ಚಿತ್ತರಂಜನ್ ಬೋಳಾರ್‌ಗೆ ರಾಜ್ಯದ ಶ್ರೇಷ್ಠ ಸಾಧಕ ಪುರಸ್ಕಾರ ‘ಕರುನಾಡ ರತ್ನ’ ಪ್ರಶಸ್ತಿ

KannadaprabhaNewsNetwork |  
Published : Nov 27, 2026, 02:30 AM IST
ಚಿತ್ತರಂಜನ್‌ ಬೋಳಾರ್‌  | Kannada Prabha

ಸಾರಾಂಶ

ಕರ್ನಾಟಕ ಮೀಡಿಯಾ ಕ್ಲಬ್ ವತಿಯಿಂದ ನೀಡಲಾಗುವ ರಾಜ್ಯದ ಶ್ರೇಷ್ಠ ಸಾಧಕ ಪುರಸ್ಕಾರ ‘ಕರುನಾಡ ರತ್ನ’ ಪ್ರಶಸ್ತಿ ಹಾಗೂ ಬಿರುದಿಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ಭಾಜನರಾಗಿದ್ದಾರೆ. ನ. ೨೯ ರಂದು ಬೆಂಗಳೂರಿನ ಜೆ.ಸಿ. ರಸ್ತೆಯ ಪುರಭವನದಲ್ಲಿ ಕನ್ನಡ ನುಡಿ - ನಮನ ಹಬ್ಬದ ಅಂಗವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮಂಗಳೂರು: ಕರ್ನಾಟಕ ಮೀಡಿಯಾ ಕ್ಲಬ್ ವತಿಯಿಂದ ನೀಡಲಾಗುವ ರಾಜ್ಯದ ಶ್ರೇಷ್ಠ ಸಾಧಕ ಪುರಸ್ಕಾರ ‘ಕರುನಾಡ ರತ್ನ’ ಪ್ರಶಸ್ತಿ ಹಾಗೂ ಬಿರುದಿಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ಭಾಜನರಾಗಿದ್ದಾರೆ. ನ. ೨೯ ರಂದು ಬೆಂಗಳೂರಿನ ಜೆ.ಸಿ. ರಸ್ತೆಯ ಪುರಭವನದಲ್ಲಿ ಕನ್ನಡ ನುಡಿ - ನಮನ ಹಬ್ಬದ ಅಂಗವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಸಹಕಾರ ಕ್ಷೇತ್ರದಲ್ಲಿ ಹಲವು ದಶಕಗಳಿಂದ ಸಲ್ಲಿಸಿದ ಅನನ್ಯ ಸೇವೆ, ಸಂಘದ ಸರ್ವಾಂಗೀಣ ಅಭಿವೃದ್ಧಿ ಹಾಗೂ ಸಮಾಜಮುಖಿ ಕಾರ್ಯಯಗಳನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇವರು ಸಹಕಾರ ಕ್ಷೇತ್ರದ ಜೊತೆಗೆ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಾಹಿತ್ಯ, ಸಾಂಸ್ಕೃತಿಕ ಹೀಗೆ ಹತ್ತು ಹಲವಾರು ಕ್ಷೇತ್ರಗಳಲ್ಲಿ ಸಲ್ಲಿಸಿದ ಅನನ್ಯ ಸೇವೆಗೆ ಅನೇಕ ರಾಷ್ಟೀಯ, ರಾಜ್ಯ ಮಟ್ಟದ ಪ್ರಶಸ್ತಿಗಳಿಂದ ಪುರಸ್ಕ್ರತರಾಗಿದ್ದಾರೆ.

