ಕ್ರಿಸ್‌ಮಸ್‌ ಹಬ್ಬದ ವೇಳೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ವಿಶೇಷ ರೈಲುಗಳ ಸಂಚಾರ

KannadaprabhaNewsNetwork |  
Published : Dec 20, 2024, 12:47 AM ISTUpdated : Dec 20, 2024, 01:01 PM IST
ಟ್ರೈನ್‌ | Kannada Prabha

ಸಾರಾಂಶ

ಕ್ರಿಸ್‌ಮಸ್‌ ಹಬ್ಬದ ವೇಳೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ನೈಋತ್ಯ ರೈಲ್ವೆ ಮುಂದಾಗಿದ್ದು ವಿಶೇಷ ರೈಲುಗಳನ್ನು ಓಡಿಸಲು ಮುಂದಾಗಿದೆ. ಇದರಿಂದ ಹಬ್ಬಕ್ಕೆ ವಿವಿಧೆಡೆ ತೆರಳುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಹುಬ್ಬಳ್ಳಿ:  ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ಹುಬ್ಬಳ್ಳಿ-ಎಸ್ಎಂವಿಟಿ ಬೆಂಗಳೂರು ಮತ್ತು ವಾಸ್ಕೋ ಡಿ ಗಾಮಾ-ಎಸ್ಎಂವಿಟಿ ಬೆಂಗಳೂರು ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳನ್ನು ನೈಋತ್ಯ ರೈಲ್ವೆ ಓಡಿಸಲಿದೆ.

