ಕನ್ನಡಪ್ರಭ ವಾರ್ತೆ ಕುಂದಾಪುರ
ಸಿಐಎಸ್‌ಎಫ್ ನೇತೃತ್ವದಲ್ಲಿ ‘ಸುರಕ್ಷಿತ ತಟ, ಸಮೃದ್ಧ ಭಾರತ’ ಪರಿಕಲ್ಪನೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಗುಜರಾತ್‌ನಿಂದ ಕನ್ಯಾಕುಮಾರಿ ತನಕ ಆರಂಭಗೊಂಡಿರುವ ಸೈಕಲ್ ಜಾಥಾ ಬುಧವಾರ ಕುಂದಾಪುರಕ್ಕೆ ಆಗಮಿಸಿದ ಬಳಿಕ ಸೇನಾಭಿಮಾನಿ ಬಳಗದ ವತಿಯಿಂದ ಇಲ್ಲಿನ ಮೊಗವೀರ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು.ಕರಾವಳಿ ಮಾತ್ರವಲ್ಲದೆ ಇತರೆ ಭಾಗಗಳಲ್ಲಿ ಏನೇ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವುದು ಗಮನಕ್ಕೆ ಬಂದ ಕೂಡಲೇ ತಕ್ಷಣವೇ ತಂದೆ-ತಾಯಿ ಅಥವಾ ಪೊಲೀಸ್ ಇಲಾಖೆಗೆ ಮಾಹಿತಿ ಮುಟ್ಟಿಸಬೇಕು. ಯುವ ಜನತೆ ಯಾವುದೇ ಕಾರಣಕ್ಕೂ ಮಾದಕ ವ್ಯಸನಗಳಿಗೆ ಬಲಿಯಾಗಬಾರದು ಎಂದರು.
ರ‍್ಯಾಲಿಯಲ್ಲಿ ಸುಮಾರು 125 ಸೈಕ್ಲಿಸ್ಟ್‌ಗಳು ಭಾಗಿಯಾಗಿದ್ದು, ಪಶ್ಚಿಮ ಭಾರತವನ್ನು ಕೇಂದ್ರೀಕರಿಸಿಕೊಂಡು ಗುಜರಾತ್, ದೀಯು ದಾಮನ್, ಮಹಾರಾಷ್ಟ್ರ, ಗೋವಾ ಸಂಚರಿಸಿ ಇದೀಗ ಕರ್ನಾಟಕಕ್ಕೆ ಬಂದಿದ್ದೇವೆ. ಇಲ್ಲಿಂದ ಕೇರಳ ಮಾರ್ಗವಾಗಿ 31 ರೊಳಗೆ ಕನ್ಯಾಕುಮಾರಿ ತಲುಪಲಿದ್ದೇವೆ. ನಮ್ಮ ಇನ್ನೊಂದು ತಂಡ ಪಶ್ಚಿಮ ಬಂಗಾಳ, ಒಡಿಶಾ, ಆಂಧ್ರ ಪ್ರದೇಶ, ಪುದುಚೇರಿ ಮಾರ್ಗವಾಗಿ ಕನ್ಯಾಕುಮಾರಿಗೆ ಮಾ.31 ರಂದು ತಲುಪಲಿದೆ ಎಂದರು.ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ದೇಶದ ಐಕ್ಯತೆ, ಭದ್ರತೆಯ ದ್ಯೇಯವನ್ನಿಟ್ಟುಕೊಂಡು ಗುಜರಾತಿನಿಂದ ಕನ್ಯಾಕುಮಾರಿಯ ತನಕ ಕ್ರಮಿಸಿ ಸಿಐಎಸ್‌ಎಫ್ ಯೋಧರು ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.
ಸೈಕಲ್ ರ‍್ಯಾಲಿಯ ಮೂಲಕ ಕುಂದಾಪುರಕ್ಕೆ ಆಗಮಿಸಿದ ಯೋಧರನ್ನು ಕುಂದಾಪುರದ ಸಂಗಮ್ ಜಂಕ್ಷನ್‌ನಲ್ಲಿ ಸ್ವಾಗತಿದ ಬಳಿಕ, ಭಂಡಾರ್ಕಾರ್ಸ್ ಹಾಗೂ ಬಿ.ಬಿ ಹೆಗ್ಡೆ ಕಾಲೇಜಿನ ಎನ್‌ಸಿಸಿ ವಿದ್ಯಾರ್ಥಿಗಳು ದೇಶಾಭಿಮಾನದ ಘೋಷಣೆಗಳನ್ನು ಕೂಗುತ್ತಾ ಚಂಡೆವಾದ್ಯಗಳ ಭವ್ಯ ಮೆರವಣಿಗೆಯೊಂದಿಗೆ ಚಿಕನ್‌ಸಾಲ್ ರಸ್ತೆಯ ಮಾರ್ಗವಾಗಿ ಮೊಗವೀರ ಭವನಕ್ಕೆ ಬರಮಾಡಿಕೊಂಡರು.