ಸಹಕಾರ ರತ್ನ ಪ್ರಶಸ್ತಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಷ್ಟ್ರೀಯ ಬಸವಶ್ರೀ ಪ್ರಶಸ್ತಿ, ಸಮಾಜ ರತ್ನ ಪ್ರಶಸ್ತಿ, ಸಜ್ಜನ - ಚಂದನ ಸದ್ಭಾವನಾ ರಾಜ್ಯ ಪ್ರಶಸ್ತಿ, ಪರಿವರ್ತನಾಶ್ರೀ ರಾಜ್ಯ ಪ್ರಶಸ್ತಿ, ಭಾರತ ರತ್ನ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ರಾಷ್ಟೀಯ ಪ್ರಶಸ್ತಿ, ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -೨೦೨೨ ಪ್ರಶಸ್ತಿ, ತೌಳವ ಸಹಕಾರಿ ಮಾಣಿಕ್ಯ, ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ವಿಶಿಷ್ಟ ಸೇವಾ ಪ್ರಶಸ್ತಿ ಜೊತೆಯಲ್ಲಿ ಹತ್ತು ಹಲವಾರು ಸಂಘ -ಸಂಸ್ಥೆಗಳಲ್ಲಿ ಸಕ್ರಿಯರಾಗಿರುವ ಇವರನ್ನು ವಿವಿಧ ಸಹಕಾರ ಸಂಘ- ಸಂಸ್ಥೆಗಳು ಗುರುತಿಸಿ ಸನ್ಮಾನಿಸಿದೆ.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಸ್ಥಾಪಕ ಅಧ್ಯಕ್ಷರಾಗಿ ನಿರಂತರ ನಾಲ್ಕನೇಯ ಬಾರಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಇವರು, ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ (ನಿ.) ಬೆಂಗಳೂರು ಇದರ ಆಡಳಿತ ಮಂಡಳಿಗೆ ಮೈಸೂರು ವಿಭಾಗದಿಂದ ಕರಾವಳಿ ಕ್ಷೇತ್ರ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಥಮ ಬಾರಿಗೆ ನಿರ್ದೇಶಕರಾಗಿ ಬಹುಮತದಿಂದ ಆಯ್ಕೆಯಾದವರು.

ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೆಬಲ್ ಟ್ರಸ್ಟ್ ಇದರ ಕಾರ್ಯಧ್ಯಕ್ಷರಾಗಿ, ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆ ಆಡಳಿತ ಮಂಡಳಿ ಸದಸ್ಯರಾಗಿ, ದ. ಕ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಮಂಗಳೂರು ಇದರ ನಿರ್ದೇಶಕರಾಗಿ ಆಯ್ಕೆ, ದ.ಕ. ಜಿಲ್ಲಾ ಸಗಟು ಮಾರಾಟ ಸಹಕಾರ ಸಂಘ ಇದರ ಮಾಜಿ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ.

ಆತ್ಮಶಕ್ತಿ ವಿ. ವಿ ಸಹಕಾರಿ ಸಂಘ ಹಾಗೂ ಇತರ ಸಂಘಗಳ ಮೂಲಕ ಸುಮಾರು ೧೧೭ಕ್ಕೂ ಮೀರಿ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ೧,೦೦೦ಕ್ಕೂ ಮಿಕ್ಕಿ ಕಣ್ಣಿನ ಕ್ಯಾಟ್ರಾಕ್ಟ್ ಚಿಕಿತ್ಸೆ, ಉಚಿತ ಔಷಧಿ, ಶಸ್ತ್ರ ಚಿಕಿತ್ಸಾ ವೆಚ್ಚ ಹಾಗೂ ೨೨,೦೦೦ಕ್ಕೂ ಹೆಚ್ಚು ಕನ್ನಡಕವನ್ನು ಉಚಿತವಾಗಿ ವಿತರಿಸಲಾಗಿದೆ. ಉಚಿತ ಆರೋಗ್ಯ ಕಾರ್ಡನ್ನು ಬಡ ಕುಟುಂಬಗಳಿಗೆ ಪ್ರತಿ ವರುಷ ವಿತರಿಸುತ್ತಾ ಬರುತ್ತಿದ್ದಾರೆ. ಅಸಹಾಯಕ ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ವರ್ಷಂಪ್ರತಿ ಕಲಿಕಾ ಕಾಲೇಜುಗಳಿಗೆ ನೇರವಾಗಿ ವಿದ್ಯಾರ್ಥಿಗಳ ದಾಖಲಾತಿ ಮತ್ತು ಪರೀಕ್ಷಾ ಶುಲ್ಕಗಳನ್ನು ಪಾವತಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಶಕ್ತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ.

ಏಕವ್ಯಕ್ತಿ ಪ್ರೇರಕರಾಗಿ ಬಹುಮುಖಿ ಪೂರಕರಾಗುವಲ್ಲಿ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರು ಉದಾಹರಣೆಯಾಗಿ ನಿಲ್ಲುತ್ತಾರೆ.

----------------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜನಸಾಮಾನ್ಯರ ಕಲ್ಯಾಣಕ್ಕಾಗಿ ವಿವಿಧ ಜನಪರ ಕಾರ್ಯಕ್ರಮ: ರಿಜ್ವಾನ್ ಅರ್ಷದ್
ಬ್ಯಾಂಕುಗಳು ಆಹಾರ ಸಂಸ್ಕರಣೆಗೆ ಪ್ರೋತ್ಸಾಹ ನೀಡಿ: ಪ್ರತೀಕ್ ಬಾಯಲ್‌