ಇಂದರಪಾಶ ಚಿಂಚರಕಿ
2024ರ ಸಾರ್ವತ್ರಿಕ 18ನೇ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಮಸ್ಕಿ-59 ಕ್ಷೇತ್ರದಲ್ಲಿ ಶೇಕಡಾವಾರು ಮತದಾನ ಪ್ರಮಾಣ ಹೆಚ್ಚಿಸಲು ಮತ್ತು ಮತದಾರರಲ್ಲಿ ನೈತಿಕ ಮತದಾನದ ಕುರಿತು ಶಿಕ್ಷಣ ಹಾಗೂ ಜಾಗೃತಿ ಮೂಡಿಸಲು ಚುನಾವಣಾ ಆಯೋಗ ವಿವಿಧ ರೀತಿಯಲ್ಲಿ ಜಾಗೃತಿ ಮೂಡಿಸಲು ಮುಂದಾಗಿದೆ.
ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಸ್ಕಿ ವಿಧಾನಸಾಭಾ ಕ್ಷೇತ್ರದ ಮಸ್ಕಿ ಪಟ್ಟಣ, ಗ್ರಾಮೀಣ ಭಾಗದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಹೋಲಿಕೆ ಮಾಡಿದರೆ ಪಟ್ಟಣ ಪ್ರದೇಶಗಳಲ್ಲಿಯೇ ಮತದಾನ ಪ್ರಮಾಣ ಕಡಿಮೆಯಾಗಿರುವುದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೇಕಡವಾರು ಮತದಾನ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗದ ಸೂಚನೆಯಂತೆ ಇಲ್ಲಿನ ಅಧಿಕಾರಿಗಳು ಅತ್ಯಂತ ಕಡಿಮೆ ಮತದಾನ ಆಗಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮತದಾನ ಹೆಚ್ಚಿಸಲು ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸುವ ಸ್ಟಿಕ್ಕರ್‌ಗಳನ್ನು ಹಚ್ಚುವುದು, ಮೆಹಂದಿ ಕಾರ್ಯಕ್ರಮ ಹಾಗೂ ಸೈಕಲ್ ಜಾಥಾ, ಮದುವೆ ಸಮಾರಂಭಗಳಲ್ಲಿ ಜನಸಾಮಾನ್ಯರಿಗೆ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು, ಹಾಡು, ಬೀದಿ ನಾಟಕ, ಕಿರು ನಾಟಕ ಹಾಗೂ ನರೇಗಾ ಕೂಲಿ ಕಾರ್ಮಿಕರಲ್ಲಿಯೂ ಮತದಾನ ಜಾಗೃತಿ ಮೂಡಿಸಲು ಚುನಾವಣಾ ಅಧಿಕಾರಿಗಳು ಮುಂದಾಗಿದ್ದಾರೆ.ಸಾಮಾಜಿಕ ಜಾಲತಾಣಗಳ ಮೊರೆ
ಮತದಾನ ಪ್ರಮಾಣ:
ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ಶೇಕಡ 62ರಷ್ಟು ಮತದಾನವಾಗಿತ್ತು. ಈ ಬಾರಿಯ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಅಧಿಕಾರಿಗಳು ಇನ್ನಿಲ್ಲದ ಕಸರತ್ತು ನಡೆಸಿದ್ದು, ಮತದಾರ ಪ್ರಭು ಹೇಗೆ ಸ್ಪಂದಿಸುತ್ತಾನೆಂದು ಕಾದು ನೋಡಬೇಕಿದೆ.