ಕನ್ನಡಪ್ರಭ ವಾರ್ತೆ ಆಲೂರು
ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇ ಜಿನ ವತಿಯಿಂದ ಹಳೆ ಪಾಳ್ಯ ಗ್ರಾಮದಲ್ಲಿ ಆಯೋಜಿಸಿದ್ದ 2023-24ನೇ ಶೈಕ್ಷಣಿಕ ಸಾಲಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿದರು.
ಭಾರತದಲ್ಲಿ ಎನ್‌ಎಸ್‌ಎಸ್ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದೆ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರ ಮೂಲಕ ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮವನ್ನು ಅರಿಯುವುದರ ಜೊತೆಗೆ ಶಿಸ್ತು, ಭಾತೃತ್ವ, ಸಂಯಮ, ಸಮಯಪ್ರಜ್ಞೆ ಹಾಗೂ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದರು.ಈ ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ಟಿ. ಪಿ ಪುಟ್ಟರಾಜು ಮಾತನಾಡಿ, ಶಿಬಿರದಲ್ಲಿ ಎಲ್ಲರೂ ಆಸಕ್ತಿಯಿಂದ ಭಾಗವಹಿಸಿ ಓದುವುದರ ಜೊತೆಗೆ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮಲ್ಲಿರುವ ವಿಶೇಷ ಪ್ರತಿಭೆಗಳನ್ನು ಹೊರ ಹಾಕಲು ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರವು ಸೂಕ್ತವಾದ ವೇದಿಕೆಯಾಗಿರುತ್ತದೆ. ಶಿಬಿರಾರ್ಥಿಗಳು ಶಿಸ್ತು, ಸಂಯಮ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುಲು ಶಿಬಿರವು ಸಹಕಾರಿಯಾಗಲಿದೆ ಎಂದು ತಿಳಿಸಿದರು.