ಕನ್ನಡಪ್ರಭ ವಾರ್ತೆ, ತುಮಕೂರು
ತುಮಕೂರು ತಾಲೂಕು ಚಿಕ್ಕಬೆಳ್ಳಾವಿ ಗ್ರಾಮದಲ್ಲಿ ಬಾಲಕಿ ಮೇಲೆ ದಾಳಿ ನಡೆಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.ಕಳೆದ ಎರಡು ದಿವಸಗಳ ಹಿಂದೆಯಷ್ಟೆ ಬಾಲಕಿ ಮೇಲೆ ಚಿರತೆ ದಾಳಿ ನಡೆಸಿತ್ತು. ಆದರೆ, ಆಕೆಯ ತಂದೆಯೇ ಚಿರತೆಯನ್ನು ಓಡಿಸಿ ತನ್ನ ಮಗಳನ್ನು ರಕ್ಷಿಸಿಕೊಂಡಿದ್ದರು. ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು. ಗ್ರಾಮಸ್ಥರ ಮನವಿಯಂತೆ ಗ್ರಾಮದ ಹೊರವಲಯದ ಕೋಳಿ ಫಾರಂ ಬಳಿ ಅರಣ್ಯ ಇಲಾಖೆ ಬೋನು ಇರಿಸಿತ್ತು. ಶನಿವಾರ ಬೋನಿಗೆ ಚಿರತೆ ಬೀಳುವ ಮೂಲಕ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.