ನಾಗರಿಕರಿಗೆ ಸಂವಿಧಾನದ ಅರಿವು, ತಿಳಿವಳಿಕೆ ಅವಶ್ಯ: ಸತೀಶ್ ಕಾಜೂರು

KannadaprabhaNewsNetwork |  
Published : Jan 30, 2026, 02:30 AM IST
 ಹೇಳಿದ್ದಾರೆ. | Kannada Prabha

ಸಾರಾಂಶ

ದೇಶದ ಪ್ರತಿಯೊಬ್ಬ ನಾಗರಿಕರಿಗೆ ಸಂವಿಧಾನದ ಅರಿವು ಮತ್ತು ತಿಳುವಳಿಕೆ ಇರಬೇಕು. ಸಂವಿಧಾನ ಓದದವರು ದೇಶದ ಅಭಿವೃದ್ಧಿಯ ಹಿನ್ನಡೆಗೆ ಕಾರಣರಾಗುತ್ತಾರೆ ಎಂದು ಶಿಕ್ಷಕ ಸತೀಶ್ ಕಾಜೂರು ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪದೇಶದ ಪ್ರತಿಯೊಬ್ಬ ನಾಗರಿಕರಿಗೆ ಸಂವಿಧಾನದ ಅರಿವು ಮತ್ತು ತಿಳುವಳಿಕೆ ಇರಬೇಕು. ಸಂವಿಧಾನ ಓದದವರು ದೇಶದ ಅಭಿವೃದ್ಧಿಯ ಹಿನ್ನಡೆಗೆ ಕಾರಣರಾಗುತ್ತಾರೆ ಎಂದು ಶಿಕ್ಷಕ ಸತೀಶ್ ಕಾಜೂರು ಹೇಳಿದ್ದಾರೆ.ಸೋಮವಾರ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸುಂಟಿಕೊಪ್ಪ ಜಿ.ಯಂ.ಪಿ. ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದರು.ಪೊಲೀಸ್ ಇಲಾಖೆ ವತಿಯಿಂದ ರಾಷ್ಟ್ರಧ್ವಜಕ್ಕೆ ಗೌರವ ರಕ್ಷೆ ಸಮರ್ಪಿಸಿದರು. ಗ್ರಾ. ಪಂ. ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್ ಧ್ವಜಾರೋಹಣ ನೆರವೇರಿಸಿದರು. ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು.ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್ ಅಧ್ಯಕ್ಷತೆ ವಹಿಸಿದರು.ಪುಟಾಣಿ ವಿದ್ಯಾರ್ಥಿಗಳ ಭಾರತಾಂಬೆಗೆ ನಮನ ಸಲ್ಲಿಸುವ ಅಂಗಸಾಧನೆಯ ನೃತ್ಯ ಜನಮನ ರಂಜಿಸಿತು. ಹಾಗೂ ದೇಶಭಕ್ತಿ ಗೀತೆಗಳನ್ನು ಹಾಡುವ ಮೂಲಕ ವಿವಿಧ ಶಾಲೆಗಳ ಮಕ್ಕಳು ನೆರೆದಿದ್ದವರನ್ನು ಮನರಂಜಿಸಿದರು.ಮೈಸೂರು ವಿಶ್ವ ವಿದ್ಯಾಲಯದಿಂದ ಎಂ.ಎಡ್ ಪದವಿಯಲ್ಲಿ 5 ಚಿನ್ನದ ಪದಕ 1 ನಗದು ಬಹುಮಾನಕ್ಕೆ ಭಾಜನರಾದ ಬಿ.ಪಿ.ಕೃತಿಕಾ, ನಿವೃತ್ತಿ ಸ.ಮಾ.ಪ್ರಾ.ಮುಖ್ಯೋಪಾದ್ಯಾಯನಿ ಗೀತಾ ಪಾರ್ಥ, ಸಂ.ಅಂ.ಶಾಲೆಯ ನಿವೃತ್ತ ಶಿಕ್ಷಕಿ ಮುತ್ತಮ್ಮ, ಸ.ಪ.ಪೂ.ಕಾ.ನಿವೃತ್ತ ಉಪನ್ಯಾಸಕಿ ಪದ್ಮ, ಸುಂಟಿಕೊಪ್ಪ ಪಂಚಾಯಿತಿ ವಿಆರ್‌ಡಬ್ಲ್ಯು ಸಿಬ್ಬಂದಿ ಮಂದಣ್ಣ ಅವರನ್ನು ಸನ್ಮಾನಿಸಿ ಗೌರವಿಸಿದರು.ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಸದಸ್ಯರಾದ ಪಿ.ಎಫ್.ಸಬಾಸ್ಟೀನ್, ಶಬ್ಬೀರ್, ಆಲಿಕುಟ್ಟಿ, ರಫೀಕ್‌ಖಾನ್, ಪ್ರಸಾದ್‌ಕುಟ್ಟಪ್ಪ, ಸೋಮನಾಥ್, ವಸಂತಿ, ಶಾಂತಿ, ನಾಗರತ್ನ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್, ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಕೆ.ಇ.ಕರೀಂ, ರೋಸ್‌ಮೇರಿ ರಾಡ್ರಿಗಸ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಕಾರ್ಯದರ್ಶಿ ರಹೆನಾ ಫೈರೋಜ್, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀಲತಾ, ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಜೋವಿಟಾ ವಾಸ್, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಪಿ.ಇ.ನಂದ, ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ, ಪಂಚಾಯಿತಿ ಲೆಕ್ಕ ಪರಿಶೋಧಕಿ ಚಂದ್ರಕಲಾ, ಸಿಬ್ಬಂದಿ ಸಂಧ್ಯಾ, ಡಿ.ಎಂ. ಮಂಜುನಾಥ್, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯನಿ ಗೀತಾ, ವರ್ಕಶಾಫ್ ಮಾಲೀಕರ ಸಂಘದ ಅಧ್ಯಕ್ಷ ರಮೇಶ್, ಪ್ರಾ.ಕೃ.ಪ.ಸ.ಸಂ.ನಿರ್ದೇಶಕಿ ಲೀಲಾಮೇದಪ್ಪ, ನಿವೃತ್ತ ಶಿಕ್ಷಕಿ ಮುತ್ತಮ್ಮ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಪದಾಧಿಕಾರಿಗಳು, ಸ್ತ್ರೀಶಕ್ತಿ ಸಂಘದ ಸದಸ್ಯರು ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಿನೇದಿನೇ ಏರುತ್ತಿರುವ ಚಿನ್ನದ ದರ ಇಳಿಯಲಿ ಎಂದು ಭಕ್ತನ ಹರಕೆ !
₹70 ಲಕ್ಷ ವಿದ್ಯುತ್‌ ಬಿಲ್‌ ಬಾಕಿ: ಸಿದ್ಧಗಂಗಾ ಮಠಕ್ಕೆ ನೀರು ಬಂದ್‌!