ಅಲಂಗಾರು ಮೌಂಟ್ ರೋಸರಿ ಆಸ್ಪತ್ರೆಯಲ್ಲಿ ಕ್ರಿಸ್ಮಸ್ ಆಚರಣೆ

KannadaprabhaNewsNetwork |  
Published : Dec 21, 2024, 01:17 AM IST
11 | Kannada Prabha

ಸಾರಾಂಶ

ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವಕ್ತಾರ, ಸಮಾಜ ಸೇವಕ ರಾಜೇಶ್ ಕಡಲಕೆರೆ ಅವರನ್ನು ಸನ್ಮಾನಿಸಲಾಯಿತು.

ಮೂಡುಬಿದಿರೆ: ಮೂಡುಬಿದಿರೆ ಅಲಂಗಾರು ಮೌಂಟ್ ರೋಸರಿ ಆಸ್ಪತ್ರೆ ಮತ್ತು ಮೌಂಟ್ ರೋಸರಿ ಸಂಸ್ಥೆಯ ಆಶ್ರಯದಲ್ಲಿ ಕ್ರಿಸ್ಮಸ್ ಹಬ್ಬದ ಆಚರಣೆ ಮತ್ತು ಗೌರವ ಸನ್ಮಾನ ಕಾರ್ಯಕ್ರಮ ನಡೆಯಿತು.ಮೌಂಟ್ ರೋಸರಿ ಆಸ್ಪತ್ರೆ ಮತ್ತು ಮೌಂಟ್ ರೋಸರಿ ಸಂಸ್ಥೆಗಳ ಸ್ಥಾಪಕರಾದ ರೆ.ಫಾ. ಎಡ್ವಿನ್ ಪಿಂಟೊ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಮೂಡುಬಿದಿರೆ ಇನ್ಸ್‌ಪೆಕ್ಟರ್‌ ಸಂದೇಶ್ ಪಿ.ಜಿ., ಎಕ್ಸಲೆಂಟ್ ಕಾಲೇಜಿನ ಅಧ್ಯಕ್ಷ ಯುವರಾಜ ಜೈನ್, ಪುರಸಭಾ ಸದಸ್ಯ ಪಿ.ಕೆ. ಥೋಮಸ್, ಎಂ.ಸಿ.ಎಸ್. ಬ್ಯಾಂಕ್ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್, ಪುರಸಭಾ ನಾಮನಿರ್ದೇಶಿತ ಸದಸ್ಯ ಕ್ಲಾರಿಯೋ ಡಿಸೋಜ ಅತಿಥಿಗಳಾಗಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವಕ್ತಾರ, ಸಮಾಜ ಸೇವಕ ರಾಜೇಶ್ ಕಡಲಕೆರೆ ಅವರನ್ನು ಸನ್ಮಾನಿಸಲಾಯಿತು. ಮೌಂಟ್ ರೋಸರಿ ಸಂಸ್ಥೆಗಳ ಸುಪೀರಿಯರ್ ಸಿ. ಪ್ರೆಸಿಲ್ಲಾ, ಮದರ್ ಜನರಲ್ ಸುಪೀರಿಯರ್ ಸಿ. ಸುನೀತಾ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾ.1ರಿಂದ ಸೇವೆ ಬಂದ್‌ ಸರ್ಕಾರಿ ವೈದ್ಯರಿಂದ ಎಚ್ಚರಿಕೆ
ಚರಿತ್ರೆ ತಿಳಿದಿದ್ದರಷ್ಟೇ ಚರಿತ್ರೆ ಸೃಷ್ಟಿಸಲು ಸಾಧ್ಯ: ಸಿಎಂ