ಉಡುಪಿ: ಮಕ್ಕಳಲ್ಲಿ ಜಂತುಹುಳುಗಳ ಬಾಧೆಯಿಂದ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಉಂಟಾಗಿ ಅವರ ಶಾರೀರಿಕ ಮತ್ತು ಬೌದ್ಧಿಕ ಬೆಳವಣಿಗೆ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಆದ್ದರಿಂದ ಶಾಲಾ ಮಕ್ಕಳಿಗೆ ಎರಡು ಬಾರಿ ಜಂತುಹುಳು ನಿವಾರಣಾ ಮಾತ್ರೆ ನೀಡಲಾಗುತ್ತಿದ್ದು, ಜಿಲ್ಲೆಯ ಎಲ್ಲಾ ಮಕ್ಕಳು ಈ ಮಾತ್ರೆಯನ್ನು ಸೇವಿಸಬೇಕು ಶಾಸಕ ಯಶ್‌ಪಾಲ್ ಎ. ಸುವರ್ಣ ಕರೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಜಿ. ಹುಬ್ಬಳ್ಳಿ ಮಾತನಾಡಿ, ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಗರ್ಭಕಂಠ ಕ್ಯಾನ್ಸರ್ ತಡೆಗೆ ಹೆಚ್.ಪಿ.ವಿ ಲಸಿಕೆಯೊಂದೆ ಸಹಕಾರಿಯಾಗಿದ್ದು, 14 ರಿಂದ 15 ವರ್ಷ ವಯಸ್ಸಿನ ಒಳಗಿನ ಇದುವರೆಗೂ ಹೆಚ್.ಪಿ.ವಿ ಲಸಿಕೆ ಪಡೆಯದ ಹೆಣ್ಣು ಮಕ್ಕಳು ಲಸಿಕೆ ಪಡೆಯುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಂತುಹುಳದ ಮಾತ್ರೆ ಸಾಂಕೇತಿಕವಾಗಿ ವಿತರಿಸಲಾಯಿತು.ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ, ಸೈಂಟ್ ಸಿಸಿಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಪ್ರೀತಿ ಕ್ರಾಸ್ತಾ ಮತ್ತಿತರರಿದ್ದರು. ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ಜ್ಯೋತ್ಸ್ನ ಬಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು.ಆರೋಗ್ಯ ಮೇಲ್ವಿಚಾರಣಾ ಅಧಿಕಾರಿ ಹೆಚ್ಚೇಶ್ ಹೆಚ್.ಎಸ್. ಸ್ವಾಗತಿಸಿದರು. ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್ ನಿರೂಪಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ವಂದಿಸಿದರು.1 ರಿಂದ 5 ವರ್ಷದ ಮಕ್ಕಳಿಗೆ ಅಂಗನವಾಡಿಗಳಲ್ಲಿ ಹಾಗೂ 6 ರಿಂದ 19 ವರ್ಷದೊಳಗಿನವರಿಗೆ ಸರಕಾರಿ, ಅನುದಾನಿತ, ಖಾಸಗಿ ಶಾಲಾ-ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರೆಗಳನ್ನು ನೀಡಲಾಗುವುದು. ಸೋಮವಾರ ಮಕ್ಕಳಿಗೆ ಆ. 17 ರ ಮೋಪ್ ಅಪ್ ದಿನದಂದು ಮಾತ್ರೆಗಳನ್ನು ನೀಡಲಾಗುವುದು.