ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ

KannadaprabhaNewsNetwork |  
Published : Jul 23, 2026, 02:45 AM IST
ಮಾರ್ಗದರ್ಶನ | Kannada Prabha

ಸಾರಾಂಶ

ಇಲ್ಲಿನ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಉದ್ದೇಶದಿಂದ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ ನಡೆಯಿತು.

ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಉದ್ದೇಶದಿಂದ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ ನಡೆಯಿತು.ವ್ಯಕ್ತಿತ್ವ ವಿಕಸನ ತರಬೇತುದಾರ ಕೀರ್ತನ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ವಿದ್ಯಾರ್ಥಿಗಳು ಅನೇಕ ಗುರಿಗಳನ್ನು ಬೆನ್ನಟ್ಟುವ ಬದಲು ಒಂದೇ ಗುರಿಯನ್ನು ನಿಗದಿಪಡಿಸಿ ಏಕಾಗ್ರತೆ, ಶಿಸ್ತು ಹಾಗೂ ಬದ್ಧತೆಯಿಂದ ಪರಿಶ್ರಮಿಸಿದರೆ ಯಶಸ್ಸು ಸಾಧ್ಯವಾಗುತ್ತದೆ ಎಂದು ಹೇಳಿದರು.“ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಂಡವರಿಗೆ ಅವಕಾಶಗಳು ತಾವಾಗಿಯೇ ದೊರೆಯುತ್ತವೆ. ಇಂದಿನ ಸಮಾಜದ ಅಗತ್ಯಗಳಿಗೆ ತಕ್ಕಂತೆ ತಮ್ಮನ್ನು ತಾವು ರೂಪಿಸಿಕೊಳ್ಳಬೇಕು. ಸಾಧನೆಯ ಹಾದಿಯಲ್ಲಿ ಸೋಲುಗಳು ಸಹಜ. ಅವುಗಳಿಗೆ ಹೆದರದೆ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪ ಪ್ರಾಚಾರ್ಯ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪ್ರಕಾಶ್ ಭಟ್ ಉಪಸ್ಥಿತರಿದ್ದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ವಿಯೋಲಾ ಸ್ಟಾನ್ಲಿ ಅತಿಥಿಗಳನ್ನು ಪರಿಚಯಿಸಿದರು. ಕೀರ್ತನ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಬಿಕಾ ನೀಟ್‌ ಅಕಾಡೆಮಿ: ರಿಪೀಟರ್ಸ್‌ ಬ್ಯಾಚ್ ದಾಖಲಾತಿ ಆರಂಭ
ಕೆಬಿಎಲ್‌ ಹೆಚ್ಚುವರಿ ನಿರ್ದೇಶಕರಾಗಿ ಡಾ.ಎಂ.ಅರುಣ ಶ್ಯಾಮ್‌ ನೇಮಕ