೆ ಮೂಲಕ ಕರೆ ತರಲಾಯಿತು. ಸಂಕದ ಕುಣಿ ಕ್ಲಸ್ಟರ್ ನ ಪ್ರತಿಭಾ ಕಾರಂಜಿಯಲ್ಲಿ 10 ಶಾಲೆಗಳ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

ಸಭೆ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿಎಂಸಿ ಅಧ್ಯಕ್ಷ ಮಹೇಶ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಪಂ ಮಾಜಿ ಅಧ್ಯಕ್ಷರಾದ ಎನ್.ಪಿ.ರಮೇಶ್, ಎಚ್.ಇ.ದಿವಾಕರ, ಮಾಜಿ ಉಪಾಧ್ಯಕ್ಷ ಕೆ.ಎಸ್.ಉಮೇಶ್, ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಎನ್.ಪಿ.ರವಿ, ಸೀನಿಯರ್ ಛೇಂಬರ್ ಅಧ್ಯಕ್ಷ ಕೃಪಾಲ್ ಗೌಡ, ಮಾಜಿ ಅಧ್ಯಕ್ಷ ಎಸ್.ಎಸ್.ಜಗದೀಶ್,ಶಿಕ್ಷಣ ಸಂಯೋಜಕ ರಂಗಪ್ಪ, ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಅಶೋಕ್, ನಾಗರಮಕ್ಕಿ ಶಾಲೆ ಮುಖ್ಯೋಪಾಧ್ಯಾಯಿನಿ ಜಯ, ಗುತ್ತಿಗೆದಾರ ಕುಣಜ ಶ್ರೀನಿವಾಸ್, ಶಿಕ್ಷಕಿಯರಾದ ಮಂಜುಳಾ, ಶಿಲ್ಪ ಕುಮಾರಿ,ಸುಭಾಶ್, ರಾಜಾನಾಯಕ್, ಬಾಬು ಪೂಜಾರಿ, ಅಶ್ವತ್ತ ನಾರಾಯಣ್,ಅಶೋಕ್ ಮೂರ್ತಿ, ಗವಿ ರಂಗಪ್ಪ, ಗೋವಿಂದರಾಜ್, ತಿಮ್ಮೇಶ್, ಎಸ್.ಡಿ.ಎಂ.ಸಿ.ಮಾಜಿ ಅಧ್ಯಕ್ಷರುಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬಿಗೆ ಸ್ಥಳೀಯ ರಿಕವರಿ ಆಧಾರದಲ್ಲಿ ನ್ಯಾಯಯುತ ಬೆಲೆ ನೀಡಲು ಆಗ್ರಹ
ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದರೆ ಸೂಕ್ತ ಕ್ರಮ