ಕಲಬುರಗಿಯಲ್ಲಿ 11ನೇ ಚಿತ್ರಸಂತೆ ಯಶಸ್ವಿ

KannadaprabhaNewsNetwork |  
Published : Jan 15, 2024, 01:46 AM IST
ಚಿತ್ರಕಲಾ ಪ್ರೇಮಿಗಳ ಮನಸೂರೆಗೊಂಡ ಚಿತ್ತಾಕರ್ಷಕ ಚಿತ್ರಸಂತೆ | Kannada Prabha

ಸಾರಾಂಶ

ಕಲಾವಿದರು ಕಲೆಯನ್ನು ಆವಾಹಿಸಿಕೊಂಡಿದ್ದರೆ, ಕಲಾ ಪ್ರೇಮಿಗಳು ಮತ್ತು ಕಲಾ ಪೋಷಕರು ಕಲೆಯನ್ನು ಮನಪೂರ್ತಿ ಆಸ್ವಾದಿಸಿದರು.

ಕನ್ನಡಪ್ರಭ ವಾರ್ತೆ ಕಲಬುರಗಿ

ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಿಂದ ಮಹಾನಗರ ಪಾಲಿಕೆ ಗೇಟ್‍ವರೆಗೆ ಇಂದು ಆಯೋಜಿಸಿದ್ದ 11ನೇ ಚಿತ್ರಸಂತೆ-2024 ಚಿತ್ರಕಲಾ ಪ್ರಿಯರ ಚಿತ್ತಾಕರ್ಷಣೆಗೊಳಿಸಿತು.

ಕಲಾವಿದರು ಕಲೆಯನ್ನು ಆವಾಹಿಸಿಕೊಂಡಿದ್ದರೆ, ಕಲಾ ಪ್ರೇಮಿಗಳು ಮತ್ತು ಕಲಾ ಪೋಷಕರು ಕಲೆಯನ್ನು ಮನಪೂರ್ತಿ ಆಸ್ವಾದಿಸಿದರು.

ವಿಕಾಸ ಅಕಾಡೆಮಿ, ಚೈತನ್ಯಮಯಿ ಟ್ರಸ್ಟ್, ದೃಶ್ಯ ಬೆಳಕು ಸಾಂಸ್ಕೃತಿಕ ಸಂಸ್ಥೆ, ಗುಲ್ಬರ್ಗ ವಿಶ್ವವಿದ್ಯಾಲಯ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ದಿ ಆರ್ಟ್ ಇಂಟಿಗ್ರೇಶನ್ ಸೊಸಾಯಿಟಿ, ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಬಿಸಿಲು ಆರ್ಟ್ ಗ್ಯಾಲರಿ, ಶರಣಬಸವ ವಿಶ್ವವಿದ್ಯಾಲಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಚಿತ್ರಸಂತೆ ಆಯೋಜಿಸಲಾಗಿತ್ತು.

ಚಿತ್ರಸಂತೆ, ಚಿತ್ರಕಲಾ ಪ್ರದರ್ಶನ ಮತ್ತು ಮಾರಾಟವನ್ನು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಉದ್ಘಾಟಿಸಿದರು. ವಿಕಾಸ ಅಕಾಡೆಮಿ ಅಧ್ಯಕ್ಷ ಡಾ.ಬಸವರಾಜ ಪಾಟೀಲ ಸೇಡಂ ಅವರ ಗೌರವ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯ ಶಶೀಲ ಜಿ.ನಮೋಶಿ, ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಪತಿ ಡಾ.ದಯಾನಂದ ಅಗಸರ, ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಅಧ್ಯಕ್ಷ ಶಶಿಕಾಂತ ಪಾಟೀಲ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಮಾನವಿಕ ಹಾಗೂ ಭಾಷಾ ನಿಕಾಯದ ಡೀನ್ ಡಾ.ವಿಕ್ರಮ್ ವಿಸಾಜಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಚಿತ್ರಸಂತೆಯ ಪ್ರಧಾನ ಸಂಯೋಜಕ ಡಾ.ಎ.ಎಸ್.ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಚಿತ್ರಸಂತೆ ಸಂಯೋಜಕರಾದ ಡಾ.ಪರಶುರಾಮ ಪಿ, ವಿ.ಬಿ.ಬಿರಾದಾರ, ಎಂ.ಎಚ್.ಬೆಳಮಗಿ ಉಪಸ್ಥಿತರಿದ್ದರು.

ಸನ್ಮಾನ: ರಮಣಶ್ರೀ ಪ್ರಶಸ್ತಿ ಪುರಸ್ಕೃತರಾದ ನಾಡೋಜ ಡಾ. ಜೆ.ಎಸ್. ಖಂಡೇರಾವ, ಶರಣಬಸವ ವಿವಿ ಗೌರವ ಡಾಕ್ಟರೇಟ್ ಪದವಿ ಪಡೆದ ಡಾ. ಎ.ಎಸ್. ಪಾಟೀಲ, ಜಕಣಾಚಾರಿ ಪ್ರಶಸ್ತಿ ಪುರಸ್ಕೃತರಾದ ಮಹಾದೇವಪ್ಪ ಶಿಲ್ಪಿ, ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ ಪುರಸ್ಕೃತರಾದ ಬಸವರಾಜ ಎಲ್. ಜಾನೆ, ಗುಲ್ಬರ್ಗ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ ಪಡೆದ ಮಾನಯ್ಯ ಎನ್.ಬಡಿಗೇರ್ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಪುಷ್ಪಹಸ್ತ ನೃತ್ಯ ಕಲಾ ಕೇಂದ್ರದಿಂದ ಭರತನಾಟ್ಯ, ದೊರೆ ಆರ್ಕೆಸ್ಟ್ರಾದಿಂದ ರಸಮಂಜರಿ, ಸುಕಿ ಸಾಂಸ್ಕೃತಿಕ ಸಂಸ್ಥೆಯಿಂದ ಸುಮಧುರ ಗೀತ ಗಾಯನ, ದಾನಯ್ಯ ಚೌಕಿಮಠ ಅವರಿಂದ ಕುಂಭ ಕಲೆಯ ಪ್ರಾತ್ಯಕ್ಷತೆ, ಗೋಪಾಲ ಕೆ.ಪಿ. ಅವರಿಂದ ಭಾವಶಿಲ್ಪ ಪ್ರಾತ್ಯಕ್ಷತೆ ನಡೆಯಿತು.

PREV

Recommended Stories

ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ
ಬೆಂಗಳೂರು ನಗರದಲ್ಲಿ ಮತ್ತೆ ರಾರಾಜಿಸಲಿವೆ ಜಾಹೀರಾತು : ವಾರ್ಷಿಕ ₹ 6000 ಕೋಟಿ ನಿರೀಕ್ಷೆ