ಕಳೆದ ಡಿಸೆಂಬರ್‌ನಲ್ಲಿಯೇ ಬೈರತಿ ಬಸವರಾಜ್ ವಿರುದ್ಧ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ. ಅವರು ಬೆಂಗಳೂರು ನಗರದಿಂದ ಹೊರಗೆ ತಪ್ಪಿಸಿಕೊಂಡು ಹೋಗಲು ಯಾವುದೇ ಅವಕಾಶವಿಲ್ಲ. ಬಸವರಾಜ್ ಸದ್ಯ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಆದರೆ ಪೊಲೀಸರು ಅವರ ಬೆನ್ನು ಬಿದ್ದಿದ್ದು, ಸದ್ಯದಲ್ಲಿಯೇ ಅವರನ್ನು ಬಂಧಿಸುತ್ತಾರೆ. ಬಂಧಿಸಿ ನಂತರ ಅವರ ಹೇಳಿಕೆ ದಾಖಲಿಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯ ವಿವರ:
2025 ರ ಜುಲೈ 15 ರ ರಾತ್ರಿ ಹಲಸೂರು ಕೆರೆ ಸಮೀಪದ ಮನೆಯ ಬಳಿ ರೌಡಿಶೀಟರ್ ಬಿಕ್ಲು ಶಿವನನ್ನು ದುಷ್ಕರ್ಮಿಗಳ ಗ್ಯಾಂಗ್ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿತ್ತು. ಶಿವನ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಬಸವರಾಜ್ ಅವರು ಐದನೇ ಆರೋಪಿಯಾಗಿದ್ದಾರೆ. ಆರೋಪಿಗಳ ವಿರುದ್ಧ ಪೊಲೀಸರು, ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ (ಕೋಕಾ) ಕಾಯ್ದೆಯಡಿ ಕ್ರಮ ಜರುಗಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.