ಕನ್ನಡಪ್ರಭ ವಾರ್ತೆ ಚಾಮರಾಜನಗರ
ಮತದಾನದ ಮಹತ್ವ ಕುರಿತು ಪ್ರತಿಯೊಬ್ಬರಿಗೂ ಅರಿವು ಮೂಡಿಸಲು ಕಾರ್ಯಕ್ರಮ ಉತ್ತಮ ವೇದಿಕೆಯಾಗಲಿದೆ. ಸದೃಢ ದೇಶ ನಿರ್ಮಾಣಕ್ಕೂ ಇದು ನೆರವಾಗಬೇಕು ಎಂದರು. ಇದೇ ವೇಳೆ ಜಿಲ್ಲೆಯಲ್ಲಿ ೧೮ ವರ್ಷ ತುಂಬಿದ ಯುವ ಮತದಾರರಿಗೆ ಮತದಾರರ ಗುರುತಿನ ಚೀಟಿ ವಿತರಿಸಲಾಯಿತು.
ಜಿಲ್ಲಾಧಿಕಾರಿ ಶಿಲ್ಪಾನಾಗ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲರಿಗೂ ರಾಷ್ಟ್ರೀಯ ಮತದಾರರ ದಿನದ ಶುಭಾಷಯಗಳನ್ನು ತಿಳಿಸಿರು. ಪ್ರತಿವರ್ಷದಂತೆ ಜಿಲ್ಲೆಯಲ್ಲಿ ಈ ಬಾರಿಯು ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಹಬ್ಬದ ಮಾದರಿಯಲ್ಲಿ ಆಚರಿಸಲಾಗುತ್ತಿದೆ. ಮತದಾರರ ದಿನ ಆಚರಣೆಯನ್ನು ಸಂವಿಧಾನದ ಹಬ್ಬವಾಗಿ ನಾವೆಲ್ಲರೂ ಆಚರಿಸಬೇಕು ಎಂದರು.ಸಮತಾ ಸೊಸೈಟಿಯ ಅಧ್ಯಕ್ಷೆ ದೀಪಾ ಬುದ್ಧೆ ಮಾತನಾಡಿ, ರಾಷ್ಟ್ರೀಯ ಮತದಾರರ ದಿನವನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ಮತದಾನ ಅರಿವು ಮೂಡಿಸುವ ಪ್ರಮುಖ ಕಾರ್ಯಚಟುವಟಿಕೆಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಪಾಲ್ಗೊಂಡು ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿದೆ. ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿ ನೀಡುವುದಲ್ಲದೆ ವಸತಿ, ಇತರೆ ಅಗತ್ಯ ಸೌಲಭ್ಯಗಳನ್ನು ನೀಡಿ ಜಿಲ್ಲಾಡಳಿತ ಉತ್ತಮ ಕೆಲಸ ಮಾಡುತ್ತಿದೆ. ಎಲ್ಲಾ ಜಿಲ್ಲೆಗಳಲ್ಲಿಯೂ ಇದು ಆಗಬೇಕು ಎಂದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಮತದಾನದಲ್ಲಿ ಪಾಲ್ಗೊಂಡ ಲಿಂಗತ್ವ ಅಲ್ಪಸಂಖ್ಯಾತರಿಗೆ ಏರ್ಪಡಿಸಿದ್ದ ಸೆಲ್ಫಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಹಾಗೂ ಮತದಾನದ ಕುರಿತ ಪ್ರಬಂಧ, ರಸಪ್ರಶ್ನೆ ಮತ್ತು ಭಿತ್ತಿಚಿತ್ರ ಸ್ಪರ್ಧೆಗಳಲ್ಲಿನ ವಿಜೇತರಿಗೆ ಹಾಗೂ ದೇಶಾದ್ಯಂತ ಗಮನ ಸೆಳೆದ ರೇಷ್ಮೆ ಸೀರೆಯಲ್ಲಿ ಮತದಾನದ ಜಾಗೃತಿ ಮುದ್ರಿಸಿ ವಿತರಿಸಿದ ಕೊಳ್ಳೇಗಾಲದ ಕೈಮಗ್ಗ ನೇಕಾರರ ಸಂಘಕ್ಕೆ ಪ್ರಮಾಣಪತ್ರ, ಸ್ಮರಣಿಕೆಯೊಂದಿಗೆ ಪ್ರಥಮ, ದ್ವಿತೀಯ ಹಾಗೂ ತೃತಿಯ ಬಹುಮಾನಗಳನ್ನು ವಿತರಿಸಲಾಯಿತು.ಕಳೆದ ಲೋಕಸಭೆ ಚುನಾವಣೆಯಲ್ಲಿ ಮತದಾರರನ್ನು ಮತಗಟ್ಟೆಗಳಿಗೆ ಆಕರ್ಷಿಸಲು ೪೮ ವಿಶೇಷ ಮತಗಟ್ಟೆಗಳನ್ನು ರಚಿಸಿದ ಮತಗಟ್ಟೆ ಅಧಿಕಾರಿಗಳು ಹಾಗೂ ಯುವಸೌರಭ, ಸಖಿ ಸೌರಭ, ಜಾನಪದ ಸಾಂಪ್ರಾದಾಯಿಕ ಬೂಥ್‌ಗಳನ್ನು ನಿರ್ಮಿಸಿದ್ದ ಅಧಿಕಾರಿಗಳಿಗೆ ಪ್ರಮಾಣಪತ್ರ ಹಾಗೂ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು. ನಂತರ ಸಹಿ ಸಂಗ್ರಹ ಅಭಿಯಾನ ನಡೆಯಿತು.
ನ್ಯಾ.ಬಿ.ಎಸ್.ಭಾರತಿ, ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಪಂ ಸಿಇಒ ಮೋನಾ ರೋತ್, ಎಸ್ಪಿ ಡಾ.ಬಿ.ಟಿ.ಕವಿತ ಹಾಗೂ ಇತರೆ ಗಣ್ಯರು ಹಾಜರಿದ್ದ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆಯ ೩ನೇ ತರಗತಿ ವಿದ್ಯಾರ್ಥಿನಿ ನುಸಾ ಫಾತೀಮಾ ಖಾನ್ ಅವರು ಅಚ್ಚುಕಟ್ಟಾಗಿ ಸಂವಿಧಾನದ ಪ್ರತಿಜ್ಞಾವಿಧಿ ಬೋಧಿಸಿದ್ದು ವಿಶೇಷವಾಗಿತ್ತು.ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಜಿಪಂ ಉಪ ಕಾರ್ಯದರ್ಶಿ ಪಿ. ಲಕ್ಷ್ಮೀ, ತಹಸೀಲ್ದಾರ್ ಗಿರಿಜ, ಜಿಪಂ ಮುಖ್ಯ ಯೋಜನಾಧಿಕಾರಿ ದೀಪಾ, ಇತರರು ಉಪಸ್ಥಿತರಿದ್ದರು.