ಮಕ್ಕಳಿಗೆ ಉತ್ತಮ ಸೌಕರ್ಯಗಳೊಂದಿಗೆ ಶಿಕ್ಷಣ ದೊರೆಯಲಿ:ಸಚಿವ ಪಾಟೀಲ

KannadaprabhaNewsNetwork |  
Published : Jan 29, 2025, 01:36 AM IST
ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಚಿವ ಡಾ.ಎಚ್‌.ಕೆ.ಪಾಟೀಲ ಭೂಮಿ ಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಅಂಗನವಾಡಿ ಕಟ್ಟಡಗಳು ಸುಸಜ್ಜಿತವಾಗಿ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳಬೇಕು. ಕಳಪೆ ಕಾಮಗಾರಿಗೆ ಅವಕಾಶವಿಲ್ಲದಂತೆ ಸ್ಥಳೀಯ ಜನಪ್ರತಿನಿಧಿಗಳು ನಿಗಾ ವಹಿಸಬೇಕು

ಗದಗ: ಚಿಕ್ಕಮಕ್ಕಳಿಗೆ ಆರಂಭದಿಂದಲೇ ಉತ್ತಮ ಸೌಕರ್ಯಗಳೊಂದಿಗೆ ಶಿಕ್ಷಣ ದೊರೆಯಬೇಕು. ಈ ಉದ್ದೇಶದಿಂದಲೇ ನಗರದಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಹೇಳಿದರು.

ನಗರದ ವಿವಿಧ ಪ್ರದೇಶಗಳಲ್ಲಿ ನಗರಸಭೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಅಂಗನವಾಡಿ ಕಟ್ಟಡಗಳು ಸುಸಜ್ಜಿತವಾಗಿ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳಬೇಕು. ಕಳಪೆ ಕಾಮಗಾರಿಗೆ ಅವಕಾಶವಿಲ್ಲದಂತೆ ಸ್ಥಳೀಯ ಜನಪ್ರತಿನಿಧಿಗಳು ನಿಗಾ ವಹಿಸಬೇಕು. ಕಾಮಗಾರಿ ಶಿಸ್ತು ಬದ್ಧವಾಗಿ ಗುಣಮಟ್ಟದಿಂದ ಕೂಡಿರುವಂತೆ ಸಂಬಂಧಿಸಿದವರು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ವಾರ್ಡ ನಂ.21ರಲ್ಲಿ ಅಂದಾಜು ₹31.50 ಲಕ್ಷ ವೆಚ್ಚದಲ್ಲಿ ಅಂಗನವಾಡಿ ನಿರ್ಮಾಣ ಕಾಮಗಾರಿಗೆ, ವಾರ್ಡ ನಂ. 22 ರಲ್ಲಿ ₹ 31.50 ಲಕ್ಷ ಅಂದಾಜು ವೆಚ್ಚದಲ್ಲಿ, ವಾರ್ಡ ನಂ.1 ರಲ್ಲಿ ₹ 36.50 ಲಕ್ಷ ವೆಚ್ಚದಲ್ಲಿ ಹಾಗೂ ವಾರ್ಡ ನಂ. 27 ರಲ್ಲಿ ₹ 31.50 ಲಕ್ಷ ವೆಚ್ಚದಲ್ಲಿ ಅಂಗನವಾಡಿಗಳ ನಿರ್ಮಾಣ ಕಾಮಗಾರಿಗೆ ಸಚಿವರು ಚಾಲನೆ ನೀಡಿದರು.

ಈ ವೇಳೆ ಸಚಿವರು ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಅಂಗನವಾಡಿ ಮಕ್ಕಳಗೆ ಕೇಕ್ ತಿನ್ನಿಸುವ ಮೂಲಕ ಶುಭಾಶಯ ಕೋರಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್‌ ಬಬರ್ಜಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾದಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲೂಕಾಧ್ಯಕ್ಷ ಅಶೋಕ ಮಂದಾಲಿ, ಪ್ರಭು ಬುರಬುರೆ, ನಗರಸಭೆ ಸದಸ್ಯರಾದ ಚಿಮ್ಮಿ ನದಾಫ್, ರವಿ ಕಮತರ, ಲಕ್ಷ್ಮೀ ಸಿದ್ಧಮ್ಮನಹಳ್ಳೀ, ಲಲಿತಾ ಅಸೂಟಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರ, ನಗರಸಭೆ ಪೌರಾಯುಕ್ತ ಮಹೇಶ ಪೋತದಾರ, ಎಂಜನೀಯರ್ ಹುಚ್ಚೇಶ್ವರ ಬಂಡಿವಡ್ಡರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ.ಜಿ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