ಹುಬ್ಬಳ್ಳಿಯಿಂದ ಬೆಂಗಳೂರಿಗೆ ಒನ್-ವೇ ಎಕ್ಸ್‌ಪ್ರೆಸ್ ವಿಶೇಷ ರೈಲು (07305) ಡಿ. 20ರಂದು ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಬೆಳಗ್ಗೆ 8ಕ್ಕೆ ಹೊರಟು, ಅದೇ ದಿನ ಎಸ್ಎಂವಿಟಿ ಬೆಂಗಳೂರಿಗೆ ಸಂಜೆ 4.15ಕ್ಕೆ ತಲುಪಲಿದೆ. ಈ ರೈಲು ದಾವಣಗೆರೆ, ಬೀರೂರು, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ರೈಲು ಸಂಖ್ಯೆ 07306 ಎಸ್ಎಂವಿಟಿ ಬೆಂಗಳೂರು-ವಾಸ್ಕೋಡಿ ಗಾಮಾ ವಿಶೇಷ ಎಕ್ಸ್‌ಪ್ರೆಸ್ ರೈಲು ಡಿ. 20 ಮತ್ತು 22ರಂದು ಎಸ್ಎಂವಿಟಿ ಬೆಂಗಳೂರಿನಿಂದ ಸಂಜೆ 6.15ಕ್ಕೆ ಹೊರಟು, ಮರುದಿನ ವಾಸ್ಕೋಡಿ ಗಾಮಾ ನಿಲ್ದಾಣವನ್ನು ಬೆಳಗ್ಗೆ 8.45ಕ್ಕೆ ತಲುಪಲಿದೆ. ಮರಳಿ ಇದೇ ರೈಲು (07307) ಡಿ. 21 ಮತ್ತು 23ರಂದು ವಾಸ್ಕೋಡಿ ಗಾಮಾ ನಿಲ್ದಾಣದಿಂದ ಬೆಳಗ್ಗೆ 10ಕ್ಕೆ ಹೊರಟು, ಅದೇ ದಿನ ರಾತ್ರಿ 11.55ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ರೈಲು ಸಂಖ್ಯೆ 07308 ಎಸ್ಎಂವಿಟಿ ಬೆಂಗಳೂರು-ವಾಸ್ಕೋಡಿ ಗಾಮಾ ವಿಶೇಷ ಎಕ್ಸ್‌ಪ್ರೆಸ್‌ ರೈಲು ಡಿ. 24ರಂದು ಎಸ್ಎಂವಿಟಿ ಬೆಂಗಳೂರಿನಿಂದ ರಾತ್ರಿ 8.30ಕ್ಕೆ ಹೊರಟು, ಮರುದಿನ ಮಧ್ಯಾಹ್ನ 12 ಗಂಟೆಗೆ ವಾಸ್ಕೋಡಿ ಗಾಮಾ ನಿಲ್ದಾಣ ತಲುಪಲಿದೆ. ಮರಳಿ ರೈಲು ಸಂಖ್ಯೆ 07309 ವಾಸ್ಕೋಡಿ ಗಾಮಾ- ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ಡಿ. 29ರಂದು ವಾಸ್ಕೋಡಿ ಗಾಮಾದಿಂದ ಮಧ್ಯಾಹ್ನ 2.30ಕ್ಕೆ ಹೊರಟು, ಮರುದಿನ ಬೆಳಗ್ಗೆ 5.15ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ರೈಲು ಸಂಖ್ಯೆ 07310 ಎಸ್ಎಂವಿಟಿ ಬೆಂಗಳೂರು-ವಾಸ್ಕೋಡಿ ಗಾಮಾ ವಿಶೇಷ ಎಕ್ಸ್‌ಪ್ರೆಸ್‌ ರೈಲು ಡಿ. 30ರಂದು ಎಸ್ಎಂವಿಟಿ ಬೆಂಗಳೂರಿನಿಂದ ರಾತ್ರಿ 8.30ಕ್ಕೆ ಹೊರಟು, ಮರುದಿನ ಮಧ್ಯಾಹ್ನ 12 ಗಂಟೆಗೆ ವಾಸ್ಕೋಡಿ ಗಾಮಾ ನಿಲ್ದಾಣ ತಲುಪಲಿದೆ. ಪುನಃ ಇದೇ ರೈಲು (07311) ಜ. 1ರಂದು ವಾಸ್ಕೋಡಿ ಗಾಮಾದಿಂದ ರಾತ್ರಿ 10ಕ್ಕೆ ಹೊರಟು, ಮರುದಿನ ಮಧ್ಯಾಹ್ನ 12 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ರೈಲುಗಳ ಸಂಖ್ಯೆ 07306/07307, 07308/07309 ಮತ್ತು 07310/07311 ಈ ರೈಲುಗಳು ಎರಡೂ ಮಾರ್ಗಗಳಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಲೋಂಡಾ, ಕ್ಯಾಸಲ್ ರಾಕ್, ಕುಲೆಮ್, ಸಾನ್ವೊರ್ಡೆಮ್ ಮತ್ತು ಮಡಗಾಂವ್ ನಿಲ್ದಾಣಗಳಲ್ಲಿ ನಿಲ್ಲಲಿವೆ.

ಈ ರೈಲುಗಳಲ್ಲಿ 2 ಎಸಿ ಟು ಟೈರ್ ಬೋಗಿಗಳು, 15 ಎಸಿ ತ್ರಿ ಟೈರ್ ಬೋಗಿಗಳು ಮತ್ತು 2 ಲಗೇಜ್, ಜನರೇಟರ್, ಬ್ರೇಕ್ ವ್ಯಾನ್ ಗಳು ಇರಲಿವೆ. ಪ್ರಯಾಣಿಕರು ಅಧಿಕೃತ (www.enquiry.indianrail.gov.in) ವೆಬ್‌ಸೈಟ್ ಗೆ ಭೇಟಿ ನೀಡಿ, ಎನ್‌ಟಿಇಎಸ್‌ ಅಪ್ಲಿಕೇಶನ್ ಬಳಸಿ ಅಥವಾ 139 ಸಂಖ್ಯೆಗೆ ಡಯಲ್ ಮಾಡುವ ಮೂಲಕ ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ/ ನಿರ್ಗಮನ ಸಮಯ ಮತ್ತು ಇತರ ಮಾಹಿತಿ ಪಡೆದುಕೊಳ್ಳಬಹುದು ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