ನೇರಲಕೆರೆ ಶ್ರೀ ಅಮೃತೇಶ್ವರ ಪ್ರೌಢಶಾಲೆಯಲ್ಲಿ ನಡೆದ ವಿದ್ಯಾರ್ಥಿಗಳು ಮತ್ತು ಪೋಷಕರ ಸಭೆ,
ಮಕ್ಕಳು ಶಿಕ್ಷಕರು ಹೇಳುವ ಎಲ್ಲ ಕಿವಿಮಾತುಗಳನ್ನು ನೆನಪಿನಲ್ಲಿಟ್ಟುಕೊಂಡು, ಚೆನ್ನಾಗಿ ಓದಿ ಈ ಬಾರಿಯೂ ಉತ್ತಮ ಫಲಿತಾಂಶ ಪಡೆಯಬೇಕೆಂದು ನೇರಲಕೆರೆ ಶ್ರೀ ಅಮೃತೇಶ್ವರ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಹಾಲೇಶ್ ಕೆ.ಟಿ.ಹೇಳಿದರು.
ಶ್ರೀ ಅಮೃತೇಶ್ವರ ಪ್ರೌಢಶಾಲೆಯಲ್ಲಿ ನಡೆದ 10ನೇ ತರಗತಿ ವಿದ್ಯಾರ್ಥಿಗಳು ಮತ್ತು ಪೋಷಕರ ಸಭೆಯಲ್ಲಿಮಾತನಾಡಿದರು. ಶಾಲೆಯ ಎಲ್ಲ ಶಿಕ್ಷಕರು ತಾವು ಬೋಧಿಸುತ್ತಿರುವ ವಿಷಯದ ಉತ್ತಮ ಫಲಿತಾಂಶಕ್ಕಾಗಿ ಅವರು ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆಯಲ್ಲಿ ವಿವರಿಸಿದರು.
ಶಾಲೆಯ ಸ್ಥಳೀಯ ಸಲಹಾ ಸಮಿತಿ ಸದಸ್ಯ ಪುಟ್ಟಪ್ಪ. ಟಿ/. ಮಾತನಾಡಿ, ಮಕ್ಕಳು ಅವರ ಪೋಷಕರು ಅನುಭವಿಸುತ್ತಿರುವ ಕಷ್ಟಗಳನ್ನು ನೆನಪಿನಲ್ಲಿಟ್ಟುಕೊಂಡು, ತಾವು ಹಾಗೆ ಮುಂದೆ ಕಷ್ಟಪಡಬಾರದು ಎಂದರೆ ಚೆನ್ನಾಗಿ ಓದಬೇಕು, ಈಗ ಚೆನ್ನಾಗಿ ಓದಿದರೆ ಮುಂದೆ ಉತ್ತಮ ಜೀವನ ನಿರ್ವಹಿಸಬಹುದು ಎಂದು ತಿಳಿಸಿದರು. ಶಾಲೆ ಸಲಹಾ ಸಮಿತಿ ಉಪಾಧ್ಯಕ್ಷ ಷಡಕ್ಷರಪ್ಪ ಮಾತನಾಡಿ, ಮಕ್ಕಳು ಏನೆಲ್ಲಾ ಕಷ್ಟಪಟ್ಟು ದಾನಿಗಳಿಂದ ದೇಣಿಗೆ ಸಂಗ್ರಹಿಸಿ, ಇಲ್ಲಿ ನೀಡುತ್ತಿರುವ ಸೌಲಭ್ಯ ಬಳಸಿಕೊಂಡು ಚೆನ್ನಾಗಿ ಓದುವಂತೆ ಹೇಳಿದರು. ಶಾಲೆಯ ಸ್ಥಳೀಯ ಸಲಹಾ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನಪ್ಪ ಮಾತನಾಡಿದರು. ಈ ಶೈಕ್ಷಣಿಕ ಸಾಲಿನ ಹತ್ತನೇ ತರಗತಿ ಮಕ್ಕಳ ಮೊದಲ ಪೋಷಕರ ಸಭೆಯಲ್ಲಿ ಹಲವಾರು ಪೋಷಕರು ಪಾಲ್ಗೊಂಡು, ಶಾಲೆ ಮತ್ತು ಹಾಸ್ಟೆಲ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಕ್ಕಳೂ ಕೂಡ ತಮ್ಮ ಓದಿನ ಬಗ್ಗೆ ಅನುಭವ ಹಂಚಿಕೊಂಡರು.
ತರೀಕೆರೆಯ ನೇರಲಕೆರೆ ಶ್ರೀ ಅಮೃತೇಶ್ವರ ಪ್ರೌಡಶಾಲೆಯಿಂದ 10ನೇ ತರಗತಿ ವಿದ್ಯಾರ್ಥಿಗಳು ಮತ್ತು ಪೋಷಕರಸಬೆ ನಡೆಯಿತು. ---------------------