- ನೇರಲಕೆರೆ ಶ್ರೀ ಅಮೃತೇಶ್ವರ ಪ್ರೌಢಶಾಲೆಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ
ಮಕ್ಕಳು ದುಶ್ಚಟಗಳಿಗೆ ಬಲಿಯಾಗದಿರಿ ಎಂದು ಗ್ರಾಮ ಪಂಚಾಯತ್ ಸದಸ್ಯೆ ಶೋಭಾ ಹೇಳಿದ್ದಾರೆ.ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಮೀಪದ ನೇರಲಕೆರೆ ಶ್ರೀ ಅಮೃತೇಶ್ವರ ಪ್ರೌಢಶಾಲೆಯಲ್ಲಿ ನಡೆದ ಸ್ವಾಸ್ಥ್ಯಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಎಂದರೆ ಯುವಜನರಲ್ಲಿ ದುಶ್ಚಟಗಳಾದ ಮಾದಕ ವಸ್ತುಗಳು, ಮದ್ಯ, ಗುಟ್ಕಾ, ಸೇವನೆ ಮೊಬೈಲ್ ವ್ಯಸನಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ, ಆರೋಗ್ಯಕರ ಜೀವನಶೈಲಿಗೆ ಪ್ರೇರೇಪಿಸುವ ಮತ್ತು ವ್ಯಸನಮುಕ್ತ ಸಮಾಜ ನಿರ್ಮಾಣದ ಸಂಕಲ್ಪ ತೆಗೆದುಕೊಳ್ಳಲು ಪ್ರೋತ್ಸಾಹಿಸುವ ಒಂದು ಸಾಮಾಜಿಕ ಜಾಗೃತಿ ಕಾರ್ಯಕ್ರಮ.
ಈ ಕಾರ್ಯಕ್ರಮವನ್ನು ಮುಖ್ಯವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಯೋಜಿಸಿದ್ದು ಉತ್ತಮವಾಗಿದೆ. ತಾಲೂಕಿನಾದ್ಯಂತ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.ಶ್ರೀನಿವಾಸ್ ಮಾತನಾಡಿ ಇಂದಿನ ಮಕ್ಕಳು, ಯುವ ಜನತೆ ಮದ್ಯವ್ಯಸನ, ಗುಟ್ಕಾ, ಧೂಮಪಾನಗಳಿಂದ ಯುವ ಜನತೆ ಜೀವನ ಹಾಳಾಗುತ್ತಿದೆ. ಸಹವಾಸ ದೋಷ, ಆಕಸ್ಮಿಕ ಆಕರ್ಷಣೆಗಳ ಕಾರಣ ದುಶ್ಚಟ ಒಮ್ಮೆ ಆರಂಭವಾದರೆ ಬದುಕು ವಿನಾಶದ ಹಾದಿಯಲ್ಲಿ ಸಾಗುತ್ತದೆ. ಇದರಿಂದ ವೈಯಕ್ತಿಕ ಜೀವನದ ಜೊತೆ ಜೊತೆಗೆ ಸಮಾಜದ ಸ್ವಾಸ್ಥ್ಯ ಸಹ ಹಾಳಾಗುತ್ತದೆ. ವಿದ್ಯಾರ್ಥಿ ಜೀವನದ ದೆಸೆಯಿಂದಲೇ ಉತ್ತಮ ಕ್ರಿಯಾಶೀಲ ಹವ್ಯಾಸ ರೂಢಿಸಿಕೊಂಡು ಉತ್ತಮ ಸಮಾಜ ಕಟ್ಟುವ ಕಾರ್ಯಕ್ರಮಕ್ಕೆ ದೃಢ ಸಂಕಲ್ಪ ಕೈಗೊಳ್ಳಬೇಕು ಎಂದ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಶಾಲಾ ಅಭಿವೃದ್ಧಿ ಸಮಿತಿ ಸದಸ್ಯ ಬಸವರಾಜಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ ಉತ್ತಮ ಆರೋಗ್ಯ ಇದ್ದರೆ ಏನನ್ನಾದರೂ ಸಾಧಿಸಬಹುದು. ಹಾಗಾಗಿ ಯಾರು ದುಶ್ಚಟಗಳಿಗೆ ಬಲಿಯಾಗಬಾರದು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಜಾಗೃತಿ ಕಾರ್ಯಕ್ರಮದಡಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸುವ ಕಾರ್ಯ ನಡೆಸುತ್ತಿರುವುದು ಪ್ರಸಂಶನೀಯ ಎಂದರು.
ಕೃಷಿ ಮೇಲ್ವಿಚಾರಕ ಸಂತೋಷ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲೆಯ ಮುಖ್ಯ ಶಿಕ್ಷಕ ಹಾಲೇಶ್ ಕೆ ಟಿ,ಒಕ್ಕೂಟ ಕಾರ್ಯದರ್ಶಿ, ಪಾರ್ವತಮ್ಮ, ಶಿಕ್ಷಕರಾದ ಸತೀಶ್, ರಮಾಕಾಂತ್, ಕಿಜರ್ ಖಾನ್, ಸವಿತ, ಸೇವಾಪ್ರತಿನಿಧಿ ಉಷಾ,ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.---------------ಫೋಟೋ ಇದೆಃ21ಕೆಟಿಆರ್.ಕೆ.2ಃ ತರೀಕೆರೆ ಸಮೀಪದ ನೇರಲಕೆರೆ ಶ್ರೀ ಅಮೃತೇಶ್ವರ ಪ್ರೌಢಶಾಲೆಯಲ್ಲಿ ಏರ್ಪಾಡಾಗಿದ್ದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶೋಭಾ, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ಬಸವರಾಜಪ್ಪ,ಶ್ರೀನಿವಾಸ್, ಕೃಷಿ ಮೇಲ್ವಿಚಾರಕ ಸಂತೋಷ ಮತ್ತಿತರರು ಭಾಗವಹಿಸಿದ್ದರು. ------------------