ಕನ್ನಡಪ್ರಭ ವಾರ್ತೆ ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿದ್ದ 12 ವಿದ್ಯಾರ್ಥಿಗಳು ಗುಣಮುಖರಾಗಿದ್ದು, ಎಲ್ಲ ವಿದ್ಯಾರ್ಥಿಗಳನ್ನು ಅವರ ಪೋಷಕರೊಂದಿಗೆ ಮಂಗಳವಾರ ಸಂಜೆ ಅವರ ಮನೆಗೆ ಕಳುಹಿಸಿ ಕೊಡಲಾಗಿದೆ ಎಂದು ತಹಸೀಲ್ದಾರ ಡಾ.ಚಿಕ್ಕಪ್ಪ ನಾಯಕ ಮತ್ತು ಬಿಇಒ ಸಮೀರ ಮುಲ್ಲಾ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.
ಕನ್ನಡಪ್ರಭ ವಾರ್ತೆ ಮುಧೋಳ
ತಾಲೂಕಿನ ಮುಗಳಖೋಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿದ್ದ 12 ವಿದ್ಯಾರ್ಥಿಗಳು ಗುಣಮುಖರಾಗಿದ್ದು, ಎಲ್ಲ ವಿದ್ಯಾರ್ಥಿಗಳನ್ನು ಅವರ ಪೋಷಕರೊಂದಿಗೆ ಮಂಗಳವಾರ ಸಂಜೆ ಅವರ ಮನೆಗೆ ಕಳುಹಿಸಿ ಕೊಡಲಾಗಿದೆ ಎಂದು ತಹಸೀಲ್ದಾರ ಡಾ.ಚಿಕ್ಕಪ್ಪ ನಾಯಕ ಮತ್ತು ಬಿಇಒ ಸಮೀರ ಮುಲ್ಲಾ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 3 ವಿದ್ಯಾರ್ಥಿಗಳ ಕುರಿತು ತಹಸೀಲ್ದಾರ್ ಡಾ.ಚಿಕ್ಕಪ್ಪ ನಾಯಕ ಮಾಹಿತಿ ನೀಡಿದ್ದು, ಪ್ರಸ್ತುತ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಆದರೂ ಮುನ್ನೆಚ್ಚರಿಕೆಯಾಗಿ ಹೆಚ್ಚಿನ ತಪಾಸಣೆ ನಡೆಸಲಾಗುತ್ತಿದೆ. ಬುಧವಾರ ಸಂಜೆ ವರೆಗೆ ಆಸ್ಪತ್ರೆಯಲ್ಲೇ ಉಳಿಸಿಕೊಂಡು ಅವರು ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ ಪೋಷಕರೊಂದಿಗೆ ಅವರ ಮನೆಗೆ ಕಳುಹಿಸಲು ಅಗತ್ಯ ವ್ಯವಸ್ಥೆ ಮಾಡಲಾಗುವುದೆಂದು ತಿಳಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.