ಮಕ್ಕಳು ಸರ್ಕಾರಿ ಶಾಲೆಯಲ್ಲೇ ಓದಬೇಕು: ಡಾ. ಹನುಮಂತನಾಥ ಸ್ವಾಮೀಜಿ

KannadaprabhaNewsNetwork |  
Published : Feb 23, 2024, 01:49 AM IST
ಸರ್ಕಾರಿ ಶಾಲೆಯಲ್ಲಿಯೇ ಯಾವುದೇ ಕೀಳರಮೆ ಇಲ್ಲದೇ ವಿದ್ಯಾರ್ಥಿಗಳು ವ್ಯಾಸಂಗ ಮಾಡಿ ಹನುಮಂತನಾಥ ಸ್ವಾಮಿಜೀ. | Kannada Prabha

ಸಾರಾಂಶ

ದೊಡ್ಡ ಸಾಧನೆಯನ್ನ ಮಾಡಿದಂತಹ ಮಹನೀಯರೆಲ್ಲರೂ ಓದಿರುವುದು ಸರ್ಕಾರಿ ಶಾಲೆಯಲ್ಲಿ, ಯಾವುದೇ ಕೀಳರಮೆ ಇಲ್ಲದೇ ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ಓದಬೇಕು ಎಂದು ಎಲೆರಾಂಪುರ ಕುಂಚಿಟಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಹನುಮಂತನಾಥ ಸ್ವಾಮೀಜಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಕೊರಟಗೆರೆ

ದೊಡ್ಡ ಸಾಧನೆಯನ್ನ ಮಾಡಿದಂತಹ ಮಹನೀಯರೆಲ್ಲರೂ ಓದಿರುವುದು ಸರ್ಕಾರಿ ಶಾಲೆಯಲ್ಲಿ, ಯಾವುದೇ ಕೀಳರಮೆ ಇಲ್ಲದೇ ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ಓದಬೇಕು ಎಂದು ಎಲೆರಾಂಪುರ ಕುಂಚಿಟಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಹನುಮಂತನಾಥ ಸ್ವಾಮೀಜಿ ತಿಳಿಸಿದರು.

ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ದೊಡ್ಡಸಾಗ್ಗೆರೆ ಗ್ರಾಪಂ ವ್ಯಾಪ್ತಿಯಲ್ಲಿನ ಸರ್ಕಾರಿ ಉನ್ನತೀಕರಿಸಿದ ಶಾಲೆಯಲ್ಲಿ ರಾಷ್ಟ್ರನಾಯಕರ ಪುತ್ಥಳಿಯ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇಡೀ ವಿಶ್ವದಲ್ಲಿಯೇ ನಮ್ಮ ಶಿಕ್ಷಣ ವ್ಯವಸ್ಥೆಯ ಅತ್ಯುತ್ತಮವಾಗಿದೆ. ಇದಕ್ಕಾಗಿಯೇ ಸರ್ಕಾರ ಸಾವಿರರು ಕೋಟಿಗಳನ್ನ ವ್ಯಯ ಮಾಡುತ್ತಿದೆ. ಎಲ್ಲರೂ ಇದರ ಸದ್ಬಳಕೆ ಮಾಡಿಕೊಂಡು ತಮ್ಮ ಜೀವನವನ್ನ ಕಟ್ಟಿಕೊಳ್ಳಬೇಕು. ಎಷ್ಟೋ ಜನ ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ದೇಶ ವಿದೇಶಗಳಲ್ಲಿ ಈ ದೇಶದ ಸೇವೆಯನ್ನ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದರು.

ಪಿಡಿಒ ಉಮೇಶ್ ಮಾತನಾಡಿ, ನಾನು ಕೂಡ ಇದೆ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ಓದಿ ಇವತ್ತು ಗ್ರಾಪಂ ಅಭಿವೃದ್ಧಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದೇನೆ. ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಮ್ಮ ದೇಶದಲ್ಲಿ ಅನಕ್ಷರಸ್ಥರು ಇರಬಾರದು ಎನ್ನವ ಉದ್ದೇಶದಿಂದ ಸಾಕಷ್ಟು ಯೋಜನೆಗಳನ್ನ ಶಿಕ್ಷಣ ಇಲಾಖೆ ತರಲಾಗಿದೆ. ಅವುಗಳನ್ನ ಬಳಸಿಕೊಂಡು ಈ ದೇಶದ ಉತ್ತಮ ಪ್ರಜೆಯಾಗಿ ಸೇವೆ ಸಲ್ಲಿಸಿ ಎಂದು ಹೇಳಿದರು.

ಇದೆ ಸಂದರ್ಭದಲ್ಲಿ ಬುದ್ಧ, ಬಸವ, ವಿಶ್ವೇಶ್ವರಯ್ಯ, ಬಿ.ಆರ್‌. ಅಂಬೇಡ್ಕರ್‌, ಸರ್ವಪಲ್ಲಿ ರಾಧಾಕೃಷ್ಣನ್, ಸ್ವಾಮಿ ವಿವೇಕಾನಂದ ಅವರ ಪ್ರತಿಮೆ ಅನಾವರಣ ಮಾಡಲಾಯಿತ್ತು. ಕಾರ್ಯಕ್ರಮದಲ್ಲಿ ಬಿಇಒ ನಟರಾಜು, ಮುಖಂಡರಾದ ಶ್ರೀನಿವಾಸಮೂರ್ತಿ, ಅನೀಲ್‌ಕುಮಾರ್‌, ಮೋಹನ್‌ಗೌಡ, ರಂಗಶಾಮಯ್ಯ, ಉಮೇಶ್, ಅನುಸೂಯಮ್ಮ, ಲಕ್ಷ್ಮೀದೇವಮ್ಮ, ವೀರಭದ್ರಯ್ಯ, ಗಂಗಾಧರಯ್ಯ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೇಮಕಾತಿ ಪ್ರಕ್ರಿಯೆ ಇನ್ನು ಸುಗಮ-ಒಳಮೀಸಲು ಬಿಲ್‌ಗೆ ಕೊನೆಗೂ ಗೌರ್ನರ್‌ ಗೆಹಲೋತ್‌ ಅಂಕಿತ
ಡಿಕೆಶಿ ಬಣದ 18 ಶಾಸಕರು, ಸಚಿವರಿಂದ ಡಿನ್ನರ್‌ ಪಾರ್ಟಿ