ಕ್ರಿಸ್ಮಸ್ ಶಾಂತಿ ಸಾರುವ ಹಬ್ಬ: ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ

KannadaprabhaNewsNetwork |  
Published : Dec 19, 2023, 01:45 AM IST
ಸೌಹಾರ್ದ ಕ್ರಿಸ್ಮಸ್ ನಲ್ಲಿ ಸಾಧಕರಿಗೆ ಸನ್ಮಾನ | Kannada Prabha

ಸಾರಾಂಶ

ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಆಯೋಜಿಸಿದ್ದ ಸೌಹಾರ್ದ ಕ್ರಿಸ್ಮಸ್ ಆಚರಣೆ ಉದ್ಘಾಟನೆ

ಕನ್ನಡಪ್ರಭ ವಾರ್ತೆ ಉಡುಪಿ

ಕ್ರಿಸ್ತ ಜಯಂತಿ ಹಬ್ಬವು ಶಾಂತಿಯನ್ನು ಸಾರುತ್ತದೆ. ಶಾಂತಿಯ ಸಾಧನವಾಗಲು, ಶಾಂತಿಯ ದೂತರಾಗಲು ನಮ್ಮನ್ನು ಪ್ರೇರೇಪಿಸುತ್ತದೆ. ಕ್ರಿಸ್ತ ಜಯಂತಿಯ ಪ್ರೀತಿಯ ಜ್ಯೋತಿ ನಮ್ಮ ತನುಮನಗಳಲ್ಲಿ ಪ್ರಜ್ವಲಿಸಬೇಕಾದರೆ ನಾವು ಕ್ರಿಸ್ತರಂತೆ ಪ್ರೀತಿ ಸ್ವರೂಪರಾಗಿ ಸೇವಾ ಮನೋಭಾವದಿಂದ ನಿಸ್ವಾರ್ಥಿಗಳಾಗಬೇಕು ಎಂದು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಕರೆ ನೀಡಿದರು.

ಅವರು ಶನಿವಾರ ಇಲ್ಲಿನ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಆಯೋಜಿಸಿದ್ದ ಸೌಹಾರ್ದ ಕ್ರಿಸ್ಮಸ್ ಆಚರಣೆ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಸದಸ್ಯ ಅಬ್ದುಲ್ ಅಝಿಜ್ ಉದ್ಯಾವರ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಸಂಚಾಲಕ ಸುಂದರ ಮಾಸ್ತರ್ ಹಾಗೂ ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಶುಭ ಹಾರೈಸಿದರು.

ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷ ಸಂತೋಷ್ ಕರ್ನೆಲಿಯೋ ಅಧ್ಯಕ್ಷತೆ ವಹಿಸಿದ್ದರು. ನಿಕಟಪೂರ್ವ ಅಧ್ಯಕ್ಷೆ ಮೇರಿ ಡಿಸೋಜ, ನಿಯೋಜಿತ ಅಧ್ಯಕ್ಷ ರೊನಾಲ್ಡ್ ಡಿಆಲ್ಮೇಡಾ, ಮಾಜಿ ಅಧ್ಯಕ್ಷರಾದ ವಲೇರಿಯನ್ ಫರ್ನಾಂಡಿಸ್, ವಾಲ್ಟರ್ ಸಿರಿಲ್ ಪಿಂಟೊ, ಆಲ್ಫೋನ್ಸ್ ಡಿಕೋಸ್ತಾ, ಮಾಧ್ಯಮ ಸಮಿತಿ ಸಂಚಾಲಕ ಮೈಕಲ್ ರೊಡ್ರಿಗಸ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಚಾಲಕ ಮೆಲ್ವಿನ್ ಅರಾನ್ಹಾ ಸ್ವಾಗತಿಸಿದರು. ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಕಾರ್ಯದರ್ಶಿ ಒಲಿವಿಯಾ ಡಿಮೆಲ್ಲೊ ವಂದಿಸಿದರು. ಮಾಜಿ ಅಧ್ಯಕ್ಷ ಡಾ.ಜೆರಾಲ್ಡ್ ಪಿಂಟೊ ನಿರೂಪಿಸಿದರು.ಸಾಧಕರಿಗೆ ಸನ್ಮಾನ

ಇದೇ ಸಂದರ್ಭ ಸಹಕಾರ ರತ್ನ ಪ್ರಶಸ್ತಿ ಪಡೆದ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಫೆರ್ಮಾಯಿ, ಪತ್ರಕರ್ತರಾದ ಶಶಿಧರ ಮಾಸ್ತಿಬೈಲು, ಮಹಮ್ಮದ್ ಷರೀಫ್, ನಝೀರ್ ಪೊಲ್ಯ, ಶ್ರೀಕಾಂತ ಹೆಮ್ಮಾಡಿ, ಜಸ್ಟಿನ್ ಎರೋಲ್ ಡಿಸಿಲ್ವಾ, ಸಮಾಜ ಸೇವಕರಾದ ಹಾಜಿ ಅಬ್ದುಲ್ಲಾ ಪರ್ಕಳ, ಆಯಿಷಾ ಭಾನು, ವಿಶು ಶೆಟ್ಟಿ ಅಂಬಲಪಾಡಿ, ಈಶ್ವರ್ ಮಲ್ಪೆ, ಮೇರಿ ಶ್ರೇಷ್ಠ, ಕ್ಲಾರೆನ್ಸ್ ಡಿಸೋಜಾ, ಹೆನ್ರಿ ಸಾಂತುಮಾಯೆರ್, ರಾಜಕೀಯ ಕ್ಷೇತ್ರದ್ಲಲಿ ಅರುಣ್ ಫೆರ್ನಾಂಡಿಸ್, ವಿಲ್ಸನ್ ರೊಡ್ರಿಗಸ್, ಮೇರಿ ಮಸ್ಕರೇನ್ಹಸ್, ಜೋನ್ ಸಿಕ್ವೇರಾ ಹಾಗೂ ಕೆಥೊಲಿಕ್ ಸಭಾ ಮಂಗಳೂರು ಪ್ರದೇಶದ ಅಧ್ಯಕ್ಷರನ್ನು ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾಸ್‌ ಸಿಗದಿರುವುದಕ್ಕೆ ಸರ್ಕಾರದವಿರುದ್ಧ ಆಟೋ ಚಾಲಕರ ಆಕ್ರೋಶ
ಏಕಬಳಕೆ ಪ್ಲಾಸ್ಟಿಕ್ ಬಳಸಿದರೆ5 ಲಕ್ಷ ದಂಡ: ಜಿಬಿಎ ಎಚ್ಚರಿಕೆ