ಕಾನೂನು ಗೌರವಿಸಿದವರನ್ನು ಪೊಲೀಸ್ ಇಲಾಖೆ ಗೌರವದಿಂದ ಕಾಣುತ್ತದೆ ತಿಪಟೂರು ಉಪವಿಭಾಗ ವ್ಯಾಪ್ತಿಯಲ್ಲಿ ಎರಡು ವರ್ಷಗಳಿಂದ ಸಲ್ಲಿಸಿದ ಸೇವೆ ತೃಪ್ತಿ ನೀಡಿದ್ದು ಉಪವಿಭಾಗದ ಜನರು ಹಾಗೂ ಸಂಘ ಸಂಸ್ಥೆಗಳು ಉತ್ತಮ ಸಹಕಾರ ನೀಡಿದ್ದಾರೆಂದು ತಿಪಟೂರು ಉಪವಿಭಾಗದಲ್ಲಿ ಡಿವೈಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ವಿನಾಯಕ ಶೆಟ್ಟಿಗೇರಿ ತಿಳಿಸಿದರು
ಕನ್ನಡಪ್ರಭ ವಾರ್ತೆ ತಿಪಟೂರು
ಕಾನೂನು ಗೌರವಿಸಿದವರನ್ನು ಪೊಲೀಸ್ ಇಲಾಖೆ ಗೌರವದಿಂದ ಕಾಣುತ್ತದೆ ತಿಪಟೂರು ಉಪವಿಭಾಗ ವ್ಯಾಪ್ತಿಯಲ್ಲಿ ಎರಡು ವರ್ಷಗಳಿಂದ ಸಲ್ಲಿಸಿದ ಸೇವೆ ತೃಪ್ತಿ ನೀಡಿದ್ದು ಉಪವಿಭಾಗದ ಜನರು ಹಾಗೂ ಸಂಘ ಸಂಸ್ಥೆಗಳು ಉತ್ತಮ ಸಹಕಾರ ನೀಡಿದ್ದಾರೆಂದು ತಿಪಟೂರು ಉಪವಿಭಾಗದಲ್ಲಿ ಡಿವೈಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ವಿನಾಯಕ ಶೆಟ್ಟಿಗೇರಿ ತಿಳಿಸಿದರು. ನಗರದ ಸರ್ಕಾರಿ ನೌಕರರ ಭವನದಲ್ಲಿ ತಿಪಟೂರು ಉಪವಿಭಾಗ ಪೊಲೀಸ್ ಇಲಾಖೆ ಹಾಗೂ ಸಂಘ ಸಂಸ್ಥೆಗಳಿಂದ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಯಾವುದೇ ಕಾನೂನು ವಿರೋಧಿ ಕೃತ್ಯಗಳಿಗೆ ಪ್ರೋತ್ಸಾಹ ನೀಡುವುದಿಲ್ಲ. ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡಲು, ಸಮಾಜಘಾತಕ ಕೃತ್ಯಗಳನ್ನ ಹತೋಟಿಯಲ್ಲಿಡಲು ನಾಗರೀಕರ ಸಹಕಾರ ಅಗತ್ಯ. ಈ ನಿಟ್ಟಿನಲ್ಲಿ ನಾಗರೀಕರು ಇಲಾಖೆಯೊಂದಿಗೆ ಉತ್ತಮವಾಗಿ ಸ್ಪಂದಿಸಿದ್ದು ಇಲಾಖೆ ಸಿಬ್ಬಂದಿ ಹಾಗೂ ನಾಗರೀಕರ ಸಹಕಾರ ಮರೆಯಲು ಸಾಧ್ಯವಿಲ್ಲ ಎಂದರು. ಕಾರ್ಯಕ್ರಮ ಉದ್ಘಾಟಿಸಿದ ತಿಪಟೂರು ಉಪವಿಭಾಗದ ನೂತನ ಡಿವೈಎಸ್ಪಿ ಯಶ್‌ಕುಮಾರ್ ಶರ್ಮ ಮಾತನಾಡಿ ತಿಪಟೂರು ಉಪವಿಭಾಗದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲರ ಸಹಕಾರ ಅಗತ್ಯ. ನಮ್ಮ ಕಾನೂನು ವ್ಯಾಪ್ತಿಯಲ್ಲಿ ಯಾವುದೇ ಅಹಿತರಕರ ಘಟನೆಗಳು ನಡೆಯದಂತೆ ಕೆಲಸ ಮಾಡಬೇಕು. ಪೊಲೀಸ್ ವ್ಯವಸ್ಥೆಗೆ ನಾಗರೀಕರ ಸಮಾಜದ ಸಹಕಾರ ಅಗತ್ಯವಿದ್ದು ಈ ನಿಟ್ಟಿನಲ್ಲಿ ಕೆಲಸ ಮಾಡೋಣ ಎಂದರು. ಹೊನ್ನವಳ್ಳಿ ಪೊಲೀಸ್ ಸಬ್‌ಇನ್ಸ್‌ಫೆಕ್ಟರ್ ರಾಜೇಶ್ ಮಾತನಾಡಿ ವಿನಾಯಕ ಶೆಟ್ಟಿಗೇರ್‌ರವರು ಸಿಬ್ಬಂದಿಗಳಿಗೆ ಉತ್ತಮ ಮಾರ್ಗದರ್ಶನ ನೀಡಿ ಉಪವಿಭಾಗ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಿದ್ದಾರೆ. ಇಲಾಖೆಯ ಸಿಬ್ಬಂದಿ ಹಾಗೂ ನಾಗರೀಕರೊಂದಿಗೆ ಆತ್ಮೀಯ ಒಡನಾಡಿಯಾಗಿ ಕಾನೂನು ಸುವ್ಯವಸ್ಥೆ ಕಾಪಾಡಿದ್ದಾರೆ. ಅವರ ಮುಂದಿನ ವೃತ್ತಿ ಜೀವನ ಆಶದಾಯಕವಾಗಿರಲಿ ಎಂದು ಆಶಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ನಗರವೃತ್ತ ನಿರೀಕ್ಷಕ ವೆಂಕಟೇಶ್, ಗ್ರಾಮಾಂತರ ವೃತ್ತ ನಿರೀಕ್ಷಕ ಚಂದ್ರಶೇಖರ್, ಚಿಕ್ಕನಾಯ್ಕನಹಳ್ಳಿ ವೃತ್ತ ನಿರೀಕ್ಷಕ ನದಾಫ್, ಸಬ್‌ಇನ್ಸ್‌ಫೆಕ್ಟರ್ ದ್ರಾಕ್ಷಾಯಿಣಿ ಮತ್ತಿತರರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.