ಧಾರವಾಡ:
ಮುಂದಿನ ದಿನಗಳಲ್ಲಿ ತಮ್ಮ ನೆಚ್ಚಿನ ಜಿಲ್ಲೆ ಧಾರವಾಡದಲ್ಲಿ ಸಿನಿಮಾಗಳನ್ನು ನಿರ್ದೇಶಿಸುವ ತಮ್ಮ ಹಂಬಲ ವ್ಯಕ್ತಪಡಿಸಿದ ಹೆಬ್ಲೀಕರ, ಸಿನಿಮಾ ಕೇವಲ ಮನರಂಜನೆಯ ಮಾಧ್ಯಮವಲ್ಲ, ಅದು ಒಂದು ಕಾಲಘಟ್ಟದ ಚರಿತ್ರೆಯನ್ನು ದಾಖಲಿಸುವುದರ ಜತೆಗೆ ಸಮಾಜದ ಸಾಂಸ್ಕೃತಿಕ ನೆಲೆ ಹಾಗೂ ಇತಿಹಾಸವನ್ನು ಪ್ರತಿಬಿಂಬಿಸುವ ಪ್ರಬಲ ಮಾಧ್ಯಮವಾಗಿದೆ ಎಂದರು.
ಚಿತ್ರೋತ್ಸವಕ್ಕೆ ಚಾಲನೆ ನೀಡಿದ ಸಂಸದ ಜಗದೀಶ ಶೆಟ್ಟರ್, ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಪ್ರತಿಭಾವಂತ ಕಲಾವಿದರಿದ್ದು, ಅವರನ್ನು ಗುರುತಿಸಿ ಪ್ರೋತ್ಸಾಹಿಸಲು ಈ ಭಾಗದಲ್ಲಿ ‘ಫಿಲ್ಮ್ ಸಿಟಿ’ ನಿರ್ಮಾಣದ ಅಗತ್ಯವಿದೆ. ಸ್ಥಳೀಯ ಪ್ರತಿಭೆಗಳಿಗೆ ಸೂಕ್ತ ವೇದಿಕೆ ದೊರೆತರೆ ಉತ್ತರ ಕರ್ನಾಟಕವೂ ಚಿತ್ರರಂಗದ ಪ್ರಮುಖ ಕೇಂದ್ರವಾಗಿ ಬೆಳೆಯುವ ಸಾಮರ್ಥ್ಯ ಹೊಂದಿದೆ ಎಂದು ಆಶಯ ವ್ಯಕ್ತಪಡಿಸಿದರು.ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮಾತನಾಡಿ, ಸಿನಿಮಾ ನೈಜ ಜೀವನದ ಪ್ರತಿಬಿಂಬ. ಉತ್ತಮ ಸಿನಿಮಾಗಳು ಸಮಾಜದಲ್ಲಿ ಸನ್ಮಾರ್ಗದಲ್ಲಿ ನಡೆಯಲು ಪ್ರೇರಣೆ ನೀಡುತ್ತವೆ. ಸಿನಿಮಾ ಮತ್ತು ಸಮಾಜದ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸುವಂತಹ ಪ್ರಯತ್ನಗಳಿಗೆ ಪ್ರೋತ್ಸಾಹ ನೀಡಬೇಕಾದ ಅಗತ್ಯವಿದೆ ಎಂದರು.
ಚಿತ್ರೋತ್ಸವದ ವಿವಿಧ ವಿಭಾಗಗಳಲ್ಲಿ ಜ್ಯೂರಿಗಳು ಆಯ್ಕೆ ಮಾಡಿದ ಅತ್ಯುತ್ತಮ ಕೃತಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅತ್ಯುತ್ತಮ ಕಿರುಚಿತ್ರ ವಿಭಾಗದಲ್ಲಿ ‘ಸಮಯ’, ಅತ್ಯುತ್ತಮ ಚಲನಚಿತ್ರ ವಿಭಾಗದಲ್ಲಿ ‘ರತ್ನಗರ್ಭ’, ಅತ್ಯುತ್ತಮ ಆಲ್ಬಂ ಸಾಂಗ್ ವಿಭಾಗದಲ್ಲಿ ‘ಮನಸೇ ಮನಸೇ’ ಹಾಗೂ ಅತ್ಯುತ್ತಮ ಟೆಲಿಫಿಲ್ಮ್ ವಿಭಾಗದಲ್ಲಿ ‘ಶ್ರೀಗಂಧ’ ಪ್ರಶಸ್ತಿಗೆ ಪಾತ್ರವಾದವು.