ಮಲ್ಲಿಕಾರ್ಜುನ ಪಟ್ಟಣಶೆಟ್ಟಿ
ತಾಲೂಕಿನ ಜಾಲವಾದ ಗ್ರಾಪಂ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಶೌಚಾಲಯ ವ್ಯವಸ್ಥೆ ಇಲ್ಲದ ಕಾರಣ ಶೌಚಾಲಯಕ್ಕೆ ಬಯಲನ್ನೇ ಅವಲಂಬಿಸಿದ್ದಾರೆ. ಜಾಲವಾದ ಕ್ಲಸ್ಟರ್ ವ್ಯಾಪ್ತಿಯಲ್ಲಿ ಸಿಆರ್‌ಪಿ ಕೆ.ಎಸ್.ವಾಲಿಕಾರ ಅವರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಮಸ್ಯೆ ಕುರಿತು ಮನವಿ ಪತ್ರ ಸಲ್ಲಿಸಿ ಕೈ ತೊಳೆದುಕೊಂಡಿದ್ದಾರೆ. ಹಲವು ಶಾಲೆಗಳಲ್ಲಿ ಶಿಕ್ಷಕರ ಕೊರತೆ, ವಿದ್ಯಾರ್ಥಿಗಳಿಗೆ ಶೌಚಾಲಯ, ಶಾಲಾ ಕೋಣೆ ದುರಸ್ತಿ, ಕಾಂಪೌಂಡ್, ಬಾಗಿಲು, ಕಿಟಕಿ, ನೆಲ ರಿಪೇರಿ, ನೀರಿನ ವ್ಯವಸ್ಥೆ ಸೇರಿದಂತೆ ಹಲವಾರು ಸಮಸ್ಯೆಗಳಿವೆ.
ಈ ಕುರಿತು ಪತ್ರ ಬರೆದರೂ ಕ್ಯಾರೇ ಎನ್ನದ ಅಧಿಕಾರಿಗಳು. ಶಾಲೆಗಳಲ್ಲಿ ಶೌಚಾಲಯವಿಲ್ಲದ್ದರಿಂದ ವಿದ್ಯಾರ್ಥಿಗಳು ಅನಿವಾರ್ಯವಾಗಿ ಬಯಲಿಗೆ ಹೋಗಬೇಕಿದೆ. ಆದರೆ, ಶಿಕ್ಷಕಿಯರು ಹಾಗೂ ವಿದ್ಯಾರ್ಥಿನಿಯರ ಪಾಡು ಹೇಳತೀರದು.ಶಾಲೆಗಳಲ್ಲಿ ಶೌಚಾಲಯ ಕಟ್ಟಿಸಿಕೊಳ್ಳಲು ಸಾರ್ವಜನಿಕರು ಅಧಿಕಾರಿಗಳಿಗೆ ಹೇಳುತ್ತಿದ್ದಾರೆ. ಶಾಲೆಗಳಿಗೆ ಶೌಚಾಲಯ ಕಟ್ಟಿಸಿ ಕೊಡಲು ಶಾಲೆಯ ಮುಖ್ಯೋಪಾಧ್ಯಾಯರು ಅಧಿಕಾರಿಗಳಿಗೆ ಹಲವಾರು ಬಾರಿ ಪತ್ರ ಬರೆದು, ಅಲೆದಾಡುತ್ತಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಸದ್ಯ ಉದ್ಯೋಗ ಖಾತ್ರಿ ಯೋಜನೆಯಡಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಅವಕಾಶ ಇದೆ. ತಾಲೂಕಿನ ಅನೇಕ ಶಾಲೆಗಳಲ್ಲಿ ಶೌಚಾಲಯಗಳ ಕೊರತೆ ಇದ್ದರೂ ನರೇಗಾ ಯೋಜನೆಯಡಿ ಇನ್ನೊಂದು ಶೌಚಾಲಯ ಕಟ್ಟಿಸಲಾಗಿದೆ. ಆದರೆ, ಈ ಶಾಲೆಯಲ್ಲಿ ಮಕ್ಕಳಿಗೆ ಇನ್ನೂ ಸಮರ್ಪಕ ಶೌಚಾಲಯದ ವ್ಯವಸ್ಥೆ ಇಲ್ಲ. ಗ್ರಾಪಂ ಅಧಿಕಾರಿಗಳು ಶೌಚಾಲಯ ಕಟ್ಟಿಸಲು ಮುಂದಾಗುತ್ತಿಲ್ಲ ಯಾಕೇ. ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಶಾಲಾ ಮಕ್ಕಳ ಬಗ್ಗೆ ಅಪಾರ ಗೌರವವಿದೆ. ಹೀಗಾಗಿ ಶಾಲೆಯ ವಿದ್ಯಾರ್ಥಿಗಳ ಕಷ್ಟವನ್ನು ಕೇಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಇನ್ನಾದರೂ ಇಂತಹ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿ ಸರ್ಕಾರಿ ಶಾಲೆಗಳಿಗೆ ಅಗತ್ಯವಾಗಿ ಬೇಕಾಗಿರುವ ಮೂಲ ಸೌಲಭ್ಯಗಳನ್ನು ನೀಡಬೇಕಿದೆ.
ಕೋಟ್
- ಸಿದ್ದು ಪಾಟೀಲ, ಜಾಲವಾದ, ನಾಗರಿಕ
ಉದ್ಯೋಗ ಖಾತ್ರಿ ಯೋಜನೆಯಡಿ ಶಾಲೆಗಳಲ್ಲಿ ಶೌಚಾಲಯ, ಕಾಂಪೌಂಡ್ ನಿರ್ಮಾಣಕ್ಕೆ ಅವಕಾಶ ಇದೆ. ಜಾಲವಾದ ಗ್ರಾಪಂ ಪಿಡಿಒ ಜೊತೆ ಮಾತನಾಡಿ ಒಂದು ವಾರದಲ್ಲಿ ಶಾಲೆಗಳಿಗೆ ಶೌಚಾಲಯ ನಿರ್ಮಾಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸುತ್ತೇನೆ.
---------
- ಆರೀಫ್ ಬಿರಾದಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಿಂದಗಿ.